ಚಿಕೂನ್ ಗುನ್ಯಾ-ಡೆಂಘೀ ಜಾಗೃತಿ ಕಾರ್ಯಕ್ರಮ
Team Udayavani, Aug 19, 2020, 6:59 PM IST
ಚಿತ್ರದುರ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಮದಕರಿಪುರದಲ್ಲಿ ಹಮ್ಮಿಕೊಂಡಿದ್ದ ಚಿಕೂನ್‌ಗುನ್ಯಾ ನಿಯಂತ್ರಣ ಹಾಗೂ ಡೆಂಘೀ ರೋಗಗಳ ಕುರಿತ ಜನ ಜಾಗೃತಿ ಕಾರ್ಯಕ್ರಮಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿ ಕಾರಿ ಟಿ. ಯೋಗೇಶ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕರು ನೀರಿನ ಸಂಗ್ರಹಣೆಯಲ್ಲಿ ಸೊಳ್ಳೆಮರಿಗಳು ಉತ್ಪತ್ತಿಯಾಗದಂತೆ ಚೆನ್ನಾಗಿ ತೊಟ್ಟಿಗಳನ್ನು, ಡ್ರಂಗಳನ್ನು ಉಜ್ಜಿ ತೊಳೆದು ನೀರನ್ನು ಮುಚ್ಚಿಟ್ಟುಕೊಳ್ಳಬೇಕು. ಮನೆಯ ಸುತ್ತಮುತ್ತಲಿನ ಘನತ್ಯಾಜ್ಯ ವಸ್ತುಗಳನ್ನು ವಿಲೇವಾರಿ ಮಾಡಬೇಕು ಎಂದು ಸಲಹೆ ನೀಡಿದರು.
ಉಪವಿಭಾಗಾಧಿಕಾರಿ ಪ್ರಸನ್ನ ಮಾತನಾಡಿ, ಆಶಾ ಕಾರ್ಯ ಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ಗ್ರಾಮ ಪಂಚಾಯತಿ ಸಿಬ್ಬಂದಿ ಪ್ರತಿ ದಿನ ಗ್ರಾಮಗಳಲ್ಲಿನ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು ಎಂದು ತಿಳಿಸಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಜಯಮ್ಮ ಮಾತನಾಡಿ, 2020-21 ನೇ ಸಾಲಿನಲ್ಲಿ ಡೆಂಘೀ 127 ಪ್ರಕರಣ ಹಾಗೂ ಚಿಕೂನ್‌ಗುನ್ಯಾ 54 ಪ್ರಕರಣಗಳು ಮತ್ತು ಮಲೇರಿಯಾ 2 ಪ್ರಕರಣಗಳು ಕಂಡುಬಂದಿವೆ ಎಂದರು. ಕೀಟ ತಜ್ಞೆ ನಂದಿನಿ ಕಡಿ ಮಾತನಾಡಿ, ಸೊಳ್ಳೆ ಮರಿಗಳು ಉತ್ಪತ್ತಿಯಾಗದಂತೆ ಚೆನ್ನಾಗಿ ಡ್ರಾಂಗಳನ್ನು, ತೊಟ್ಟಿಗಳನ್ನು ಉಜ್ಜಿ ತೊಳೆದು ನೀರನ್ನು ಮಚ್ಚಿಟ್ಟುಕೊಳ್ಳಬೇಕು. ಮಳೆಗಾಲ ಪ್ರಾರಂಭವಾಗಿದ್ದು ಮುಂದಿನ ದಿನಗಳಲ್ಲಿ ಸೊಳ್ಳೆಗಳ ಸಾಂದ್ರತೆ ಹೆಚ್ಚಾಗುವ ಸಂಭವವಿದ್ದು, ಡೆಂಘೀ ಪ್ರಕರಣ ಹೆಚ್ಚಾಗಬಹುದು. ಆದ್ದರಿಂದ ಸ್ವಚ್ಛತೆಗೆ ಆದ್ಯತೆ ನೀಡಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಟಿ. ಕೃಷ್ಣ ನಾಯ್ಕ, ಉಪ ಜಿಲ್ಲಾ ಅರೋಗ್ಯ ಶಿಕ್ಷಣಾಧಿಕಾರಿ ಎಚ್. ಎಸ್. ಆನಂದಪ್ಪ, ಪಿಡಿಒ ಸುಷ್ಮಾರಾಣಿ, ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ, ಹಿರಿಯ ಆರೋಗ್ಯ ಸಹಾಯಕ ರುದ್ರಮುನಿ ಹಾಗೂ ಕಿರಿಯ ಮಹಿಳಾ ಅರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.