30 ಸಾವಿರ ಬೀಜದುಂಡೆ ಬಿತ್ತನೆ: ಶಾಸಕ ತಿಪ್ಪಾರೆಡ್ಡಿ
Team Udayavani, Jul 4, 2021, 9:41 PM IST
ಚಿತ್ರದುರ್ಗ: ಬಿಜೆಪಿ ಕಾರ್ಯಕರ್ತರು ತಯಾರಿಸಿರುವ ಸುಮಾರು 30 ಸಾವಿರ ಬೀಜದುಂಡೆಗಳನ್ನು ಭಾನುವಾರ ಚಂದ್ರವಳ್ಳಿ, ಜೋಗಿಮಟ್ಟಿ ಮತ್ತಿತರೆ ಪ್ರದೇಶಗಳಲ್ಲಿ ಬಿತ್ತನೆ ಮಾಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಗುವುದು ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು. ಬಿಜೆಪಿ ಕಾರ್ಯಕರ್ತರು ತಯಾರಿಸಿರುವ ಬೀಜದುಂಡೆಗಳನ್ನು ವೀಕ್ಷಿಸಿ ಅವರು ಮಾತನಾಡಿದರು. ಜನಸಂಘದ ಸಂಸ್ಥಾಪಕರಲ್ಲಿ ಒಬ್ಬರಾಗಿರುವ ಡಾ| ಶ್ಯಾಮಪ್ರಸಾದ್ ಮುಖರ್ಜಿ ಅವರ ಸ್ಮರಣಾರ್ಥ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪಕ್ಷದ ಯುವಮೋರ್ಚಾ ಕಾರ್ಯ ಕರ್ತರು ಬೀಜದ ಉಂಡೆಗಳನ್ನು ತಯಾರು ಮಾಡುತ್ತಿದ್ದು, ರಾಜ್ಯದೆಲ್ಲೆಡೆ ಬಹಳ ಉತ್ಸಾಹದಿಂದ ಈ ಕಾರ್ಯ ನಡೆಯುತ್ತಿದೆ. ಈಗಾಗಲೇ ಎಲ್ಲೆಲ್ಲಿ ಬೀಜದ ಉಂಡೆಗಳನ್ನು ಹಾಕಬೇಕು ಎನ್ನುವುದನ್ನು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ 8 ಗಂಟೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಭಾಗವಹಿಸಲಿದ್ದಾರೆ ಎಂದರು.
ಭಾರತ ಕೈಗಾರಿಕೆ ಇನ್ನಿತರೆ ಕ್ಷೇತ್ರಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಅದಕ್ಕೆ ಪೂರಕವಾಗಿ ಹಸಿರನ್ನು ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ. ಜಾಗತಿಕ ಹವಾಮಾನದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಕ್ಕೆ ನಾಯಕತ್ವ ವಹಿಸಿ ಕೆಲಸ ಮಾಡುತ್ತಿದ್ದಾರೆ. ಕಳೆದ 7 ವರ್ಷಗಳಲ್ಲಿ ದೇಶಾದ್ಯಂತ ಅರಣ್ಯದ ಪ್ರಮಾಣವನ್ನು ಶೇ. 24ಕ್ಕೆ ವಿಸ್ತರಿಸಲಾಗಿದೆ. ಜತೆಗೆ ವನ್ಯಜೀವಿಗಳನ್ನು ರಕ್ಷಿಸಿ ಅವುಗಳ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಈ ನಿಟ್ಟಿನಲ್ಲಿ ಪಕ್ಷವೂ ಕಾರ್ಯೋನ್ಮುಖವಾಗಿದೆ ಎಂದು ತಿಳಿಸಿದರು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರುಳಿ, ನಗರಸಭಾ ಸದಸ್ಯರಾದ ಹರೀಶ್, ಶಶಿಧರ್, ಸುರೇಶ್, ಪಕ್ಷದ ಮುಖಂಡರಾದ ವೆಂಕಟೇಶ ಯಾದವ್, ಹನುಮಂತೇಗೌಡ, ನಾಗರಾಜ್ ಬೇದ್ರೆ, ರೇಖಾ ಮತ್ತಿತರರು ಇದ್ದರು.
ಭೂಮಿಗೆ ಬೀಜದುಂಡೆ ಸಮರ್ಪಣೆ ಇಂದು: ಜನಸಂಘದ ಸಂಸ್ಥಾಪಕ ಶ್ಯಾಮಪ್ರಸಾದ್ ಮುಖರ್ಜಿ ಅವರ ಜನ್ಮಜಯಂತಿ ಪ್ರಯುಕ್ತ ನಡೆಯುತ್ತಿರುವ ಸೇವಾ ಸಪ್ತಾಹದ ಅಂಗವಾಗಿ ಬೀಜದುಂಡೆಗಳ ಭೂಮಿ ಸಮರ್ಪಣಾ ಮಹಾ ಅಭಿಯಾನ ಕಾರ್ಯಕ್ರಮವನ್ನು ಜು. 4 ರಂದು ಬೆಳಿಗ್ಗೆ 8 ಗಂಟೆಗೆ ಜೋಗಿಮಟ್ಟಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಬೀಜದುಂಡೆ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಜಿಲ್ಲಾಧ್ಯಕ್ಷ ಎ. ಮುರಳಿ, ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ್, ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಎಂ. ಚಂದ್ರಪ್ಪ, ಗೂಳಿಹಟ್ಟಿ ಡಿ. ಶೇಖರ್, ಪೂರ್ಣಿಮಾ ಶ್ರೀನಿವಾಸ್, ಸಂಸದರಾದ ಎ. ನಾರಾಯಣಸ್ವಾಮಿ, ಡಾ| ಜಿ.ಎಂ. ಸಿದ್ದೇಶ್ವರ, ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ, ವಿಭಾಗ ಸಂಘಟನಾ ಕಾರ್ಯದರ್ಶಿ ಜ್ಯೇಷ್ಠ ಪಡಿವಾಳ್, ವಿಭಾಗೀಯ ಪ್ರಭಾರಿ ಜಿ.ಎಂ. ಸುರೇಶ್ ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.