ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶಕ್ಕೆ ಕೈಜೋಡಿಸಲು ಮನವಿ
Team Udayavani, Jun 5, 2020, 4:32 PM IST
ಸಾಂದರ್ಭಿಕ ಚಿತ್ರ
ಚಳ್ಳಕೆರೆ: ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭವಾಗಲು ಇನ್ನೂ ಕೇವಲ 20 ದಿನಗಳು ಮಾತ್ರ ಬಾಕಿ ಇದ್ದು, ವಿದ್ಯಾರ್ಥಿಗಳು ಪರೀಕ್ಷೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದ್ಧಾರೆ.
ತಾಲೂಕಿನ ಗಡಿಭಾಗದಲ್ಲಿರುವ ಪಾತಪ್ಪನಗುಡಿ, ಓಬಳಾಪುರ, ರೇಣುಕಾಪುರ, ಘಟಪರ್ತಿ, ಗೌರಸಮುದ್ರ, ತಳಕು, ಚಿತ್ರನಾಯಕನಹಳ್ಳಿ, ದೊಡ್ಡ ಉಳ್ಳಾರ್ತಿ ಗ್ರಾಮಗಳ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ವಿವಿಧ ವಿಷಯಗಳ ಬಗ್ಗೆ ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ವಿವಿಧ ವಿಷಯಗಳ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿದರು.
ಪರೀಕ್ಷಾ ಕೇಂದ್ರಗಳ ಮೂಲ ಸೌಕರ್ಯಗಳ ಬಗ್ಗೆಯೂ ಸಹ ಪರಿಶೀಲನೆ ನಡೆಸಿದರಲ್ಲದೆ, ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಿ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್, ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಶೌಚಾಲಯ ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಾಗ್ರತೆ ವಹಿಸಬೇಕು. ಈ ಬಾರಿಯ ಫಲಿತಾಂಶದ ಗುರಿ ಸಾಧಿಸಲು ಎಲ್ಲರೂ ಸಹಕರಿಸಬೇಕು ಎಂದರು. ಮುಖ್ಯೋಪಾಧ್ಯಾಯರಾದ ಪಾಲಯ್ಯ, ಕೆ. ಎ. ಮೂರ್ತಪ್ಪ, ಸುಬಾನ್ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.