ಗ್ರಾಮೀಣ ಪ್ರದೇಶದಲ್ಲಿ ಮೈಕ್ರೋ ಕೋವಿಡ್‌ ಸೆಂಟರ್‌


Team Udayavani, May 25, 2021, 9:08 PM IST

25-18

ಚಳ್ಳಕೆರೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಳೆದ ಒಂದು ವರ್ಷದಿಂದ ನಿರಂತರವಾಗಿ ಕೊರೊನಾ ನಿಯಂತ್ರಣಕ್ಕೆ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಪ್ರಾಮಾಣಿಕವಾಗಿ ಕೈಗೊಂಡಿವೆ. ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಕೊರೊನಾ ಸ್ಫೋಟಗೊಳ್ಳುತ್ತಿರುವುದು ಆರೋಗ್ಯ ಇಲಾಖೆಗೆ ಸವಾಲಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಕೊರೊನಾವನ್ನು ಹತೋಟಿಗೆ ತರಲು ಮೈಕ್ರೋ ಕೋವಿಡ್‌ ಕೇರ್‌ ಕೇಂದ್ರವನ್ನು ಶೀಘ್ರದಲ್ಲೇ ಪ್ರಾರಂಭಿಸುವ ಯೋಜನೆ ಇದೆ ಎಂದು ಸಂಸದ ಎ. ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ಬೇಡರೆಡ್ಡಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೊರೊನಾ ನಿಯಂತ್ರಣ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಬಂದ ಕೂಡಲೇ ಸಾವು ಖಚಿತವೆಂಬ ಆತಂಕಕ್ಕೆ ಯಾರೂ ಒಳಗಾಗಬಾರದು. ಆರೋಗ್ಯ ಇಲಾಖೆ ಅಧಿ ಕಾರಿಗಳು ಪ್ರತಿ ಗ್ರಾಮದಲ್ಲೂ ಈಗಾಗಲೇ ಸಮೀಕ್ಷೆ ನಡೆಸಿ ನಿಯಂತ್ರಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಗ್ರಾಮಗಳಲ್ಲಿ 25ಕ್ಕೂ ಹೆಚ್ಚು ಪ್ರಕರಣ ಕಂಡುಬಂದಿದ್ದು ಇದನ್ನು ಹಾಟ್‌ಸ್ಪಾಟ್‌ ಎಂದು ಪರಿಗಣಿಸಲಾಗಿದೆ. ಮೈಕ್ರೋ ಕೋವಿಡ್‌ ಕೇರ್‌ ಸೆಂಟರ್‌ ಸಹಕಾರದಿಂದ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಸೋಂಕಿತರು ಹೆಚ್ಚಾದಲ್ಲಿ ಗ್ರಾಮದ ಶಾಲೆಯಲ್ಲೇ ಕೋವಿಡ್‌ ಕೇಂದ್ರ ಪ್ರಾರಂಭಿಸಿ ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುವುದು ಎಂದರು.

ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಮಾತನಾಡಿ, ಯಾವುದೇ ರೋಗ ಸುಲಭವಾಗಿ ನಮ್ಮನ್ನು ವ್ಯಾಪಿಸಿದೆ ಎಂದರೆ ನಿರ್ಲಕ್ಷé ಮತ್ತು ಆರೋಗ್ಯದ ಬಗ್ಗೆ ಚಿಂತನೆ ನಡೆಸದೇ ಇರುವುದೇ ಕಾರಣ. ನಿಮ್ಮಲ್ಲಿ ಕೊರೊನಾ ಸೋಂಕಿತರು ಕಂಡುಬಂದಲ್ಲಿ ನೇರವಾಗಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದರೆ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆ.

ಗ್ರಾಮಸ್ಥರು, ಚುನಾಯಿತ ಪ್ರತಿನಿ ಧಿಗಳು, ಸಂಘ ಸಂಸ್ಥೆಗಳ ಪದಾಧಿ ಕಾರಿಗಳು ಕೊರೊನಾ ವೈರಾಣು ನಿಯಂತ್ರಣಕ್ಕೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಜಿಲ್ಲಾ ರಕ್ಷಣಾಧಿ ಕಾರಿ ಜಿ. ರಾ ಧಿಕಾ, ಜಿಪಂ ಸಿಇಒ ಡಾ| ನಂದಿನಿದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ಸಿ.ಎಲ್‌. ಪಾಲಾಕ್ಷ, ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ| ರಂಗನಾಥ, ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ್‌, ತಾಪಂ ಇಒ ಪ್ರಕಾಶ್‌, ಡಿವೈಎಸ್ಪಿ ಕೆ.ವಿ. ಶ್ರೀಧರ್‌, ಡಾ| ಅನಿತಾಲಕ್ಷ್ಮೀ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.