ಮೊಳಕಾಲ್ಮೂರಲ್ಲಿ ಕರ್ಫ್ಯೂಗೆ ಉತ್ತಮ ಸ್ಪಂದನೆ
Team Udayavani, Apr 25, 2021, 6:46 PM IST
ಮೊಳಕಾಲ್ಮೂರು: ಪಟ್ಟಣ ಹಾಗೂ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಗೊಳಿಸಿದ್ದ ಕರ್ಫ್ಯೂನಿಂದ ಶನಿವಾರ ತಾಲೂಕು ಸ್ತಬ್ಧಗೊಂಡಿತ್ತು. ವೀಕೆಂಡ್ ಕರ್ಫ್ಯೂ ಮೊದಲ ದಿನದಂದು ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಕಿರಾಣಿ ಅಂಗಡಿಗಳು, ಔಷಧ ಅಂಗಡಿಗಳು, ಹಣ್ಣಿನ ಅಂಗಡಿಗಳು, ತರಕಾರಿ ಅಂಗಡಿಗಳು ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳ ಅಂಗಡಿಗಳಿಗೆ ಅವಕಾಶ ನೀಡಲಾಗಿತ್ತು. 10 ಗಂಟೆಯಾಗುತ್ತಿದ್ದಂತೆಯೇ ಪೊಲೀಸರು ತೆರೆದಿದ್ದ ಕಿರಾಣಿ ಅಂಗಡಿಗಳು, ಬೇಕರಿ, ಹಣ್ಣು, ತರಕಾರಿ ಅಂಗಡಿಗಳು ಸೇರಿದಂತೆ ಇನ್ನಿತರ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದರು.
ಪೊಲೀಸ್ ವೃತ್ತ ನಿರೀಕ್ಷಕ ಜಿ.ಬಿ. ಉಮೇಶ್, ಪಿಎಸ್‌ಐ ಎಂ.ಕೆ. ಬಸವರಾಜ್ ಮಾರ್ಗದರ್ಶನದಲ್ಲಿ ಎಎಸ್‌ಐ ಜಯಪ್ಪ, ಸಿಬ್ಬಂದಿಗಳಾದ ಭರತೇಶ್, ನರೇಶ್ ಕುಮಾರ್, ಬಾಷಾ, ಮಂಜುನಾಥ, ಹರೀಶ್, ಭೀಮಣ್ಣ, ಶ್ರೀಧರ್, ತಿಪ್ಪೇಸ್ವಾಮಿ ಪಟ್ಟಣ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅನವಶ್ಯಕವಾಗಿ ಹೊರಬಾರದಂತೆ ಮತ್ತು ಕೊರೊನಾ ನಿಯಮಗಳನ್ನು ಪಾಲಿಸಬೇಕೆಂದು ಜಾಗೃತಿ ಮೂಡಿಸಿದರು.
ತಾಲೂಕಿನ ರಾಂಪುರ ಉಪ ಪೊಲೀಸ್ ಠಾಣೆಯ ಪಿಎಸ್‌ಐ ಗುಡ್ಡಪ್ಪ ಹಾಗೂ ಸಿಬ್ಬಂದಿಗಳು, ಬಿ.ಜಿ. ಕೆರೆ ಉಪ ಠಾಣೆಯ ವ್ಯಾಪ್ತಿಯಲ್ಲಿಯೂ ಅನವಶ್ಯಕವಾಗಿ ಹೊರ ಬರುವವರ ವಿರುದ್ಧ ಕ್ರಮಕ್ಕೆ ಮುಂದಾದರು.
ಕೊರೊನಾ ಕರ್ಫ್ಯೂದಿಂದ ಬಸ್ ಸಂಚಾರವಿಲ್ಲದೆ ಪ್ರಯಾಣಿಕರು ಪರದಾಡುವಂತಾಯಿತು. ಸಕಾಲಕ್ಕೆ ಬಸ್‌ಗಳ ಸೌಲಭ್ಯವಿಲ್ಲದ ಕಾರಣ ಆಟೋಗಳಿಗೆ ಹೆಚ್ಚಿನ ಹಣ ನೀಡಿ ಪ್ರಯಾಣಿಕರು ಪ್ರಯಾಣಿಸುವಂತಾಯಿತು. ಕೊರೊನಾ ಕರ್ಫ್ಯೂದಿಂದ ಜನಸಾಮಾನ್ಯರು ಹಾಗೂ ಬೀದಿಬದಿ ವ್ಯಾಪಾರಿಗಳು ಸಂಕಷ್ಟ ಅನುಭವಿಸುವಂತಾಗಿ ತಾಲೂಕು ಸ್ತಬ್ಧವಾಗಿತ್ತು. ಮಾಸ್ಕ್ ಹಾಕದೆ ಹೊರಬರುವವರಿಗೆ ಪೊಲೀಸರು ದಂಡ ವಿಧಿ ಸಿ ಬಿಸಿ ಮುಟ್ಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.