ಅನುದಾನರಹಿತ ಶಾಲಾ ಶಿಕ್ಷಕರಿಗೆ ಪ್ಯಾಕೇಜ್ ಕೊಡಿ
Team Udayavani, May 23, 2021, 9:11 PM IST
ಚಿತ್ರದುರ್ಗ: ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕ-ಶಿಕ್ಷಕೇತರ ಸಮುದಾಯಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ವೈ.ಎ. ನಾರಾಯಣಸ್ವಾಮಿ ಹಾಗೂ ಚಿದಾನಂದ ಗೌಡ ಅವರು ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.
ಕೋವಿಡ್ ಕಾರಣದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕ್ಷೇತ್ರಗಳಲ್ಲಿ ಶಿಕ್ಷಣ ಕ್ಷೇತ್ರವೂ ಪ್ರಧಾನವಾದ ಕ್ಷೇತ್ರವಾಗಿದೆ. ಸರ್ಕಾರ ವಿಧಿ ಸಿದ ಲಾಕ್ಡೌನ್ ರಾಜ್ಯಾದ್ಯಂತ ಇರುವ ಸಾವಿರಾರು ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಮೇಲೆ ಅವಲಂಬಿಸಿದ್ದ ಹಲವು ವರ್ಗಗಳ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಕಳೆದ ಸಾಲಿನಲ್ಲಿ ಭೌತಿಕ ತರಗತಿಗಳು ನಡೆಯದ ಕಾರಣ ಪೋಷಕರು ಮಕ್ಕಳ ಬೋಧನಾ ಶುಲ್ಕವನ್ನು ಪಾವತಿಸಲು ನಿರೀಕ್ಷಿತ ರೀತಿಯಲ್ಲಿ ಆಸಕ್ತಿ ತೋರಲಿಲ್ಲ. ಇದೂ ಕೂಡಾ ಬಹು ವಿಧದ ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಯಿತು ಎಂದಿದ್ದಾರೆ.
ಖಾಸಗಿ ಶಾಲೆಗಳಲ್ಲಿ, ವಿಶೇಷವಾಗಿ ಗ್ರಾಮಾಂತರ ಪ್ರದೇಶಗಳಲ್ಲಿರುವ ಬಜೆಟ್ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬೋಧಕ, ಬೋಧಕೇತರ ಸಿಬ್ಬಂದಿ ಮುನ್ನೆಲೆಗೆ ಬಾರದ, ಅತಿಯಾದ ಸಮಸ್ಯೆಗೆ ಸಿಲುಕಿರುವ ಸಮುದಾಯವಾಗಿದ್ದಾರೆ. ಪೋಷಕ-ಶಾಲೆಗಳ ನಡುವಿನ ಸಮಸ್ಯೆಗಳ ನೇರ ಪರಿಣಾಮ ಈ ಸಮುದಾಯದ ಮೇಲಾಗಿದೆ. ಅಸಂಖ್ಯ ಶಿಕ್ಷಕರು, ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡಿದ್ದಾರೆ, ಹಣ್ಣು ತರಕಾರಿ ಮಾರಿದ್ದಾರೆ.
ಇದನ್ನು ನಾವು ಹಲವು ಮಾಧ್ಯಮಗಳಲ್ಲಿ ನೋಡಿದ್ದೇವೆ, ಕೇಳಿದ್ದೇವೆ. ಅವರ ನೆರವಿಗೆ ಧಾವಿಸುವುದೂ ಸಹ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.
ಸರ್ಕಾರಿ ಶಿಕ್ಷಕರ ಬದುಕಿನಲ್ಲಿ ಅಷ್ಟೊಂದು ಪರಿಣಾಮ ಬೀರದಿದ್ದರೂ ಖಾಸಗಿ ಶಾಲೆಯ ಶಿಕ್ಷಕರ ಬದುಕು ದೇವರಿಗೆ ಪ್ರೀತಿ ಎನ್ನುವಂತಾಗಿದೆ. ಕೆಲವು ಶಾಲೆಗಳು ಅಲ್ಪ ಸ್ವಲ್ಪ ಸಂಬಳ ನೀಡುತ್ತಿದ್ದರೆ, ಕೆಲವು ಶಾಲೆಗಳು ಬಿಡಿಗಾಸನ್ನೂ ನೀಡುತ್ತಿಲ್ಲ, ಕಳೆದ ಎರಡು ವರ್ಷಗಳಿಂದ ಮನೆ ಬಾಡಿಗೆ, ಮಕ್ಕಳ ವಿದ್ಯಾಭ್ಯಾಸ, ಸಂಸಾರ ನಿರ್ವಹಣೆ ಸಾಧ್ಯವಾಗದೆ ಏನು ಮಾಡಬೇಕೆಂಬ ಚಿಂತೆ ಕಾಡುತ್ತಿದೆ. ಬೇರೆ ಉದ್ಯೋಗ ಗೊತ್ತಿಲ್ಲ, ಶಿಕ್ಷಕ ವೃತ್ತಿಯಲ್ಲಿ ಸಂಬಳ ಸಿಗುತ್ತಿಲ್ಲ. ಇದರಿಂದ ಖಾಸಗಿ ಶಾಲಾ ಶಿಕ್ಷಕ ಸ್ಥಿತಿ ಅತಂತ್ರವಾಗಿದೆ ಎಂದು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.