ಸರಗಳ್ಳರ ಬಂಧನ: 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ-ಸ್ವತ್ತು ವಶ
Team Udayavani, Jun 21, 2021, 9:39 PM IST
ಚಿತ್ರದುರ್ಗ: ನಗರದಲ್ಲಿ ಸರಗಳ್ಳತನ ಮಾಡುತ್ತಾ ಕೆಲ ದಿನಗಳಿಂದ ತಲೆನೋವಾಗಿದ್ದ ಆರೋಪಿಗಳ ಪೈಕಿ ಇಬ್ಬರನ್ನು ನಗರ ಠಾಣೆ ಪೊಲೀಸರು ಬಂಧಿ ಸಿದ್ದಾರೆ. ಇದೇ ವೇಳೆ ಕಳುವು ಮಾಡಿದ ಆಭರಣಗಳನ್ನು ಖರೀ ದಿ ಮಾಡುತ್ತಿದ್ದ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಜಿ. ರಾಧಿಕಾ ತಿಳಿಸಿದರು.
ಚಿತ್ರದುರ್ಗ ತಾಲೂಕಿನ ಮುದ್ದಾಪುರ ಗ್ರಾಮದ ಉಮೇಶ (22), ಉದಯ್ ಕುಮಾರ್ (21) ಹಾಗೂ ಕೀರ್ತಿ (22) ಸರಗಳ್ಳತನ ಮಾಡುತ್ತಿದ್ದ ಆರೋಪಿಗಳು. ಈ ಪೈಕಿ ಇಬ್ಬರನ್ನು ಬಂಧಿಸಲಾಗಿದ್ದು, ಕೀರ್ತಿ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಕಳ್ಳತನದ ಆಭರಣಗಳನ್ನು ಸ್ವೀಕರಿಸುತ್ತಿದ್ದ ಜ್ಯುವೆಲರ್ಸ್ ಮಾಲೀಕ ವಿನಯ್, ಮತ್ತೋರ್ವ ವ್ಯಕ್ತಿ ಯಶವಂತ್ ಎಂಬುವರನ್ನು ದಸ್ತಗಿರಿ ಮಾಡಲಾಗಿದೆ. ಬಂಧಿತರಿಂದ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಉಪಯೋಗಿಸುತ್ತಿದ್ದ ವಾಹನ ಸೇರಿದಂತೆ ಸುಮಾರು 10 ಲಕ್ಷ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ ಎಂದರು.
ಒಂಟಿ ಹೆಣ್ಣುಮಕ್ಕಳೇ ಟಾರ್ಗೆಟ್: ಮೂವರು ಆರೋಪಿತರು ಕಳೆದ ಆರು ತಿಂಗಳಿನಿಂದ ಚಿತ್ರದುರ್ಗ ನಗರ ಮತ್ತು ಹೊರವಲಯದ ಪ್ರಮುಖ ರಸ್ತೆಗಳಲ್ಲಿ ಬೈಕಿನಲ್ಲಿ ಒಂಟಿ ಪ್ರಯಾಣ ಮಾಡುವ ಹೆಣ್ಣುಮಕ್ಕಳನ್ನು ಟಾರ್ಗೆಟ್ ಮಾಡುತ್ತಿದ್ದರು. ಅವರನ್ನು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋಗಿ ಸರಗಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದರು. ಈ ಬಗ್ಗೆ ಚಿತ್ರದುರ್ಗ ನಗರ ಠಾಣೆಯಲ್ಲಿ 3, ಬಡಾವಣೆ ಠಾಣೆಯಲ್ಲಿ 2 ಹಾಗೂ ಗ್ರಾಮಾಂತರ ಠಾಣೆಯಲ್ಲಿ 3 ಸೇರಿದಂತೆ ಒಟ್ಟು 8 ಪ್ರಕರಣಗಳು ದಾಖಲಾಗಿವೆ. ಆರೋಪಿತರಿಂದ 200 ಗ್ರಾಂ ತೂಕದ ಬಂಗಾರದ ಸರ, ಕೈ ಚೈನುಗಳು ಹಾಗೂ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದರು.
ಪ್ರಮುಖ ಆರೋಪಿ ಉಮೇಶ ಪ್ರತಿಷ್ಟಿತ ಕುಟುಂಬದವನಾಗಿದ್ದು ಜೂಜಾಟಕ್ಕಾಗಿ ಸರಗಳ್ಳತನ ಆರಂಭಿಸಿದ್ದ. ಕೆಲವೊಮ್ಮೆ ಒಬ್ಬಂಟಿಗನಾಗಿ, ಮತ್ತೆ ಕೆಲವೊಮ್ಮೆ ತನ್ನ ಸ್ನೇಹಿತರಾದ ಉದಯ್‌ಕುಮಾರ್ ಮತ್ತು ಕೀರ್ತಿ ಜತೆಗೂಡಿ ಕಳ್ಳತನ ಮಾಡುತ್ತಿದ್ದ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಎಎಸ್ಪಿ ಮಹಾಲಿಂಗ ಬಿ. ನಂದಗಾವಿ, ಡಿವೈಎಸ್ಪಿ ಎಸ್. ಪಾಂಡುರಂಗ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.