50 ಆಕ್ಸಿಜನ್ ಬೆಡ್ ಸೌಲಭ್ಯಕ್ಕೆ ಕೋಟಿ ರೂ. ನೀಡುವೆ
Team Udayavani, May 17, 2021, 10:45 PM IST
ಹೊಳಲ್ಕೆರೆ: ಕೋವಿಡ್ ಆಸ್ಪತ್ರೆಯಲ್ಲಿ 50 ಅಕ್ಸಿಜನ್ ಬೆಡ್ ಸೌಲಭ್ಯ ಕಲ್ಪಿಸಲು ಒಂದು ಕೋಟಿ ರೂ. ಅನುದಾನ ಕೊಡಲು ಸಿದ್ಧ ಎಂದಿರುವ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ. ಚಂದ್ರಪ್ಪ, ತಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಸಂದೇಶದಲ್ಲಿ ಹುರುಳಿಲ್ಲ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಕೋವಿಡ್ ಆಸ್ಪತ್ರೆ ಉದ್ಘಾಟನೆ ಸಂದರ್ಭದಲ್ಲಿ ಅಧಿಕಾರಿಗಳಂದಿಗೆ 20 ನಿಮಿಷ ಚರ್ಚೆ ನಡೆಸಿದ್ದೇನೆ. 30 ಕೋಟಿ ರೂ. ವೆಚ್ಚದಲ್ಲಿ ಹೊಳಲ್ಕೆರೆಯಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದ್ದು, ಅತ್ಯಾಧುನಿಕ ಸೌಲಭ್ಯ ಕಲ್ಪಿಸಿ ಮಾದರಿ ಆಸ್ಪತ್ರೆ ಎನ್ನುವ ಹೆಗ್ಗಳಿಗೆ ಪಡೆದುಕೊಳ್ಳಬೇಕೆಂದು ಶ್ರಮಿಸುತ್ತಿದ್ದೇನೆ. ನಮ್ಮ ತಾಲೂಕಿನ ಜನರಿಗೆ ಹೆಚ್ಚಿನ ಆರೋಗ್ಯ ಸೇವೆ ಸಿಗಬೇಕು ಎಂಬುದು ಮುಖ್ಯ ಉದ್ದೇಶ ಎಂದಿದ್ದಾರೆ.
ಕೋವಿಡ್ ಎರಡನೇ ಅಲೆಯಲ್ಲಿ 50 ಬೆಡ್ ಗಳ ಆಸ್ಪತ್ರೆ ನಿರ್ಮಾಣ ಮಾಡಿ ಸೌಲಭ್ಯ ಕಲ್ಪಿಸಿದರೆ ಮೂರನೇ ಅಲೆಯಲ್ಲಿ ಹೆಚ್ಚಿನ ಅನುಕೂಲವಾಗಲಿದೆ. ಈ ಸಂಬಂಧ ಅ ಧಿಕಾರಿಗಳ ಜತೆಗೆ ಸುಮಾರು 20 ನಿಮಿಷ ಸಮಾಲೋಚಿಸಿದ್ದೇನೆ. ಅದರಲ್ಲಿ ಕೇವಲ 20 ಸೆಕೆಂಡ್ ವಿಡಿಯೋ ವೈರಲ್ ಮಾಡಿ ನಮ್ಮ ವಿರುದ್ಧ ಅಪಪ್ರಚಾರ ನಡೆಸಲಾಗಿದೆ.
ಈ ಮೂಲಕ ಅಭಿವೃದ್ಧಿ ಕೆಲಸಗಳನ್ನು ಹತ್ತಿಕ್ಕುವ ಹುನ್ನಾರ ನಡೆದಿದೆ. ಅ ಧಿಕಾರಿಗಳಿಗೆ ಜತೆ ಸಮಾಲೋಚನೆ ಸಂದರ್ಭದಲ್ಲಿ ಕೇವಲ 10 ಬೆಡ್ ಸಾಲುವುದಿಲ್ಲ, 50 ಬೆಡ್ ಕೊಡಿ ಎಂದು ಖಾರವಾಗಿ ಹೇಳಿದ್ದು ನಿಜ. ನಮ್ಮ ತಾಲೂಕಿಗೆ ಸೌಲಭ್ಯಗಳನ್ನು ಕಲ್ಪಿಸಿಕೊಡಲಿ ಎಂದು ಈ ರೀತಿ ಮಾತನಾಡಿದ್ದೇನೆ. ಇದಕ್ಕೂ ಜನರಿಗೂ ಸಂಬಂಧವಿಲ್ಲ. ಸುಳ್ಳು ಪ್ರಚಾರದಲ್ಲಿ ತೊಡಗಿಸಿಕೊಂಡವರಿಗೆ ಅಭಿವೃದ್ಧಿಯ ಮೂಲಕ ಉತ್ತರ ನೀಡುತ್ತೇನೆ ಎಂದು ಶಾಸಕ ಚಂದ್ರಪ್ಪ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.