ವಿವಿ ಸಾಗರ ನೀರು ಬಂದೇ ಬರುತ್ತೆ
ಚಳ್ಳಕೆರೆ-ಮೊಳಕಾಲ್ಮೂರು ಕ್ಷೇತ್ರಗಳ ಜನತೆಗೆ ಸಚಿವ ಶ್ರೀರಾಮುಲು ಅಭಯ
Team Udayavani, Apr 30, 2020, 11:43 AM IST
ಚಳ್ಳಕೆರೆ: ಹೊನ್ನೂರು ಗ್ರಾಮದಲ್ಲಿ ಸಚಿವ ಬಿ. ಶ್ರೀರಾಮುಲು ಸುದ್ದಿಗಾರರೊಂದಿಗೆ ಮಾತನಾಡಿದರು
ಚಳ್ಳಕೆರೆ: ಕಳೆದ ಹಲವಾರು ವರ್ಷಗಳಿಂದ ನಿರಂತರ ಬರಗಾಲ ಹಾಗೂ ನೀರಾವರಿ ಸೌಲಭ್ಯಗಳಿಂದ ವಂಚಿತವಾಗಿರುವ ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳ ನೀರಾವರಿ ಸೌಲಭ್ಯ ಒದಗಿಸುವ ಕುರಿತು ಮುಖ್ಯಮಂತ್ರಿಯವರಿಗೆ ವಿಶೇಷ ಮನವಿ ಮಾಡಿದ್ದೇನೆ. ಯಾವುದೇ ಹಂತದಲ್ಲೂ ಈ ಭಾಗದ ಜನರು ಆತಂಕಪಡುವ ಅಗತ್ಯ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಹೇಳಿದರು.
ಬುಧವಾರ ಮೊಳಕಾಲ್ಮೂರು ಕ್ಷೇತ್ರ ವ್ಯಾಪ್ತಿಯ ಹೊನ್ನೂರು ಗ್ರಾಮದ ಎಚ್.ವಿ. ಹನುಮಂತ ರೆಡ್ಡಿಯವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿ ಸಾಗರದಿಂದ ಚಳ್ಳಕೆರೆ ಕ್ಷೇತ್ರಕ್ಕೆ ನೀರು ಬಿಡುವ ಸರ್ಕಾರದ ಕ್ರಮವನ್ನು ಸಮರ್ಥಿಸಿದರು. ಮೊಳಕಾಲ್ಮೂರು ಕ್ಷೇತ್ರ ವ್ಯಾಪ್ತಿಯಲ್ಲೂ ಈ ನೀರು ಹರಿದು ಬರಲಿದ್ದು, ಎರಡೂ ಕ್ಷೇತ್ರಗಳ ಜನತೆಗೆ ಇದರಿಂದ ಅನುಕೂಲವಾಗುತ್ತದೆ. ಈ ಭಾಗದ ಲಕ್ಷಾಂತರ ರೈತರ ಸಾವಿರಾರು ಎಕರೆ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ದೊರೆತು ಬರಗಾಲ ಶಾಪದಿಂದ ಈ ಪ್ರದೇಶಗಳು ಮುಕ್ತವಾಗಬೇಕೆಂಬುವುದೇ ನನ್ನ ಉದ್ದೇಶ ಎಂದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವಿವಿ ಸಾಗರದ ನೀರನ್ನು ಈ ಕ್ಷೇತ್ರಕ್ಕೆ ನೀಡಲು ಆದೇಶ ನೀಡಿದೆ. ಆದರೆ. ಸಂಬಂಧಪಟ್ಟ ಇಲಾಖೆಯ ಎಲ್ಲಾ ಹಿರಿಯ ಅಧಿಕಾರಿಗಳಿಗೆ, ಜಿಲ್ಲಾಧಿಕಾರಿಗಳಿಗೂ ಆದೇಶ ನೀಡಿದ್ದಾರೆ. ಆದರೆ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಚಳ್ಳಕೆರೆ ಕ್ಷೇತ್ರಕ್ಕೆ ನೀರು ಕೊಡುವ ವಿಚಾರದಲ್ಲಿ ಆತುರದ ನಿರ್ಧಾರ ಕೈಗೊಂಡಿದ್ದಾರೆ. ನೀರು ನಿಲುಗಡೆಗೆ ಯತ್ನಿಸಿದ ಬಗ್ಗೆ ಮಾಹಿತಿ ಬಂದ ಕೂಡಲೇ ಮುಖ್ಯಮಂತ್ರಿಗಳನ್ನು ಹಾಗೂ ಜಲಸಂಪನ್ಮೂಲ ಸಚಿವರನ್ನು ಸಂಪರ್ಕಿಸಿ ಯಾವುದೇ ಕಾರಣಕ್ಕೂ ಚಳ್ಳಕೆರೆ, ಮೊಳಕಾಲ್ಮೂರು ಕ್ಷೇತ್ರಕ್ಕೆ ನೀರು ನೀಡಬೇಕೆಂದು ಒತ್ತಾಯಿಸಿದ್ದೇನೆ. ಈ ಬಗ್ಗೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರೊಂದಿಗೂ ಮಾತನಾಡಿದ್ದೇನೆ. ಶಾಸಕರ ರಘುಮೂರ್ತಿ ಅವರೊಂದಿಗೂ ಈ ಬಗ್ಗೆ ಚರ್ಚಿಸಿದ್ದು, ನೀರು ಹರಿಸುವುದಾಗಿ ಅವರಿಗೂ ಭರವಸೆ ನೀಡಿದ್ದೇನೆ ಎಂದು ಹೇಳಿದರು.
ಅತ್ಯಂತ ಹಿಂದುಳಿದ ಪ್ರದೇಶವಾದ ಮೊಳಕಾಲ್ಮೂರು ಕ್ಷೇತ್ರ ವ್ಯಾಪ್ತಿಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ಈ ಭಾಗದ 74 ಕೆರೆಗಳಿಗೆ ನೀರು ತುಂಬಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ತುಂಗಾ ಹಿನ್ನೀರು ಯೋಜನೆ ಪ್ರಾರಂಭವಾಗಲಿದ್ದು, ಸರ್ಕಾರ ನೀರಾವರಿ ಸೌಲಭ್ಯ ನೀಡುವ ವಿಚಾರದಲ್ಲಿ ಮುಕ್ತವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.