ಗ್ರಾಪಂನಿಂದ ಸ್ಯಾನಿಟೈಸರ್ ಸಿಂಪಡಣೆ
Team Udayavani, Apr 30, 2021, 8:35 PM IST
ಭರಮಸಾಗರ: ಕೊರೊನಾ ಕರ್ಫ್ಯೂ ನಡುವೆ ಇಲ್ಲಿನ ಗ್ರಾಪಂ ವತಿಯಿಂದ ಪ್ರಮುಖ ಸರ್ಕಾರಿ ಕಚೇರಿಗಳು, ಪೆಟ್ರೋಲ್ ಬಂಕ್, ಖಾಸಗಿ ಆಸ್ಪತ್ರೆಗಳು ಸೇರಿದಂತೆ ಮುಖ್ಯ ರಸ್ತೆಯಲ್ಲಿ ಸ್ಯಾನಿಟೈಸರ್ ಸಿಂಪಡಣೆ ಕಾರ್ಯ ನಡೆಸಲಾಯಿತು. ಕೊರೊನಾ ಕರ್ಫ್ಯೂ ಎರಡನೇ ದಿನವಾದ ಗುರುವಾರ ಗ್ರಾಮ ಪಂಚಾಯತ್ ವತಿಯಿಂದ ಬ್ಯಾಂಕ್, ಪೊಲೀಸ್ ಠಾಣೆ, ಸರ್ಕಾರಿ ಕಾಲೇಜು, ನಾಡಕಚೇರಿ, ಹಾಸ್ಟೆಲ್, ಎಪಿಎಂಸಿ ಕಚೇರಿ, ರೈತ ಸಂಪರ್ಕ ಕೇಂದ್ರ, ಖಾದಿ ಗ್ರಾಮೋದ್ಯೋಗ ಕೇಂದ್ರ, ಅಂಗನವಾಡಿ ಕೇಂದ್ರಗಳು, ಶಾಲಾ ಕಾಲೇಜುಗಳಲ್ಲಿ ಸ್ಯಾನಿಟೈಸರ್ ಸಿಂಪಡಿಸಲಾಯಿತು.
ಮುಖ್ಯ ರಸ್ತೆಯ ಪೆಟ್ರೋಲ್ ಬಂಕ್, ಕೆಇಬಿ ಕಚೇರಿ, ವ್ಯವಸಾಯ ಸೇವಾ ಸಹಕಾರ ಸಂಘ, ಎಟಿಎಂ ಕೇಂದ್ರಗಳು, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸೇರಿದಂತೆ ಖಾಸಗಿ ಆಸ್ಪತ್ರೆಗಳ ಕ್ಲಿನಿಕ್ ಗಳು ಸೇರಿದಂತೆ ಹೆಚ್ಚು ಜನರ ಒಡನಾಟವಿರುವ ಸ್ಥಳಗಳಲ್ಲಿ ಸ್ಯಾನಿಟೈಸರ್ ಸಿಂಪಡಿಸಿ ರೋಗಕಾರರಗಳ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಗ್ರಾಮ ಪಂಚಾಯತ್ ವತಿಯಿಂದ ನಡೆಸಲಾಯಿತು.
ಗ್ರಾಮ ಪಂಚಾಯತ್ ಸದಸ್ಯ ಶ್ರೀನಿವಾಸ್ ಪತ್ರಿಕೆಯೊಂದಿಗೆ ಮಾತನಾಡಿ, ಶುಕ್ರವಾರದಿಂದ ವಾರ್ಡ್‌ವಾರು ಮುಖ್ಯ ರಸ್ತೆಗಳು ಇತರೆ ರಸ್ತೆ ಮಾರ್ಗಗಳಲ್ಲೂ ಸ್ಯಾನಿಟೈಸರ್ ಸಿಂಪಡಿಸುವ ಜತೆಗೆ ಜನರಲ್ಲಿ ಕೊರೊನಾ ಕುರಿತು ಆಟೋದಲ್ಲಿನ ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸಲಾಯಿತು. ಸಂತೋಷ್, ಮಹಾಬುಲಿ, ಸುನೀಲ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.