ಕೆಎಂಇಆರ್‌ಸಿ ಪ್ರಕರಣ ಶೀಘ್ರ ಇತ್ಯರ್ಥ ನಿರೀಕ್ಷೆ


Team Udayavani, Jul 6, 2021, 10:31 PM IST

6-20

ಚಿತ್ರದುರ್ಗ: ಸುಪ್ರೀಂ ಕೋರ್ಟ್‌ನಲ್ಲಿ ಕಳೆದ ಹತ್ತು ವರ್ಷಗಳಿಂದ ಉಳಿದಿರುವ ಕೆಎಂಇಆರ್‌ಸಿಗೆ ಸಂಬಂಧಿ ಸಿದ 25 ಸಾವಿರ ಕೋಟಿ ರೂ.ಹಣದ ಪ್ರಕರಣ ಮೂರು ತಿಂಗಳಲ್ಲಿ ಇತ್ಯರ್ಥವಾಗಿ ಹಣ ಸಿಗುವ ನಿರೀಕ್ಷೆ ಇದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್‌ ಆರ್‌. ನಿರಾಣಿ ತಿಳಿಸಿದರು.

ನಗರದ ಜಿಲ್ಲಾ ಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತು ಕೆಎಂಇಆರ್‌ಸಿಯ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮುಂದಿನ 15 ದಿನಗಳಲ್ಲಿ ಈ ಪ್ರಕರಣ ವಿಚಾರಣೆಗೆ ಬರಲಿದ್ದು, ರಾಜ್ಯದಿಂದ ಹಿರಿಯ ನ್ಯಾಯವಾದಿಗಳನ್ನು ನೇಮಿಸಲಾಗಿದೆ.

ಎಲ್ಲವೂ ಸರಿಯಾದರೆ ಮೂರು ತಿಂಗಳಲ್ಲಿ ಚಿತ್ರದುರ್ಗ ಜಿಲ್ಲೆಗೆ ಸಂಬಂಧಿ ಸಿದಂತೆ 3792 ಕೋಟಿ ರೂ. ಅನುದಾನ ದೊರೆಯಲಿದೆ. ಇದನ್ನಾಧರಿಸಿ 4500 ಕೋಟಿ ರೂ.ಗಳಿಗೆ ಸಮಗ್ರ ಡಿಪಿಆರ್‌ ತಯಾರಿಸಲಾಗಿದೆ ಎಂದರು.

ರಾಜ್ಯದಲ್ಲಿ ಗಣಿಗಾರಿಕೆ ಹಾಗೂ ಮರಳಿಗೆ ಸಂಬಂ ಧಿಸಿದಂತೆ ಸ್ಪಷ್ಟವಾದ ನೀತಿ ಇರಲಿಲ್ಲ. ನಮ್ಮ ಸರ್ಕಾರ ಹೊಸ ಮರಳು ನೀತಿ ಹಾಗೂ ಗಣಿ ಪಾಲಿಸಿ 2021-2026 ರೂಪಿಸಿದೆ. ಇದು ಐದು ವರ್ಷದವರೆಗೆ ಚಾಲ್ತಿಯಲ್ಲಿರುತ್ತದೆ. ಸದ್ಯ ಮರಳು ಬ್ಲಾಕ್‌ಗಳಲ್ಲಿ ಸಿಗುತ್ತಿದೆ. ಆದರೆ ಇದನ್ನು ಬ್ಯಾಗ್‌ಗಳಿಗೆ ಹಾಕಿ ಮಾರಾಟ ಮಾಡುವುದು, ಮರಳಿಗೆ ಸಿಮೆಂಟ್‌ ಮಿಶ್ರಣ ಮಾಡಿ ಮಾರಾಟ ಮಾಡುವ ಪ್ರಯೋಗವನ್ನೂ ಮಾಡಲು ಮುಂದಾಗಿದ್ದೇವೆ. ಇದಕ್ಕಾಗಿ ರಾಜ್ಯಾದ್ಯಂತ 500 ಯೂನಿಟ್‌ ತೆರೆಯಬೇಕಿದೆ.

ಆಸಕ್ತರಿಂದ ಅರ್ಜಿ ಆಹ್ವಾನಿಸುತ್ತೇವೆ. ನದಿಗಳಲ್ಲಿ ನೀರು ಸಂಗ್ರಹಣೆಯಾದರೆ ಮರಳು ತೆಗೆಯಲು ಸಾಧ್ಯವಿಲ್ಲ. ಬ್ಯಾಗ್‌ಗಳಲ್ಲಿ ಮರಳು ಸಂಗ್ರಹಿಸಿದರೆ ವರ್ಷಪೂರ್ತಿ ಮರುಳು ಬಳಕೆ ಮಾಡವ ಯೋಜನೆ ಸಿದ್ಧಪಡಿಸಲಾಗಿದೆ ಎಂದು ವಿವರಿಸಿದರು.

ಮರಳು ಬ್ಯಾಗ್‌ಗಳಿಗೆ ಸರ್ಕಾರ ದರ ನಿಗದಿಪಡಿಸಿದ್ದು, ಮರಳು ಬ್ಯಾಗ್‌ಗಳಲ್ಲಿ ಸರ್ಕಾರದ ಲೋಗೊ ಮತ್ತು ಕಂಪನಿ ಹೆಸರು ಇರುತ್ತದೆ. ಪ್ರತಿಯೊಂದು ಬ್ಯಾಗ್‌ ಕ್ರಮಸಂಖ್ಯೆ ಹೊಂದಿದ್ದು, ಇದರಿಂದ ಇಲಾಖೆಗೆ ಬರುವ ಆದಾಯ ಹೆಚ್ಚಾಗಲಿದೆ. ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮರಳು ಸರಬರಾಜು ಮಾಡಲು ಅನುಕೂಲವಾಗಲಿದೆ ಎಂದರು.

ಅರ್ಜಿ ವಿಲೇವಾರಿಗೆ ಮೈನಿಂಗ್‌ ಅದಾಲತ್‌: 2000 ನೇ ಸಾಲಿನಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಪಟ್ಟಂತೆ ವಿವಿಧ ಉತ್ಪಾದನಾ ಚಟುವಟಿಕೆಗಳಿಗೆ ಸಂಬಂ ಸಿದ 6 ಸಾವಿರ ಅರ್ಜಿಗಳು ಬಾಕಿ ಉಳಿದಿವೆ. ಇವುಗಳನ್ನು ಇತ್ಯರ್ಥಗೊಳಿಸಲು ಸಿಂಗಲ್‌ ವಿಂಡೋ ಸಿಸ್ಟಮ್‌ ಜಾರಿಗೆ ತರಲಾಗುವುದು ಎಂದು ಸಚಿವ ನಿರಾಣಿ ತಿಳಿಸಿದರು.

ಸರ್ಕಾರವೇ ಉದ್ದಿಮೆದಾರರ ಮನೆಗೆ‌ ಬರುವ ಸಲುವಾಗಿ ಇಲಾಖೆಯ ಪ್ರತಿಯೊಂದು ವಿಭಾಗದಲ್ಲೂ ಗಣಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಬಗೆಹರಿಸಲು ಮೈನಿಂಗ್‌ ಆದಾಲತ್‌ ಆರಂಭಿಸಲಾಗುವುದು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಬಂ ಧಿಸಿದಂತೆ ಚಿತ್ರದುರ್ಗದಲ್ಲಿ ಸ್ವಂತ ಕಟ್ಟಡ ಇಲ್ಲ. ಇದಕ್ಕಾಗಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಖನಿಜ ಭವನ ನಿರ್ಮಿಸಲು ಶೀಘ್ರದಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು. ರಾಜ್ಯದ 13 ಜಿಲ್ಲೆಗಳಲ್ಲಿ ಖನಿಜ ಭವನಗಳಿದ್ದು, ಇನ್ನುಳಿದ ಜಿಲ್ಲೆಗಳಲ್ಲೂ ಖನಿಜ ಭವನಗಳನ್ನು ಸ್ಥಾಪನೆ ಮಾಡಲಾಗುವುದು ಎಂದರು.

ರೋಗಗ್ರಸ್ಥ ಗಣಿ ಆರಂಭಕ್ಕೆ ಕ್ರಮ: ಈಗಾಗಲೇ ನಷ್ಟದಲ್ಲಿದ್ದು ಮುಚ್ಚಿರುವ ಸಿ ದರ್ಜೆಯ ಹಲವು ಗಣಿಗಳನ್ನು ಆರಂಭಿಸಲು ಚಿಂತನೆ ನಡೆದಿದೆ. ಇದರಲ್ಲಿ ಇಂಗಳದಾಳ್‌ ತಾಮ್ರ ಗಣಿ, ಕೋಲಾರ ಚಿನ್ನದ ಗಣಿಯೂ ಸೇರಿವೆ. ರಾಜ್ಯದಲ್ಲಿ ಖನಿಜ ಸಂಪತ್ತು ಹೆಚ್ಚಿದೆ. ಯಾವ ಯಾವ ಭಾಗದಲ್ಲಿ ಎಷ್ಟಿದೆ ಎಂದು ತಿಳಿಯಲು ಹೈ ರೆಸಲ್ಯೂಷನ್‌ ಸರ್ವೆ ಮಾಡಲು ಜಾಗತಿಕ ಟೆಂಡರ್‌ ಕರೆಯಲಾಗುವುದು.

ಈ ಮೂಲಕ 2023ಕ್ಕೆ ಮೈನಿಂಗ್‌ ಗ್ಲೋಬಲ್‌ ಹೂಡಿಕೆದಾರರ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಶಾಸಕರಾದ ಜಿ.ಎಚ್‌. ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್‌, ಟಿ. ರಘುಮೂರ್ತಿ, ಎಂ. ಚಂದ್ರಪ್ಪ, ಕೆಎಂಇಆರ್‌ಸಿ ಪ್ರಧಾನ ಕಾರ್ಯದರ್ಶಿ ಪಿ.ಸಿ. ರೇ, ನಿರ್ದೇಶಕ ಪಿ.ಎನ್‌. ರವೀಂದ್ರ, ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಜಿಪಂ ಸಿಇಒ ಡಾ| ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ. ರಾಧಿಕಾ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ಚಂದ್ರಶೇಖರ್‌ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.