ಹೊಳಲ್ಕೆರೆ ಶಾಸಕರ ಉದ್ಧಟತನದ ವರ್ತನೆ ಖಂಡನೀಯ: ಮಾಜಿ ಸಚಿವ ಆಂಜನೇಯ
Team Udayavani, May 18, 2021, 9:36 PM IST
ಚಿತ್ರದುರ್ಗ: ಕೊರೊನಾ ಸೋಂಕು ಎಲ್ಲೆಡೆ ವ್ಯಾಪಿಸುತ್ತಿರುವಾಗ ಶಾಸಕರಾದವರು ಜವಾಬ್ದಾರಿಯಿಂದ ವರ್ತಿಸಬೇಕು. ಆದರೆ ಜನ ಎಲ್ಲಾದರೂ ಸಾಯಲಿ ಬಿಡ್ರಿ, ಇಲ್ಲಿ ಆಸ್ಪತ್ರೆ ಮಾಡಲು ಬಿಡುವುದಿಲ್ಲ ಎಂದು ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಮಾತನಾಡಿರುವುದು ಸರಿಯಲ್ಲ ಎಂದು ಮಾಜಿ ಸಚಿವ ಎಚ್. ಆಂಜನೇಯ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆರೋಗ್ಯಾಧಿಕಾರಿಗಳು ತಪ್ಪು ಮಾಡಿದರೆ ಅಥವಾ ಜನಪ್ರತಿನಿ ಧಿಗಳ ಮಾತು ಕೇಳದಿದ್ದರೆ ಅವರ ಮೇಲೆ ಅಧಿ ಕಾರ ಚಲಾಯಿಸಿ ಸೌಲಭ್ಯ ಪಡೆಯುವುದು ಜನಪ್ರತಿನಿ ಗಳಾದವರ ಹೊಣೆಗಾರಿಕೆ. ಅದನ್ನು ಬಿಟ್ಟು ಹೊಳಲ್ಕೆರೆಯಲ್ಲಿ ಕೋವಿಡ್ ಆಸ್ಪತ್ರೆ ಮಾಡಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಜನ ಎಲ್ಲಿ¨ ಅಲ್ಲಿಯೇ ಸಾಯಲಿ ಬಿಡ್ರಿ ಎಂಬ ಉದ್ಧಟತನದ ವರ್ತನೆ ಜನರನ್ನು ಭೀತಿಗೊಳಿಸುತ್ತದೆ ಎಂದಿದ್ದಾರೆ.
ಬೆಳಗ್ಗೆಯಿಂದ ರಾತ್ರಿಯವರೆಗೂ ಕ್ಷೇತ್ರ ಸುತ್ತಾಟ ನಡೆಸಿ ಜನರ ಆರೋಗ್ಯ ವಿಚಾರಣೆ, ಗ್ರಾಮೀಣ ಮಟ್ಟದಲ್ಲಿ ಕೋವಿಡ್ ಕೇಂದ್ರ, ಆರೋಗ್ಯ ಕೇಂದ್ರಗಳ ವ್ಯವಸ್ಥೆ ಪರಿಶೀಲಿಸದ ಚಂದ್ರಪ್ಪ, ಉಸ್ತುವಾರಿ ಸಚಿವ ಶ್ರೀರಾಮುಲು ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆಯೂ ಆರೋಗ್ಯ ಸೇವೆಯನ್ನು ಕ್ಷೇತ್ರಕ್ಕೆ ಪಡೆದುಕೊಳ್ಳುವಲ್ಲಿ ವಿಫಲರಾಗಿ¨ªಾರೆ ಎಂದು ಆರೋಪಿಸಿದ್ದಾರೆ.
ಆರೋಗ್ಯಾಧಿ ಕಾರಿಗಳ ಮೇಲೆ ದಬ್ಟಾಳಿಕೆ ಮಾಡಿದ್ದು ಸರಿಯಲ್ಲ. ಆದ್ದರಿಂದ , ಆರೋಗ್ಯ ಇಲಾಖೆ ಶಾಸಕ ಎಂ. ಚಂದ್ರಪ್ಪ ಅವರನ್ನು ಮಾನಸಿಕ ವೈದ್ಯರ ಬಳಿ ಪರೀಕ್ಷೆ ಮಾಡಿಸಬೇಕು. ಅಲ್ಲಿಯವರೆಗೆ ಎಲ್ಲಿಯೂ ಹೊರಗಡೆ ಮಾತನಾಡದಂತೆ ನಿರ್ಬಂಧ ವಿಧಿಸಬೇಕು. ಇಲ್ಲದಿದ್ದರೆ ಜನರನ್ನು ಭೀತಿಗೆ ಒಳಪಡಿಸಿ ಜನರ ಜೀವದ ಜತೆ ಆಟವಾಡುತ್ತಾರೆ. ಆದ್ದರಿಂದ ಜನರ ಆರೋಗ್ಯ ದೃಷ್ಟಿಯಿಂದ ಕೂಡಲೇ ಅವರನ್ನು ಮಾನಸಿಕ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು ಎಂದು ಆಂಜನೇಯ ಒತ್ತಾಯಿಸಿದ್ದಾರೆ.=
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.