ಬಾಲ್ಯವಿವಾಹ ನಿರ್ಮೂಲನೆಯಾಗಲಿ
Team Udayavani, Jan 28, 2019, 10:18 AM IST
ಮೊಳಕಾಲ್ಮೂರು: ಸಮಾಜದಲ್ಲಿನ ಅನಿಷ್ಠ ಪದ್ಧತಿಗಳಾದ ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಿ. ಹೊನ್ನಪ್ಪ ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ವಾರ್ತಾ ಮತ್ತು ಪ್ರಚಾರ ಇಲಾಖೆಯ ಗೀತ ಮತ್ತು ನಾಟಕ ವಿಭಾಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ಶಿಶು ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಇವುಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಬೇಟಿ ಬಚಾವೋ ಬೇಟಿ ಪಡಾವೋ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಾಲ್ಯವಿವಾಹ ಮಾಡುವುದರಿಂದ ಮಹಿಳೆಯರು ಅನಾರೋಗ್ಯಕ್ಕೀಡಾಗಿ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗಿ ಪ್ರಾಣ ಕಳೆದುಕೊಳ್ಳಬೇಕಾಗುತ್ತದೆ. ಮೂಢನಂಬಿಕೆ ಮತ್ತು ಕೆಟ್ಟ ಸಂಪ್ರದಾಯಗಳಿಂದ ಬಾಲ್ಯವಿವಾಹಗಳು ನಡೆದು ಸಮಾಜವನ್ನು ದುಸ್ಥಿತಿಗೆ ತಳ್ಳಲಾಗುತ್ತಿದೆ. ಅಜ್ಞಾನ ಮತ್ತು ಮೂಢ ನಂಬಿಕೆಗಳನ್ನು ನಿರ್ಮೂಲನೆ ಮಾಡಲು ಅನಕ್ಷರತೆಯೇ ಕಾರಣ. ಆದ್ದರಿಂದ ಪ್ರತಿಯೊಂದು ಮಗುವನ್ನೂ ಕಡ್ಡಾಯವಾಗಿ ಶಾಲೆಗೆ ಸೇರಿಸಿ ಉನ್ನತ ಶಿಕ್ಷಣ ನೀಡಬೇಕು. ಕುಟುಂಬದಲ್ಲಿನ ಬಡತನ ಇನ್ನಿತರ ಕಾರಣಗಳಿಂದ ಮಕ್ಕಳನ್ನು ಕೈಗಾರಿಕೆಗಳು, ಇಟ್ಟಿಗೆ ಭಟ್ಟಿ, ಹೋಟೆಲ್ ಹಾಗೂ ಇನ್ನಿತರ ಕೆಲಸಗಳಿಗೆ ಕಳುಹಿಸಬಾರದು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಕಡ್ಡಾಯವಾಗಿ ಶಾಲೆಗೆ ಸೇರಿಸಿ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಬೇಕೆಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಸಿದ್ದಾಪುರದ ಶ್ರೀ ಶಂಭುಲಿಂಗೇಶ್ವರ ಯಕ್ಷ ನಾಟ್ಯಮೇಳ ಕಲಾವಿದ ಸಂತೋಷ್ ಹೆಗಡೆ ಹಾಗೂ ಸಂಗಡಿಗರು ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ದುಷ್ಪರಿಣಾಮ ಬಿಂಬಿಸುವ ಯಕ್ಷಗಾನವನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಸ್ತ್ರೀಶಕ್ತಿ ಸಂಘಗಳ ಸದಸ್ಯೆಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.