ಕೋವಿಡ್ ಉದಾಸೀನ ಸಲ್ಲ: ಚಂದ್ರಪ್ಪ
Team Udayavani, Apr 22, 2020, 6:08 PM IST
ಚಿಕ್ಕಜಾಜೂರು: ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿಕ್ಕಜಾಜೂರು: ಮುಂದುವರೆದ ರಾಷ್ಟ್ರಗಳಾದ ಅಮೇರಿಕಾ, ಫ್ರಾನ್ಸ್, ಇಟಲಿಯಲ್ಲಿ ಕೋವಿಡ್ ಸೋಂಕಿನ ಹತೋಟಿಯ ಉದಾಸೀನತೆಯಿಂದ ದಿನ ನಿತ್ಯ ಹೆಣಗಳ ರಾಶಿ ಬೀಳುತ್ತಿವೆ. ಅಂತಹ ತಪ್ಪನ್ನು ನಾವು ಮಾಡಬಾರದು. ಸಾಮಾಜಿಕ ಅಂತರ ಕಾಯ್ದುಕೊಂಡು ಸ್ವಚ್ಛತೆ ಬಗ್ಗೆ ಗಮನ ಹರಿಸಿ ಸರ್ಕಾರದ ನಿಯಮಗಳನ್ನು ಅನುಸರಿಸಿದರೆ ಮಹಾಮಾರಿ ಕೋವಿಡ್ ಅನ್ನು ಹಿಮ್ಮೆಟ್ಟಿಸುವಲ್ಲಿ ಯಶ ಗಳಿಸುತ್ತೇವೆ ಎಂದು ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಹೇಳಿದರು.
ಬಿ. ದುರ್ಗ ಹೋಬಳಿಯ ಅಂದನೂರು, ಮುತ್ತಗದೂರು, ಬಿ. ದುರ್ಗ, ಚಿಕ್ಕಜಾಜೂರು ಗ್ರಾಮ ಯತ್ ಕಚೇರಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು. ಗ್ರಾಮಗಳಲ್ಲಿ ಚರಂಡಿ, ರಸ್ತೆಗಳನ್ನು ಸ್ವತ್ಛವಾಗಿಟ್ಟುಕೊಳ್ಳಬೇಕು. ಸ್ವಚ್ಛತಾ ಕಾರ್ಮಿಕರಿಗೆ ಉತ್ತಮವಾದ ಮಾಸ್ಕ್, ಕರಗವಚ, ಕಾಲುಗಳಿಗೆ ಶೂಗಳನ್ನು ಕೊಡಿಸಬೇಕು ಎಂದು ಪಿಡಿಒಗಳಿಗೆ ಸೂಚಿಸಿದರು.
ಆರೋಗ್ಯ ಮತ್ತು ಪೊಲೀಸ್ ಇಲಾಖೆ ಅ ಧಿಕಾರಿಗಳು ಈ ಭಾಗದಲ್ಲಿರುವ ಎಲ್ಲಾ ಗ್ರಾಮಗಳ ಮೇಲೆ ನಿಗಾ ವಹಿಸಬೇಕು. ಅನಾವಶ್ಯಕವಾಗಿ ವಾಹನಗಳಲ್ಲಿ ಓಡಾಡುವವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುವಂತೆ ಚಿಕ್ಕಜಾಜೂರು ಗ್ರಾಪಂ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ತಿಳಿಸಿದರು. ಪಿಎಸ್‌ಐ ಮೋಹನ್‌ಕುಮಾರ್, ಬಿಜೆಪಿ ತಾಲೂಕು ಬಿಜೆಪಿ ಯುವ ಘಟಕದ ಅಧ್ಯಕ್ಷ ಸಿದ್ದೇಶ್, ಗ್ರಾಪಂ ಅಧ್ಯಕ್ಷ ಡಿ.ಸಿ. ಮೋಹನ್, ಡಾ| ಪ್ರದೀಪ್, ರವಿಕುಮಾರ್, ಪಿಡಿಒ ಪುನೀತ್, ಹಾಲೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.