ಪೊಲೀಸ್ ವಾಹನಕ್ಕೆ ಕಲ್ಲು ತೂರಾಟ
Team Udayavani, Apr 26, 2021, 5:06 PM IST
ಭರಮಸಾಗರ: ವಾರಾಂತ್ಯದ ಕರ್ಫ್ಯೂ ಮೊದಲ ದಿನವಾದ ಶನಿವಾರ ರಾತ್ರಿ ಸಮೀಪದ ಬ್ಯಾಲಾಳು ಗ್ರಾಮದಲ್ಲಿ ಅನುಮತಿಯಿಲ್ಲದೆ ನಡೆಸುತ್ತಿದ್ದ ಮದುವೆ ಸಮಾರಂಭ ತಡೆಯಲು ಯತ್ನಿಸಿದ 112 ಪೊಲೀಸ್ ತುರ್ತು ಸಹಾಯವಾಣಿ ವಾಹನದ ಮೇಲೆ ಕಿಡಿಗೇಡಿಗಳ ಗುಂಪು ಕಲ್ಲು ತೂರಾಟ ನಡೆಸಿದೆ. ಘಟನೆಗೆ ಸಂಬಂ ಧಿಸಿದಂತೆ ಪೊಲೀಸರು ಹತ್ತು ಜನರನ್ನು ಬಂಧಿಸಿದ್ದಾರೆ.
ಶನಿವಾರ ರಾತ್ರಿ ಮಧು ಮತ್ತು ಪೂಜಾ ಎಂಬುವರ ಮದುವೆ ಬ್ಯಾಲಾಳು ಗ್ರಾಮದಲ್ಲಿ ಆಯೋಜನೆ ಆಗಿತ್ತು. 500ಕ್ಕೂ ಜನರು ಸೇರಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ 112 ಪೊಲೀಸ್ ತುರ್ತು ಸಹಾಯವಾಣಿ ಸಿಬ್ಬಂದಿ ದಾಳಿ ನಡೆಸಿದರು. ಕರ್ಫ್ಯೂ ಜಾರಿಯಲ್ಲಿರುವುದರಿಂದ ಮದುವೆ ನಡೆಸಬಾರದು ಮತ್ತು ನಿಯಮಕ್ಕಿಂತ ಹೆಚ್ಚು ಜನರು ಮದುವೆಯಲ್ಲಿ ಸೇರುವಂತಿಲ್ಲ ಎಂದು ತಿಳಿಸಿ ಜನರನ್ನು ಚದುರಿಸಲು ಮುಂದಾದರು.
ಈ ವೇಳೆ ಕಿಡಿಗೇಡಿಗಳ ಗುಂಪೊಂದು ಸಹಾಯವಾಣಿ ವಾಹನದ ಮುಂಭಾಗದ ಗಾಜಿನ ಮೇಲೆ ಕಲ್ಲು ತೂರಾಟ ನಡೆಸಿದೆ. ಈ ಸಂದರ್ಭದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಆಗಮಿಸಿದ ಚಿತ್ರದುರ್ಗ ಡಿವೈಎಸ್ಪಿ ಪಾಂಡುರಂಗಪ್ಪ ಮತ್ತು ಭರಮಸಾಗರ ಪೊಲೀಸ್ ಠಾಣೆ ಪಿಎಸ್ಐ ರಾಜು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಬಳಿಕ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.