ಕೋವಿಡ್ ಮುಕ್ತ ಜಿಲ್ಲೆಯಾಗಿಸಲು ಶ್ರಮಿಸಿ
Team Udayavani, Jun 3, 2021, 10:42 PM IST
ಚಿತ್ರದುರ್ಗ: ಜಿಲ್ಲೆಯನ್ನು ಕೋವಿಡ್ ಮುಕ್ತ ಮಾಡಲು ಸಂಸದ ಎ. ನಾರಾಯಣಸ್ವಾಮಿ ಶ್ರಮಿಸುತ್ತಿದ್ದಾರೆ. ಜಿಲ್ಲೆಯ ಜನತೆ ಅವರ ಜತೆಗೆ ಕೈ ಜೋಡಿಸಬೇಕು ಎಂದು ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.
ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಣಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಕೊರೊನಾ ಎರಡನೇ ಅಲೆ ಅಬ್ಬರಿಸುತ್ತಿರುವ ಸಂದರ್ಭದಲ್ಲಿ ಕೆಲ ಜನಪ್ರತಿನಿಧಿ ಗಳು ಮನೆಯಿಂದ ಹೊರಗೆ ಬರಲು ಹೆದರುತ್ತಿದ್ದಾರೆ. ಆದರೆ ಸಂಸದ ಎ. ನಾರಾಯಣಸ್ವಾಮಿ ಬಡವರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಕೊರೊನಾ ಸೋಂಕು ಕಣ್ಣಿಗೆ ಕಾಣದ ಶತ್ರು. ಹಾಗಾಗಿ ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಮಾರುಕಟ್ಟೆ ಮತ್ತಿತರ ಅಗತ್ಯ ವಸ್ತುಗಳ ಖರೀದಿ ಸಂದರ್ಭದಲ್ಲಿ ಜನರು ಖರೀದಿಗೆ ಮುಗಿ ಬೀಳುತ್ತಿರುವುದು ಸರಿಯಲ್ಲ. ಎಲ್ಲರೂ ತಪ್ಪದೇ ಕೊರೊನಾ ನಿಯಮ ಪಾಲಿಸುವ ಮೂಲಕ ವೈರಾಣುವನ್ನು ಹಿಮ್ಮೆಟ್ಟಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜಾಗೃತರಾಗಿರಬೇಕು ಎಂದರು.
ಸಂಸದ ಎ. ನಾರಾಯಣಸ್ವಾಮಿ ಮಾತನಾಡಿ, ಪೌರ ಕಾರ್ಮಿಕರು, ಖಾಸಗಿ ಶಾಲೆಗಳು, ಅನುದಾನ ರಹಿತ ಶಾಲಾ ಸಿಬ್ಬಂದಿಗೆ ಇಂದು ಆಹಾರ ಕಿಟ್‌ಗಳನ್ನು ವಿತರಿಸಲಾಗಿದೆ. ಜೊತೆಗೆ ಮಾಸ್ಕ್ಗಳನ್ನೂ ನೀಡಲಾಗಿದೆ. ಎಲ್ಲರೂ ತಪ್ಪದೇ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೋವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಇದರಿಂದಾಗಿ ಅನೇಕ ಜನರು ಕೆಲಸ ಕಳೆದುಕೊಂಡು ದುಡಿಮೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಡವರು ಬದುಕು ನಡೆಸುವುದು ದುಸ್ತರವಾಗಿದೆ. ಇಂತಹ ಸಂದರ್ಭದಲ್ಲಿ ಸಂಸದರು ಜನರಿಗೆ ಆಹಾರದ ಕಿಟ್‌ಗಳನ್ನು ವಿತರಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರುಳಿ, ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಸದಸ್ಯ ವೆಂಕಟೇಶ್, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಜಿಪಂ ಮಾಜಿ ಅಧ್ಯಕ್ಷ ಮೀಸೆ ಮಹಾಲಿಂಗಪ್ಪ, ಡಿಡಿಪಿಐ ಕೆ. ರವಿಶಂಕರ್ ರೆಡ್ಡಿ, ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು, ವ್ಯವಸ್ಥಾಪಕಿ ಮಂಜುಳಮ್ಮ ಮತ್ತಿತರರು ಇದ್ದರು. ಪೌರ ಕಾರ್ಮಿಕರು, ಖಾಸಗಿ ಅನುದಾನ ರಹಿತ ಶಾಲಾ ಶಿಕ್ಷಕರು, ಚಮ್ಮಾರರು ಸೇರಿದಂತೆ 500ಕ್ಕೂ ಹೆಚ್ಚು ಜನರಿಗೆ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.