ಆಧುನಿಕ ತಂತ್ರಜ್ಞಾನ ಸದ್ಬಳಕೆಯಾಗಲಿ
Team Udayavani, Jun 24, 2021, 11:00 PM IST
ಚಿತ್ರದುರ್ಗ: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ತಂತ್ರಜ್ಞಾನ ಬಳಸಿಕೊಂಡು ಶಿಕ್ಷಣ ಪಡೆಯುವ ಉದ್ದೇಶದಿಂದ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್, ಪಿಸಿ ವಿತರಣೆ ಮಾಡುತ್ತಿದೆ ಎಂದು ಸಮಾಜಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಹೇಳಿದರು.
ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ 2020-21ನೇ ಸಾಲಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಿಸಿ ಅವರು ಮಾತನಾಡಿದರು. ಆಧುನಿಕ ಕಾಲಘಟ್ಟದಲ್ಲಿ ತಂತ್ರಜ್ಞಾನ ಬೆಳೆಯುತ್ತಿದೆ. ಇಂತಹ ಸಂದರ್ಭದಲ್ಲಿ ತಂತ್ರಜ್ಞಾನದ ಮೂಲಕ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಶಿಕ್ಷಣಕ್ಕೆ ತೊಂದರೆಯಾಗಬಾರದು, ವಿದ್ಯಾರ್ಥಿಗಳು ತಂತ್ರಜ್ಞಾನದ ಮೂಲಕ ಶಿಕ್ಷಣ ಪಡೆಯಲಿ ಎಂಬ ಉದ್ದೇಶದಿಂದ ರಾಜ್ಯದ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ವಿತರಣೆ ಮಾಡುತ್ತಿದ್ದಾರೆ.
ಇದರೊಟ್ಟಿಗೆ ರಾಜ್ಯಾದ್ಯಂತ 2500 ಸ್ಮಾರ್ಟ್ ಕ್ಲಾಸ್ ತರಗತಿ ಕೊಠಡಿಗಳನ್ನು ಉದ್ಘಾಟನೆ ಮಾಡಲಾಗುತ್ತಿದೆ. ಆಧುನಿಕತೆ ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ದೇಶದ ಸತøಜೆಗಳಾಗಬೇಕು ಎಂದರು. ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ಹೊಸ ಸೇರ್ಪಡೆ
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.