ತರಳಬಾಳು ಜಗದ್ಗುರುಗಳ ಕೊಡುಗೆ ಸ್ಮರಣೀಯ


Team Udayavani, Jun 3, 2021, 10:38 PM IST

3-13

ಸಿರಿಗೆರೆ: ಕೋವಿಡ್‌ ಸಂಕಷ್ಟ ಸಮಯದಲ್ಲಿ ಜನ ಜಾಗೃತಿ ಹಾಗೂ ಆತ್ಮಸ್ಥೈರ್ಯ ಮೂಡಿಸುವಂತಹ ಮಹತ್ಕಾರ್ಯವನ್ನು ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾಡಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಶ್ಲಾಘಿ ಸಿದರು.

ಜಿಲ್ಲಾಡಳಿತ ಮತ್ತು ರಾಮಮೂರ್ತಿ ಗಣಿಗಾರಿಕೆ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ವೈದ್ಯರ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮ ಹಾಗೂ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮಾರಕ ವಿದ್ಯಾರ್ಥಿನಿಲಯದಲ್ಲಿ 100 ಹಾಸಿಗೆಗಳ ಕೋವಿಡ್‌ ಕೇರ್‌ ಸೆಂಟರ್‌ ಆರಂಭೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ಜಾಗೃತಿ ಮತ್ತು ಸ್ವಾಸ್ಥ ಕಾಪಾಡುವಂತಹ ಕೆಲಸವನ್ನು ಮೊದಲಿನಿಂದಲೂ ಶ್ರೀಗಳು ಮಾಡುತ್ತಾ ಬಂದಿದ್ದಾರೆ.

ಕೋವಿಡ್‌ ಎದುರಿಸುವಲ್ಲಿ ಶ್ರೀಗಳ ಶ್ರಮ ಗಣನೀಯವಾಗಿದೆ. ಹಲವು ಸಂದರ್ಭಗಳಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ ಉಪಯುಕ್ತ ಸಲಹೆಗಳನ್ನೂ ನೀಡಿದ್ದಾರೆ. ಈಗ ರಾಜ್ಯದ ಹಲವೆಡೆ ಸಂಸ್ಥೆಯ ಕಟ್ಟಡಗಳನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಾಗಿ ಪರಿವರ್ತನೆ ಮಾಡುವ ಮೂಲಕ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಅವರಲ್ಲಿರುವ ಮಾತೃ ಪ್ರೇಮ ಗುಣದಿಂದ ಇದು ಸಾಧ್ಯವಾಗಿದೆ ಎಂದರು.

ಸಿರಿಗೆರೆ, ದಾವಣಗೆರೆ, ಹೊಳಲ್ಕೆರೆ, ಬೆಂಗಳೂರು ಮುಂತಾದ ಕಡೆಗಳಲ್ಲಿ ಪ್ರತಿನಿತ್ಯ 4000 ಜನ ಕೊರೊನಾ ವಾರಿಯರ್ಗೆ, ರೋಗಿಗಳ ಸಂಬಂ  ಧಿಗಳಿಗೆ ಶ್ರೀಗಳ ಮಾರ್ಗದರ್ಶನದಲ್ಲಿ ಅನ್ನ ದಾಸೋಹ ನಡೆಯುತ್ತಿರುವುದು ಸಂತಸದ ವಿಚಾರ. ನೊಂದವರ ಸೇವೆ ಮಾಡುವ ಮೂಲಕ ಶ್ರೀಗಳು ಇತರರಿಗೆ ಮಾದರಿಯಾಗಿದ್ದಾರೆ ಎಂದು ಬಣ್ಣಿಸಿದರು. ದಾವಣಗೆರೆ ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಮಾತನಾಡಿ, ಕೋವಿಡ್‌ ತೊಡೆದು ಹಾಕಲು ಸರ್ಕಾರ ಕೈಗೊಂಡಿರುವ ಹಲವು ಕಾರ್ಯಗಳಲ್ಲಿ ತರಳಬಾಳು ಜಗದ್ಗುರು ಸಹಕಾರ ನೀಡುತ್ತಿದ್ದಾರೆ.

ದಾವಣಗೆರೆಯ ತರಳಬಾಳು ಮಹಿಳಾ ಹಾಸ್ಟೆಲ್‌ನಲ್ಲಿ ಕೋವಿಡ್‌ ಸೆಂಟರ್‌ ಆರಂಭವಾದ ನಂತರ ಅಲ್ಲಿ ಹಲವರು ಚಿಕಿತ್ಸೆ ಪಡೆಯಲು ಅವಕಾಶ ದೊರೆಯುವಂತಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಇರುವ ಸಂಸ್ಥೆಯ ಕಟ್ಟಡಗಳಲ್ಲಿ ಕೋವಿಡ್‌ ಆರೈಕೆ ಕೇಂದ್ರಗಳನ್ನು ತೆರೆಯಲು ಶ್ರೀಗಳು ಸಮ್ಮತಿಸಿರುವುದಾಗಿ ತಿಳಿಸಿದರು. ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಜಗತ್ತಿನಲ್ಲಿ ನಡೆದಿರುವ ಎರಡು ಮಹಾಯುದ್ಧಗಳನ್ನೂ ಮೀರಿಸಿದ ಸಂಕಷ್ಟವನ್ನು ಕೊರೊನಾ ವೈರಾಣು ವಿಶ್ವಕ್ಕೆ ತಂದಿಟ್ಟಿದೆ. ಮಹಾಯುದ್ಧಗಳು ನಡೆದ ಸಂದರ್ಭದಲ್ಲಿ ಹಲವು ದೇಶಗಳು ಪರ ಮತ್ತು ವಿರೋಧಿ ಪಾಳಯಗಳಲ್ಲಿ ಇದ್ದು ಹೋರಾಟ ಮಾಡಿದವು.

ಆದರೆ ಈಗ ನಡೆದಿರುವ ಯುದ್ಧದಲ್ಲಿ ಜಗತ್ತಿನ ಎಲ್ಲಾ ದೇಶಗಳೂ ಒಂದು ಕಡೆ ನಿಂತಿದ್ದರೆ, ಕೊರೊನಾ ಸೋಂಕು ಮತ್ತೂಂದು ಕಡೆ ನಿಂತಿದೆ. ಜಗತ್ತಿನ ಎಲ್ಲಾ ರಾಷ್ಟ್ರಗಳು ಒಂದಾಗಿ ಕೊರೊನಾ ನಿರ್ಮೂಲನೆಗೆ ಶ್ರಮಿಸಬೇಕೆಂದು ಕರೆ ನೀಡಿದರು.

ವೈರಾಣುವಿನ ಮೊದಲ ಅಲೆಯಲ್ಲಿ ಹಿರಿಯರನ್ನು ಕಳೆದುಕೊಳ್ಳುವಂತ ಪರಿಸ್ಥಿತಿ ನಿರ್ಮಾಣವಾಯಿತು. ಎರಡನೇ ಅಲೆಯಲ್ಲಿ ಯುವಕರೇ ಹೆಚ್ಚು ಬಲಿಯಾಗುತ್ತಿರುವುದು ದುರ್ದೈವ. ತಮ್ಮ ಜೀವವನ್ನು ರಕ್ಷಣೆ ಮಾಡಿಕೊಳ್ಳಬೇಕಾದ ಹೊಣೆ ಜನರ ಮೇಲೆಯೇ ಇದೆ. ಅದನ್ನು ಅರಿತು ಜನರು ಜಾಗೃತರಾಗಬೇಕು ಎಂದು ತಿಳಿಸಿದ ಶ್ರೀಗಳು, ತರಳಬಾಳು ಸಂಸ್ಥೆಯಲ್ಲಿ ಇದುವರೆಗೆ ಐವರು ಶಿಕ್ಷಕರು ಮತ್ತು ಸಿಬ್ಬಂದಿ ಕೊರೊನಾಕ್ಕೆ ಬಲಿಯಾಗಿದ್ದಾರೆ ಎಂದರು.

ಸಮಾರಂಭದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್‌, ಸಂಸದ ಎ. ನಾರಾಯಣಸ್ವಾಮಿ, ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ, ಜಿಲ್ಲಾಧಿ ಕಾರಿ ಕವಿತಾ ಎಸ್‌. ಮನ್ನಿಕೇರಿ, ಜಿಪಂ ಸಿಇಒ ಡಾ| ನಂದಿನಿ ದೇವಿ, ಎಸ್‌ಪಿ ಜಿ. ರಾಧಿ ಕಾ, ರಾಮಮೂರ್ತಿ ಗಣಿಗಾರಿಕೆ ಸಂಸ್ಥೆಯ ಕಾರ್ಯನಿರ್ವಾಹಕ ಉಪ ಪ್ರಬಂಧಕ ಜಿ. ರಣದಿವೆ, ಜಿಲ್ಲಾ ಆರೋಗ್ಯಾಧಿ ಕಾರಿ ಡಾ| ಪಾಲಾಕ್ಷ, ಗ್ರಾಪಂ ಅಧ್ಯಕ್ಷ ಕೆ.ಬಿ. ಮೋಹನ್‌, ಪಿಡಿಒ ಲೋಕೇಶ್‌ ಮೊದಲಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ

Chi-narabalui

Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!

CTD-Nagasadhu-Died

Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!

ಬಿಜೆಪಿ ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ

BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್‌

CTD-Vanivilasa

Chitradurga: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರ ಬಿಡಿಗಾಸು ಕೊಟ್ಟಿಲ್ಲ: ಸಿಎಂ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.