20ಕ್ಕೂ ಹೆಚ್ಚು ಸೋಂಕಿತರಿದ್ರೆ ಸೀಲ್ ಡೌನ್
Team Udayavani, Jun 10, 2021, 10:48 PM IST
ಚಿತ್ರದುರ್ಗ: ಗ್ರಾಮೀಣ ಭಾಗದಲ್ಲಿ 20ಕ್ಕೂ ಹೆಚ್ಚು ಸೋಂಕಿತರು ಕಂಡು ಬಂದಲ್ಲಿ ಅಂತಹ ಹಳ್ಳಿಗಳನ್ನು ಸೀಲ್ ಡೌನ್ ಮಾಡಿ ಮನೆಗಳಿಗೆ ಕೆಂಪು ಪಟ್ಟಿ ಅಂಟಿಸಿ. ಈ ವಿಷಯದಲ್ಲಿ ನಿರ್ಲಕ್ಷé ವಹಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿ ಕಾರಿ ಕವಿತಾ ಎಸ್. ಮನ್ನಿಕೇರಿ ಎಚ್ಚರಿಕೆ ನೀಡಿದರು.
ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಾಮ ಪಂಚಾಯಿತಿ ಪಿಡಿಒ, ಗ್ರಾಮ ಲೆಕ್ಕಾಧಿ ಕಾರಿ ಹಾಗೂ ಪಂಚಾಯಿತಿ ಮಟ್ಟದ ನೋಡಲ್ ಅ ಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕೊರೊನಾ ಎರಡನೆ ಅಲೆ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಸೋಂಕಿತರು ಕಂಡು ಬಂದರೆ ತಪಾಸಣೆ ನಡೆಸಿ. ನಂತರ ಹತ್ತು ಮಂದಿ ಪ್ರಾಥಮಿಕ ಹಾಗೂ 20 ಮಂದಿ ದ್ವಿತೀಯ ಸಂಪರ್ಕಿತರನ್ನು ಕಡ್ಡಾಯವಾಗಿ ಪತ್ತೆ ಹಚ್ಚಿ ಚಿಕಿತ್ಸೆ ಕೊಡಿಸುವುದು ನಿಮ್ಮ ಜವಾಬ್ದಾರಿ ಎಂದರು.
ಕೋವಿಡ್ ಸೋಂಕು ತಗುಲಿರುವವರನ್ನು ಮನೆಯಲ್ಲೇ ಇರಲು ಬಿಡಬೇಡಿ. ಅವರ ಮನವೊಲಿಸಿ ಕೋವಿಡ್ ಸೆಂಟರ್ ಅಥವಾ ಜಿಲ್ಲಾ ಕೋವಿಡ್ ಕೇಂದ್ರಕ್ಕೆ ಕರೆ ತನ್ನಿ. ಇಲ್ಲದಿದ್ದರೆ ಕೊರೊನಾ ನಿಯಂತ್ರಣ ಕಷ್ಟವಾಗುತ್ತದೆ ಎಂದು ತಾಕೀತು ಮಾಡಿದರು. ಸೋಂಕಿತರನ್ನು ಪ್ರತ್ಯೇಕವಾಗಿಡು ವುದು ಸವಾಲಿನ ಕೆಲಸ. ಕೆಲವರು ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಾಗಲು ವಿತಂಡವಾದ ಮಾಡುತ್ತಾರೆ.
ಅಂಥವರ ಮನವೊಲಿಸಿ ಕೋವಿಡ್ ಕೇರ್ ಸೆಂಟರ್‌ನಲ್ಲಿ ಬೆಡ್, ಆಕ್ಸಿಜನ್, ಊಟ, ಸೊಳ್ಳೆ ಪರದೆ, ಶುದ್ಧ ಕುಡಿಯುವ ನೀರು, ಫ್ಯಾನ್ ಎಲ್ಲವೂ ಇದೆ ಎಂದು ವಿವರಿಸಿ ಹೇಳಿ. ಗ್ರಾಮಗಳಲ್ಲಿ ಶಾಲೆ ಇಲ್ಲವೇ ಸಮುದಾಯ ಭವನಗಳನ್ನು ಮೈಕ್ರೋ ಕೋವಿಡ್ ಕೇರ್ ಸೆಂಟರ್‌ಗಳನ್ನಾಗಿ ತೆರೆದು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡಿಸುವಲ್ಲಿ ನಿಮ್ಮ ಪಾತ್ರ ಮುಖ್ಯ. ಎಲ್ಲವನ್ನೂ ತಹಶೀಲ್ದಾರ್ ಗಳು ಮಾನಿಟರಿಂಗ್ ಮಾಡಬೇಕು. ಕೋವಿಡ್ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸುವುದಷ್ಟೇ ಮುಖ್ಯವಲ್ಲ. ಪ್ರತಿ ದಿನವೂ ಫೋನ್ ಮೂಲಕ ಸೋಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬುವ ಕೆಲಸವಾಗಬೇಕೆಂದು ಕರೆ ನೀಡಿದರು.
ಕೆಲವು ಗ್ರಾಮಗಳಲ್ಲಿ ಚರಂಡಿ ತುಂಬಿ ರಸ್ತೆಯಲ್ಲಿ ಹರಿಯುತ್ತಿದೆ. ಕೋವಿಡ್ ಸಂದರ್ಭದಲ್ಲಿ ಶುಚಿತ್ವ ಕಾಪಾಡುವುದು ಅತ್ಯವಶ್ಯ. ಮಳೆ ಬಂದಾಗ ಕೆರೆಗಳು ಭರ್ತಿಯಾಗಿ ನೀರು ಹರಿಯದೆ ಮನೆಗಳಿಗೆ ಅಪಾಯವಾಗಬಹುದು. ಅದಕ್ಕಾಗಿ ಕೆರೆ ಒತ್ತುವರಿಯಾಗದಂತೆ ಮುತುವರ್ಜಿ ವಹಿಸಿ. ಮಳೆ ಅನಾಹುತಗಳು ಸಂಭವಿಸಿದಲ್ಲಿ ತಕ್ಷಣ ಸ್ಥಳಕ್ಕೆ ದೌಡಾಯಿಸಿ ತುರ್ತು ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.
ಜಿಪಂ ಸಿಇಒ ಡಾ| ಕೆ. ನಂದಿನಿದೇವಿ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಮೈಕ್ರೋ ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆಯಲು ಸರ್ಕಾರ ಪ್ರತಿ ಪಂಚಾಯಿತಿಗೆ ಐವತ್ತು ಸಾವಿರ ರೂ.ಗಳನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಸೋಂಕಿತರಿಗೆ ಉಪಹಾರ, ಊಟಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಗ್ರಾಮಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಬೆಡ್, ಕಾಟ್ ವ್ಯವಸ್ಥೆ ಮಾಡಿಕೊಳ್ಳಿ. ಕುಡಿಯುವ ನೀರು, ಫ್ಯಾನ್, ನ್ಯೂಸ್ ಪೇಪರ್‌ಗಳನ್ನು ಸೋಂಕಿತರಿಗೆ ತಲುಪಿಸಬೇಕು ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಚುನಾಯಿತ ಪ್ರತಿನಿಧಿ ಗಳ ಸಹಕಾರ ಪಡೆದುಕೊಂಡು ನಿಯಂತ್ರಣಕ್ಕೆ ಮುಂದಾಗಿ. ಸಣ್ಣ ಸಣ್ಣ ವಯಸ್ಸಿನವರು ಕೋವಿಡ್‌ಗೆ ಬಲಿಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚು ಜಾಗ್ರತೆ ವಹಿಸಿ. ಸೋಂಕಿನ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಆಸ್ಪತ್ರೆಗೆ ಸೇರುವಂತೆ ಮಾಡಿ ಎಂದು ಸಲಹೆ ನೀಡಿದರು.
ತಾಲೂಕು ವೈದ್ಯಾಧಿ ಕಾರಿ ಡಾ| ಗಿರೀಶ್ ಮಾತನಾಡಿ, ಚಿತ್ರದುರ್ಗ ತಾಲೂಕಿನಾದ್ಯಂತ ಐದು ಕೋವಿಡ್ ಕೇರ್ ಸೆಂಟರ್‌ಗಳಿವೆ. ಗ್ರಾಮ ಮಟ್ಟದಲ್ಲಿ ಶಾಲೆ, ಸಮುದಾಯ ಭವನ ಗುರುತಿಸಿ ಮೈಕ್ರೋ ಕೋವಿಡ್ ಕೇರ್ ಸೆಂಟರ್ ಗಳು ಆರಂಭಿಸಲಾಗುವುದು. ಪ್ರಾಥಮಿಕ ಆರೋಗ್ಯ ಕೇಂದ್ರದವರು ನಿರ್ವಹಣೆ ನೋಡಿಕೊಳ್ಳುತ್ತಾರೆ. ಕೊರೊನಾ ಕೋವಿಡ್ ಕೇರ್ ಸೆಂಟರ್‌ನಲ್ಲಿ ಕಸ ವಿಲೇವಾರಿ ಸಮಸ್ಯೆಯಿದ್ದು, ಸರಿಪಡಿಸಿ ಎಂದು ಹೇಳಿದರು.
ಡಿಎಚ್‌ಒ ಡಾ| ಸಿ.ಎಲ್. ಪಾಲಾಕ್ಷ, ತಹಶೀಲ್ದಾರ್ ಜೆ.ಸಿ. ವೆಂಕಟೇಶಯ್ಯ, ಕೋವಿಡ್-19 ಜಾಗೃತಿ ನೋಡಲ್ ಅ ಧಿಕಾರಿ ಕೃಷ್ಣಪ್ಪ, ತಾಪಂ ಇಒ ಹನುಮಂತಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.