ಆಂಜನೇಯ ತಂದ ಅನುದಾನದಲ್ಲಿ ಚಂದ್ರಪ್ಪ ಭೂಮಿಪೂಜೆ
Team Udayavani, Feb 23, 2019, 11:01 AM IST
ಚಿತ್ರದುರ್ಗ: ಮಾಜಿ ಸಚಿವ ಎಚ್. ಆಂಜನೇಯ ಅವರ ಆಡಳಿತಾವಧಿಯಲ್ಲಿ ಮಂಜೂರಾಗಿರುವ ಎಲ್ಲ ಕಾಮಗಾರಿಗಳನ್ನು ಕೂಡಲೇ ಆರಂಭಿಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯ ಶಿವಮೂರ್ತಿ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಆಂಜನೇಯರವರು ಗಂಗಾಕಲ್ಯಾಣ, ಕಿರು ಸಾಲ ಯೋಜನೆ ಸೇರಿದಂತೆ ಮತ್ತಿತರ ಯೋಜನೆಗಳಿಗೆ ನೂರಾರು ಕೋಟಿ ರೂ.ಗಳನ್ನು ಹೊಳಲ್ಕೆರೆ ಕ್ಷೇತ್ರಕ್ಕೆ ತಂದು ಅಭಿವೃದ್ಧಿಯ ಹೊಳೆ ಹರಿಸಿದ್ದರು. ಆದರೆ ಬಹುತೇಕ ಕಾಮಗಾರಿಗಳನ್ನು ಆರಂಭಿಸದೆ ಅಡ್ಡಿಪಡಿಸಲಾಗುತ್ತಿದೆ. ಕ್ಷೇತ್ರದ ಮತ್ತು ಜನತೆಯ ಹಿತದೃಷ್ಟಿಯಿಂದ ಅಭಿವೃದ್ಧಿ ಕಾಮಗಾರಿ ಆರಂಭಿಸಬೇಕು. ಬಡವರಿಗಾಗಿ ಮಂಜೂರಾಗಿದ್ದ ಕೊಳವೆಬಾವಿ ಕೊರೆಸಬೇಕು ಎಂದರು.
ಶಾಸಕ ಎಂ. ಚಂದ್ರಪ್ಪನವರು ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ 300 ಕೋಟಿ ರೂ. ಅನುದಾನ ತಂದಿರುವುದಾಗಿ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಅವರು ಆ ಹಣವನ್ನು ತಂದಿರುವುದು ನಿಜವಾಗಿದ್ದರೆ ಎಷ್ಟನೇ ಸಾಲಿನಲ್ಲಿ ಅನುದಾನ ಬಂತು, ಯಾರು ತಂದರು, ಯಾವ ಯೋಜನೆಯಡಿ ಬಂದಿದೆ ಎಂಬ ಬಗ್ಗೆ ಜನರಿಗೆ ಸತ್ಯ ತಿಳಿಸಬೇಕು ಎಂದು ಆಗ್ರಹಿಸಿದರು.
ಎಸ್‌ಇಪಿ ಮತ್ತು ಟಿಎಸ್ ಪಿ ಅನುದಾನದಲ್ಲಿನ ಕಾಮಗಾರಿಗಳನ್ನು ಮಾಡಲು ಶಾಸಕ ಚಂದ್ರಪ್ಪ ಬಿಡುತ್ತಿಲ್ಲ. ಗಂಗಾಕಲ್ಯಾಣ ಯೋಜನೆ ಅಡಿ ಆಂಜನೇಯ ಅವರು ಮಂಜೂರು ಮಾಡಿಸಿದ್ದ ಕೊಳವೆಬಾವಿಗಳಲ್ಲಿ ಶೇ. 80 ರಿಂದ 90 ರಷ್ಟು ಕೊರೆಸಲಾಗಿದೆ. ಉಳಿದ ಕೊಳವೆಬಾವಿಗಳನ್ನೂ
ಕೊರೆಸಬೇಕು. ಗಂಗಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆಬಾವಿಗಳಿಗೆ ಮೋಟಾರ್, ಪಂಪ್‌ಸೆಟ್ ಕೊಡುತ್ತಿಲ್ಲ, ಉಳಿದ ಕೊಳವೆಬಾವಿ ಕೊರೆಸಲು ಶಾಸಕ ಚಂದ್ರಪ್ಪ ಬಿಡುತ್ತಿಲ್ಲ ಎಂದು ಆರೋಪಿಸಿದರು.
ವಿವಿಧ ಯೋಜನೆಗಳ ಅಡಿ ಕೋಟ್ಯಂತರ ರೂ. ಸಾಲ ಮಂಜೂರಾಗಿದ್ದರೂ ಅದನ್ನು ಬಿಡುಗಡೆ ಮಾಡದಂತೆ ಶಾಸಕರು ಅಧಿಕಾರಿಗಳಿಗೆ ತಾಕೀತು ಮಾಡುತ್ತಿದ್ದಾರೆ. ಸಾಸ್ವೆಹಳ್ಳಿ ಏತ ನೀರಾವರಿ, ಭದ್ರಾ ಮೇಲ್ದಂಡೆ ಯೋಜನೆ ತರಲು ಆಂಜನೇಯ ಸಾಕಷ್ಟು ಶ್ರಮಿಸಿದ್ದಾರೆ.
ಆಂಜನೇಯ ತಂದ ಅನುದಾನದಲ್ಲಿ ಶಾಸಕ ಚಂದ್ರಪ್ಪ ಭೂಮಿಪೂಜೆ ಮಾಡುತ್ತಿದ್ದಾರೆ. ಬಡವರಿಗೆ ಸಿಗಬೇಕಾದ ಸೌಲಭ್ಯಗಳನ್ನು ತಡೆ ಹಿಡಿದು ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮುಖಂಡರಾದ ಹನುಮಂತಪ್ಪ ದುರ್ಗ, ತಿಪ್ಪೇಸ್ವಾಮಿ, ಎಪಿಎಂಸಿ ಮಾಜಿ ಅಧ್ಯಕ್ಷ ಎಚ್.ಡಿ. ರಂಗಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ್‌ಕುಮಾರ್ ಯಾದವ್, ಪಾಡಿಗಟ್ಟೆ ಸುರೇಶ್ ಸುದ್ದಿಗೋಷ್ಠಿಯಲ್ಲಿದ್ದರು.
ಶಾಸಕ ಚಂದ್ರಪ್ಪರಿಂದ ಸರ್ವಾಧಿಕಾರಿ ಧೋರಣೆ ಶಾಸಕ ಎಂ. ಚಂದ್ರಪ್ಪನವರು ಕಳೆದ ವಿಧಾನಸಭಾ ಚುನಾವಣೆ ಘೋಷಣೆ ಮಾಡಿದ ನಂತರ ಎಷ್ಟು ಅನುದಾನವನ್ನು ಹೊಳಲ್ಕೆರೆ ಕ್ಷೇತ್ರಕ್ಕೆ ತಂದಿದ್ದಾರೆ ಎಂಬುನ್ನು ಜನರಿಗೆ ತಿಳಿಸಬೇಕು. ಮಾಜಿ ಸಚಿವ ಆಂಜನೇಯ ತಂದ ಹಣವನ್ನು ಬಳಸಿಕೊಂಡು ಸುಳ್ಳು ಪ್ರಚಾರ ಮಾಡಿಕೊಂಡು ಬಡವರಿಗೆ ಸಿಗಬೇಕಾದ ಸೌಲಭ್ಯಗಳನ್ನು ನೀಡದೆ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಒಂದೇ
ಒಂದು ರೂ. ಅನುದಾನವನ್ನು ಕ್ಷೇತ್ರಕ್ಕೆ ತಂದಿಲ್ಲ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಧು ಪಾಲೇಗೌಡ ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.