ಪರಿಸರ ಮಾಲಿನ್ಯ ಮನುಕುಲಕ್ಕೆ ಮಾರಕ
Team Udayavani, Jun 8, 2021, 10:48 PM IST
ಹೊಳಲ್ಕೆರೆ: ಪರಿಸರ ನಿತ್ಯ ಮಾಲಿನ್ಯಕ್ಕೊಳಗಾಗು ತ್ತಿರುವುದು ಮನುಕುಲದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಆದ್ದರಿಂದ ಗಿಡಗಳನ್ನು ನೆಟ್ಟು ಮರಗಳಾಗಿ ಬೆಳೆಸುವುದು ಪ್ರತಿಯೊಬ್ಬರ ಹೊಣೆ ಎಂದು ತಹಶೀಲ್ದಾರ್ ರಮೇಶ್ ಆಚಾರ್ ಹೇಳಿದರು.
ವಿಶ್ವ ಪರಿಸರ ದಿನಾಚಣೆಯ ಅಂಗವಾಗಿ ಪಟ್ಟಣದ ಹಿರೇಕೆರೆ ಗಣಪತಿ ರಸ್ತೆ ಪಕ್ಕದಲ್ಲಿ ಸಾಲು ಮರ ಬೆಳೆಸಲು ಸಸಿ ನೆಟ್ಟು ಅವರು ಮಾತನಾಡಿದರು. ಪರಿಸರ ಕಲುಷಿತಗೊಂಡು ಮನುಕುಲ ಅಪಾಯದಲ್ಲಿದೆ. ಅಕ್ಸಿಜನ್ ಪ್ರಮಾಣ ಕಡಿಮೆಯಾಗುವ ಆತಂಕದ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಆದ್ದರಿಂದ ಎಲ್ಲರೂ ಪರಿಸರ ರಕ್ಷಣೆಗೆ ಗಮನ ನೀಡಬೇಕೆಂದರು.
ಪುರಸಭೆ ಅಧ್ಯಕ್ಷ ಆರ್.ಎ. ಅಶೋಕ್ ಮಾತನಾಡಿ, ಪರಿಸರ ಸಂರಕ್ಷಣೆ ಮಾತಲ್ಲಷ್ಟೇ ಇರಬಾರದು. ಕೃತಿಯಲ್ಲಿ ತಂದು ಪರಸರ ರಕ್ಷಣೆ ಮಾಡುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಪಟ್ಟಣ ವ್ಯಾಪ್ತಿಯ ಎಲ್ಲಾ ಬಡಾವಣೆಗಳಲ್ಲಿ ಸಸಿಗಳನ್ನು ನೆಟ್ಟು ಹಸಿರಿಕರಣಕ್ಕೆ ಒತ್ತು ನೀಡಲಾಗುತ್ತದೆ ಎಂದು ತಿಳಿಸಿದರು.
ಪುರಸಭೆ ಉಪಾಧ್ಯಕ್ಷ ಕೆ.ಸಿ. ರಮೇಶ್ ಮಾತನಾಡಿ, ಇಂದು ಭೂ ತಾಪಮಾನ ಹೆಚ್ಚುತ್ತಿದ್ದು, ಕೈಗಾರಿಕೆಗಳು ಬೆಳೆಯುತ್ತಿವೆ. ವಿಜ್ಞಾನ ಪರಿಸರವನ್ನು ನಿರ್ಲಕ್ಷಿಸುವಂತೆ ಮಾಡಿದೆ ಎಂದರು.
ಪುರಸಭೆ ಹಿರಿಯ ಸದಸ್ಯ ಬಿ.ಎಸ್. ರುದ್ರಪ್ಪ ಮಾತನಾಡಿ, ಪ್ರಕೃತಿಯನ್ನು ಉಳಿಸಿ ಬೆಳೆಸಬೇಕು. ಗಿಡಗಳನ್ನು ನೆಟ್ಟು ಅರಣ್ಯಗಳನ್ನು ಬೆಳೆಸುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಚಿಂತಿಸಬೇಕೆಂದರು.
ಪಿಎಸ್‌ಐ ವಿಶ್ವನಾಥ ಮಾತನಾಡಿದರು. ತಾಲೂಕು ಆರೋಗ್ಯಾಧಿ ಕಾರಿ ಡಾ| ಜಯಸಿಂಹ, ಪುರಸಭೆ ಸದಸ್ಯರಾದ ಡಿ.ಎಸ್. ವಿಜಯ್, ಎಚ್.ಆರ್. ನಾಗರತ್ನ ವೇದಮೂರ್ತಿ, ಮಾಜಿ ಸದಸ್ಯ ಇಂದ್ರಪ್ಪ, ವಕೀಲ ಎಸ್. ವೇದಮೂರ್ತಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಗದೀಶ್, ಪುರಸಭೆ ಸೂಪರ್ ವೈಸರ್ ಷಣ್ಮುಖಪ್ಪ, ರೈತ ಸಂಘದ ಕಾರ್ಯದರ್ಶಿ ಅಜಯ್, ಪ್ರಗತಿ ಪರ ರೈತ ಸಿದ್ದರಾಮಣ್ಣ ಮತ್ತಿತರರು ಇದ್ದರು. ಪುರಸಭೆಯ 1 ರಿಂದ 3ನೇ ವಾರ್ಡ್ ಸದಸ್ಯರು ಸಸಿ ನೆಡುವ ಕಾರ್ಯಕ್ರವನ್ನು ಆಯೋಜಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.