ಇಂದಿರಾ ಕ್ಯಾಂಟಿನ್‌ನಲ್ಲಿ ಉಚಿತ ಊಟ
Team Udayavani, May 13, 2021, 10:31 PM IST
ಜಗಳೂರು: ಕೊರೊನಾ ಕರ್ಫ್ಯೂ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟಿನ್‌ನಲ್ಲಿ ಉಚಿತವಾಗಿ ಉಪಹಾರ ಮತ್ತು ಊಟದ ವ್ಯವಸ್ಥೆ ಮಾಡಲಾಗಿದ್ದು, ಕೂಲಿ ಕಾರ್ಮಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜು ಬಣಕಾರ್ ಹೇಳಿದರು.
ಪಟ್ಟಣದ ಇಂದಿರಾ ಕ್ಯಾಂಟಿನ್ ಗೆ ಭೇಟಿ ನೀಡಿ ಪರಿಶೀಲಿಸಿ ನಡೆಸಿದ ಅವರು, ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಈ ಸಂದರ್ಭದಲ್ಲಿ ಬಡಕೂಲಿ ಕಾರ್ಮಿಕರಿಗೆ, ವಲಸಿಗರಿಗೆ, ದುರ್ಬಲ ವರ್ಗದವರಿಗೆ ಅನಾನುಕೂಲ ಆಗದಂತೆ ಸರ್ಕಾರ ಸ್ಥಳಿಯ ಆಡಳಿತ ಸಂಸ್ಥೆಗಳಲ್ಲಿ ಚಾಲ್ತಿಯಲ್ಲಿರುವ ಇಂದಿರಾ ಕ್ಯಾಂಟಿನ್‌ನಲ್ಲಿ ಉಚಿತವಾಗಿ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ ಒದಗಿಸುವಂತೆ ಪೌರಾಡಳಿತ ನಿರ್ದೇಶನಾಲಯ ನಿರ್ದೇಶಿಸಿದೆ. ನಿತ್ಯ ಆಹಾರ ಸೇವಿಸುವ ಜನ ಸಂಖ್ಯೆಯ ವಿವರಗಳನ್ನು ನಿರ್ವಹಿಸಲು ತಿಳಿಸಿದೆ ಎಂದರು.
ಮೇ 24ರ ವರೆಗೆ ಉಚಿತವಾಗಿ ಬೆಳಗ್ಗೆ ಉಪಹಾರ ಮಧ್ಯಾಹ್ನ ಹಾಗೂ ರಾತ್ರಿ ಊಟ ಒದಗಿಸುವಂತೆ ಅಡುಗೆ ಸಿಬ್ಬಂದಿಗೆ ಸೂಚಿಸಿದರು. ಸಾರ್ವಜನಿಕರು ಕೋವಿಡ್ ಮಾರ್ಗಸೂಚಿ ಕಡ್ಡಾಯ ಪಾಲಿಸಬೇಕು. ಮಾಸ್ಕ್ ಸ್ಯಾನಿಟೈಸರ್ ಬಳಸಿ ಕ್ಯಾಂಟಿನ್‌ಗೆ ಆಗಮಿಸಬೇಕು. ಅಲ್ಲದೆ ಶುಚಿರುಚಿಯಾದ ಅಡುಗೆ ತಯಾರಿಸಲು ತಿಳಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪ.ಪಂ ಆರೋಗ್ಯ ನಿರೀಕ್ಷಕ ಖೀಫಾಯತ್, ಅಡುಗೆ ಸಿಬ್ಬಂದಿ ರೇಣುಕಮ್ಮ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.