ಒಳಚರಂಡಿ ಕಾಮಗಾರಿ ತ್ವರಿತಗೊಳಿಸಿ


Team Udayavani, Jun 25, 2021, 10:51 PM IST

25-17

ಚಿತ್ರದುರ್ಗ: ನಗರಕ್ಕೆ ಒಳಚರಂಡಿ ಕಾಮಗಾರಿ ಮಂಜೂರಾಗಿ ಹಲವು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಟ್ರೀಟ್‌ ಮೆಂಟ್‌ ಪ್ಲಾಂಟ್‌ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ. ಅಗತ್ಯವಿರುವ 5 ಕೋಟಿ ರೂ. ಅನುದಾನವನ್ನು ಡಿಎಂಎಫ್‌ ನಿಧಿ ಯಲ್ಲಿ ಬಳಸಿಕೊಳ್ಳಿ ಎಂದು ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಬಸವರಾಜ್‌ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ನಗರಾಭಿವೃದ್ಧಿ ಪ್ರಾ ಧಿಕಾರ, ಕೆಯುಡಬ್ಲೂಎಸ್‌ ಮತ್ತು ಕೆಯುಐಡಿಎಫ್‌ಸಿಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಮಾತನಾಡಿ, ಚಿತ್ರದುರ್ಗ ನಗರದ ಒಳಚರಂಡಿ ಹಾಗೂ ಮಳೆ ನೀರು ಪಕ್ಕದ ಮಲ್ಲಾಪುರ ಕೆರೆ ಸೇರಿ ಮಲಿನಗೊಂಡಿದೆ.

ಕೆರೆ ಕೋಡಿ ಬಿದ್ದಾಗ ಗೋನೂರು, ದ್ಯಾಮವ್ವನಹಳ್ಳಿ, ಕಲ್ಲಹಳ್ಳಿ ಕೆರೆ ಮೂಲಕ ಚಳ್ಳಕೆರೆ ತಾಲೂಕಿಗೆ ಹರಿದು ಹೋಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಕೆರೆಗೆ ಕಾಯಕಲ್ಪ ನೀಡಲು ಸುಮಾರು 70 ಕೋಟಿ ರೂ. ಅನುದಾನದ ಅವಶ್ಯಕತೆಯಿದೆ ಎಂದು ಸಚಿವರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕೆರೆ ಅಭಿವೃದ್ಧಿಗೆ ಸಂಬಂಧಿ ಸಿದಂತೆ ಅಧಿಕಾರಿಗಳು ಕ್ರಿಯಾಯೋಜನೆ ತಯಾರಿಸಿ ಸಲ್ಲಿಸಬೇಕು. ಈ ಬಗ್ಗೆ ಮುಖ್ಯಮಂತ್ರಿಗಳ ಜತೆಗೆ ಚರ್ಚಿಸಿ ಅನುದಾನ ಬಿಡುಗಡೆಗೆ ಕ್ರಮ ವಹಿಸಲಾಗುವುದು. ಅ ಧಿಕಾರಿಗಳು ವಿಳಂಬ ಮಾಡದೆ ಕಾರ್ಯಪ್ರವೃತ್ತರಾಗಿ ಎಂದರು.

5 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ : ಚಿತ್ರದುರ್ಗ ನಗರದ ಅರಸನ ಕೆರೆಯನ್ನು 5 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲು ಸಭೆ ಅನುಮೋದನೆ ನೀಡಿತು. ಕೆಲವೇ ದಿನಗಳಲ್ಲಿ ಕೆರೆಯ ಅಭಿವೃದ್ಧಿಗೆ ಸಂಬಂ  ಧಿಸಿದಂತೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಸಚಿವ ಬೈರತಿ ತಿಳಿಸಿದರು.

ನಗರದಲ್ಲಿ ಉದ್ಯಾನವನಗಳು ಸಮಪರ್ಕವಾಗಿ ನಿರ್ವಹಣೆ ಆಗುತ್ತಿಲ್ಲ ಎಂಬುದನ್ನು ಶಾಸಕರು ತಿಳಿಸಿದ್ದಾರೆ. ನಗರದ ಉದ್ಯಾನವನಗಳ ಸಮರ್ಪಕ ನಿರ್ವಹಣೆಗಾಗಿ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗುವುದು. ನಗರಸಭೆ, ನಗರ ಪಾಲಿಕೆ ಆಯುಕ್ತರಿಗೆ ವಿಶೇಷವಾದ ಜವಾಬ್ದಾರಿ ನೀಡಿ ಮುಂದಿನ ದಿನಗಳಲ್ಲಿ ಅವುಗಳ ನಿರ್ವಹಣೆಗೆ ಅಧಿ  ಕಾರ ಕೊಡಲಾಗುವುದು ಎಂದರು.

ರೈತರ ಮನವೊಲಿಸಿ 50-50ರ ಅನುದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡಾವಣೆಗಳನ್ನು ಮಾಡುವುದರ ಮೂಲಕ ಪ್ರಾಧಿಕಾರಕ್ಕೆ ಆರ್ಥಿಕ ಸಂಪನ್ಮೂಲಗಳನ್ನು ಕ್ರೂಢೀಕರಿಸುವಂತೆ ನಗರಾಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷರು ಹಾಗೂ ಆಯುಕ್ತರಿಗೆ ಸೂಚಿಸಿದರು.

ನಲ್ಲಿಗಳಿಗೆ ಮೀಟರ್‌ ಅಳವಡಿಸಿ: ಚಿತ್ರದುರ್ಗ ನಗರಕ್ಕೆ 24 ಗಂಟೆ ಕುಡಿಯುವ ನೀರು ಒದಗಿಸಲು ಅಮೃತ ಯೋಜನೆಯಡಿ 112 ಕೋಟಿ ರೂ. ಮಂಜೂರಾಗಿದೆ. 2019 ರಲ್ಲಿ ಇದನ್ನು ಪೂರ್ಣಗೊಳಿಸಬೇಕಿತ್ತು. ಆದರೆ ಇದು ವಿಳಂಬವಾಗಿದ್ದು, ಡಿಸೆಂಬರ್‌ ಒಳಗಾಗಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮೀಟರ್‌ ಅಳವಡಿಸುವ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕೆಂದು ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಮುಖ್ಯ ಇಂಜಿನಿಯರ್‌ಗೆ ಸಚಿವರು ಸೂಚನೆ ನೀಡಿದರು.

ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಟಿ. ಬದರಿನಾಥ್‌, ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ನಗರಾಭಿವೃದ್ಧಿ ಪ್ರಾಧಿ ಕಾರದ ಆಯುಕ್ತ ಸೋಮಶೇಖರ್‌, ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.