ರಸ್ತೆ ಗಿಳಿದವರಿಗೆ ಖಾಕಿ ಪಡೆ ಕ್ಲಾಸ್‌


Team Udayavani, May 11, 2021, 8:45 PM IST

11-13

ಚಿತ್ರದುರ್ಗ: ಕೊರೊನಾ ಎರಡನೇ ಅಲೆ ನಿಯಂತ್ರಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಕರ್ಫ್ಯೂ ಘೋಷಣೆ ಮಾಡಿದ್ದು, ಅದರ ಕಟ್ಟುನಿಟ್ಟಿನ ಪಾಲನೆಗಾಗಿ ಇಡೀ ಖಾಕಿ ಪಡೆ ಬೀದಿಗಿಳಿದಿದೆ.

ಅಪ್ಪಿ ತಪ್ಪಿ ವಿನಾ ಕಾರಣ ರಸ್ತೆಗೆ ಬಂದೀರಿ ಜೋಕೆ ಎಂದು ಎಚ್ಚರಿಕೆ ನೀಡುತ್ತಾ, ಕೊರೊನಾ ಕಟ್ಟಿ ಹಾಲು ಈ 14 ದಿನಗಳ ಕಾಲ ಸಹಕಾರ ನೀಡಿ ಎಂಬ ಮನವಿಯನ್ನು ಪೊಲೀಸರು ಬೀದಿಯಲ್ಲಿ ನಿಂತು ಮಾಡುತ್ತಿದ್ದಾರೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ. ರಾ ಧಿಕಾ ಅವರು ಸೋಮವಾರ ಖುದ್ದು ರಸ್ತೆಯಲ್ಲಿ ನಿಂತು ಅನಗತ್ಯವಾಗಿ ವಾಹನಗಳಲ್ಲಿ ಬರುತ್ತಿದ್ದವರನ್ನು ತಡೆದು ಎಚ್ಚರಿಕೆ ನೀಡಿದರು.

ಸುಖಾಸುಮ್ಮನೆ ರಸ್ತೆಗೆ ಬಂದಿದ್ದವರ ವಾಹನಗಳನ್ನು ಸ್ಥಳದಲ್ಲಿಯೇ ಸೀಜ್‌ ಮಾಡಿ ನಡೆದುಕೊಂಡು ಮನೆಗೆ ಹೋಗುವಂತೆ ಮಾಡಿದರು. ಬೊಲೆರೊ ವಾಹನವೊಂದರಲ್ಲಿ ಬಂದಿದ್ದ ವ್ಯಕ್ತಿಯೊಬ್ಬರು ರಾಗಿ ತರಲು ಹೊರಟಿದ್ದೇನೆ ಎಂಬ ಮಾತು ಕೇಳಿದ ಎಸ್ಪಿ, ನಾಚಿಕೆ ಆಗಲ್ವಾ ನಿಮಗೆ, ಜನ ಸಾಯುತ್ತಿದ್ದಾರೆ.

ರಾಗಿ ತರಲು ಬೊಲೆರೋ ತೆಗೆದುಕೊಂಡು ಹೋಗುತ್ತಿದ್ದೇನೆ ಎಂದು ಹೇಳುತ್ತಿದ್ದೀರಿ, ದಿನಸಿ, ತರಕಾರಿಗೆ ನಡೆದುಕೊಂಡು ಹೋಗಬೇಕು ಎಂಬ ಸರ್ಕಾರದ ಮಾರ್ಗಸೂಚಿ ಗೊತ್ತಿಲ್ಲವೇ ಎಂದು ಪ್ರಶ್ನಿಸಿ ವಾಪಸ್‌ ಕಳುಹಿಸಿದರು. ಗಾಂಧಿ  ವೃತ್ತದಲ್ಲಿ ಮೊಕ್ಕಾಂ ಹೂಡಿದ್ದ ಪೊಲೀಸರು ವೈದ್ಯರು, ವಕೀಲರು, ಬ್ಯಾಂಕ್‌ ನೌಕರರು, ಖಾಸಗಿ ಉದ್ಯೋಗಸ್ಥರು, ರೈತರು, ಆರೋಗ್ಯ ಸೇವೆ, ಮೆಡಿಕಲ್‌ ಸ್ಟೋರ್‌ ಹೀಗೆ ಹತ್ತು ಹಲವಾರು ರೀತಿಯ ಕೆಲಸಗಳಿಗೆ ಹೋಗುವವರನ್ನು ತಡೆದು ವಿಚಾರಣೆ ನಡೆಸಿದರು.

ಗುರುತಿನ ಚೀಟಿಗಳನ್ನು ಪರಿಶೀಲಿಸಿ ತುರ್ತು ಅವಶ್ಯಕತೆ ಇದ್ದವರನ್ನು ಕಳಿಸಿ, ಉಳಿದವರ ವಾಹನಗಳನ್ನು ಸೀಜ್‌ ಮಾಡಿದರು. ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಜಿ. ರಾ ಧಿಕಾ, ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಲಾಕ್‌ಡೌನ್‌ ಬಿಗಿಗೊಳಿಸಲಾಗಿದೆ. ಎಲ್ಲಾ ಕಡೆ ಚೆಕ್‌ಪೋಸ್‌ ಗಳನ್ನು ಹಾಕಿದ್ದು, ನಮ್ಮ ಊರಿನಿಂದ ಹೊರಗೆ ಹೋಗುವ ಹಾಗೂ ಹೊರ ಊರಿನಿಂದ ಬರುವ ವಾಹನಗಳನ್ನು ತಡೆದು ತಪಾಸಣೆ ಮಾಡಲಾಗುತ್ತಿದೆ. ಹೆಂಡತಿ ಮಕ್ಕಳೊಂದಿಗೆ ಬೈಕ್‌ನಲ್ಲಿ ಅನಗತ್ಯವಾಗಿ ರಸ್ತೆಯಲ್ಲಿ ತಿರುಗಾಡಲು ಅವಕಾಶವಿಲ್ಲ. ಅಂತಹವರ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗುವುದು ಎಂದರು. ಈ ವೇಳೆ ಸಿಪಿಐಗಳಾದ ನಯೀಂ ಅಹಮ್ಮದ್‌, ಬಾಲಚಂದ್ರ ನಾಯಕ್‌, ಪ್ರಕಾಶ್‌ ಸೇರಿದಂತೆ ವಿವಿಧ ಠಾಣೆಗಳ ಎಸ್‌ಐ, ಡಿಎಆರ್‌ ಸಿಬ್ಬಂದಿ ಹಾಜರಿದ್ದರು.

ಕೋಟೆಗೆ ಹೋಗುವ ರಸ್ತೆ, ಮೆದೇಹಳ್ಳಿ ರಸ್ತೆ, ಧರ್ಮಶಾಲಾ ರಸ್ತೆ, ಎಸ್‌ .ಬಿ.ಎಂ.ಬ್ಯಾಂಕ್‌ ಪಕ್ಕದ ರಸ್ತೆಯನ್ನು ಬ್ಯಾರಿಕೇಡ್‌ ಮತ್ತು ಗೂಟಗಳಿಂದ ಬಂದ್‌ ಮಾಡಲಾಗಿದೆ. ಉಳಿದಂತೆ ಹೊಳಲ್ಕೆರೆ ರಸ್ತೆ, ಮೆದೇಹಳ್ಳಿ ರಸ್ತೆ, ರಾಷ್ಟ್ರೀಯ ಹೆದ್ದಾರಿ-13, ಚಳ್ಳಕೆರೆ ಟೋಲ್‌ಗೇಟ್‌ನಲ್ಲಿ ಬಿಗಿ ಪೊಲೀಸ್‌ ಭದ್ರತೆ ಹಾಕಲಾಗಿದ್ದು, ವಾಹನ ಹಾಗೂ ಅನಗತ್ಯವಾಗಿ ತಿರುಗಾಡುತ್ತಿರುವವರನ್ನು ತಡೆದು ವಿಚಾರಣೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.