ಮಂದಿರ ನಿರ್ಮಾಣಕ್ಕೆ ಕೈ ಜೋಡಿಸಿ
ಬೈಕ್ ರ್ಯಾಲಿಗೆ ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ಡಾ.ಡಿ.ಎನ್.ಮಂಜುನಾಥ ಚಾಲನೆ ನೀಡಿದರು.
Team Udayavani, Jan 29, 2021, 3:45 PM IST
ಚಳ್ಳಕೆರೆ: ಕೋಟಿ, ಕೋಟಿ ಶ್ರೀರಾಮಭಕ್ತರ ಕನಸು ನನಸಾಗುವ ಕಾರ್ಯಕ್ಕೆ ಚಾಲನೆ ದೊರಕಿದ್ದು, ಈಗಾಗಲೇ ದೇಶದ ಶ್ರೀರಾಮಭಕ್ತರು, ಕೋಟಿ,ಕೋಟಿ ಹಣವನ್ನು ರಾಮಮಂದಿರ ನಿರ್ಮಾಣಕ್ಕಾಗಿ ಸ್ವಯಂ ಸ್ಪೂರ್ತಿಯಿಂದ ದೇಣಿಗೆ ನೀಡುತ್ತಿದ್ದು, ಈ ಪವಿತ್ರ ಕಾರ್ಯದಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ಡಾ.ಡಿ.ಎನ್.ಮಂಜುನಾಥ ತಿಳಿಸಿದರು.
ಇಲ್ಲಿನ ವಾಲ್ಮೀಕಿ ವೃತ್ತದಲ್ಲಿ ಪ್ರಭುಶ್ರೀ ರಾಮಚಂದ್ರನ ಮಂದಿರ ನಿರ್ಮಾಣ ಹಿನ್ನೆಲೆಯಲ್ಲಿ ಶ್ರೀರಾಮಭಕ್ತರಲ್ಲಿ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಮೋಟಾರ್ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ತಾಲೂಕಿನಾದ್ಯಂತ ದೇಣಿಗೆ ಸಂಗ್ರಹ ಕಾರ್ಯ ನಡೆಯುತ್ತಿದ್ದು, ನಿರೀಕ್ಷೆಗೂ ಮೀರಿ ಹೆಚ್ಚಿನ ಸಂಖ್ಯೆಯ ರಾಮಭಕ್ತರು ಈ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. ಆದರೆ, ಪ್ರತಿಯೊಬ್ಬರೂ ಸಹ ತಮ್ಮ ಕೈಲಾದ ಕಾಣಿಕೆಯನ್ನು ಈ ಕಾರ್ಯಕ್ಕೆ ನೀಡುವ ನಿಟ್ಟಿನಲ್ಲಿ ಬೈಕ್ ರ್ಯಾಲಿಯ ಮೂಲಕ ಶ್ರೀರಾಮಭಕ್ತರಲ್ಲಿ ಜಾಗೃತಿಯನ್ನು
ಉಂಟು ಮಾಡಲಾಗುತ್ತಿದೆ ಎಂದರು.
ಶ್ರೀರಾಮ ಮಂದಿರ ದೇಣಿಗೆ ಸಂಗ್ರಹಣ ಕಾರ್ಯದ ನೇತೃತ್ವದ ಸಮಿತಿಯ ನಿರ್ದೇಶಕಿ ಲಕ್ಷ್ಮೀ ಶ್ರೀವತ್ಸ ಮಾತನಾಡಿ, ಇದೊಂದು ಪುಣ್ಯ ಕ್ಷಣ. ಪ್ರತಿಯೊಬ್ಬ ಹಿಂದೂ ಆತ್ಮ ವಿಶ್ವಾಸದಿಂದ ಹೆಮ್ಮೆ ಪಡುವ ಸಂಗತಿಯಾಗಿದೆ. ಸಾವಿರಾರು ವರ್ಷಗಳ ಶ್ರೀರಾಮಮಂದಿರ ನಿರ್ಮಾಣ
ಕನಸು ನನಸಾಗುವ ಕ್ಷಣ ದಿನದಿಂದ ದಿನಕ್ಕೆ ಹತ್ತಿರ ಬರುತ್ತಿದೆ. ಶ್ರೀರಾಮನ ಜನ್ಮಸ್ಥಾನದಲ್ಲಿಯೇ ಮಂದಿರ ನಿರ್ಮಾಣವಾಗುತ್ತಿದ್ದು, ಇದು ವಿಶ್ವದ ಗಮನ ಸೆಳೆಯಲಿದೆ ಎಂದರು.
ಬೈಕ್ ರ್ಯಾಲಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಾಳೆಮಂಡಿ ರಾಮದಾಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಪಿ.ಜಯಪಾಲಯ್ಯ, ಎಪಿಎಂಸಿ ಅಧ್ಯಕ್ಷ ಡಿ.ಸೋಮಶೇಖರ ಮಂಡಿಮಠ, ನಿರ್ದೇಶಕರಾದ ಸಿ.ಎಸ್ .ಪ್ರಸಾದ್, ಡಿ.ಎಂ.ತಿಪ್ಪೇಸ್ವಾಮಿ, ಬಿಜೆಪಿ ಮುಖಂಡರಾದ ಈಶ್ವರನಾಯಕ, ಚಿದಾನಂದ, ತಿಮ್ಮಣ್ಣ, ಮೋಹನ್, ಟಿ.ಮಂಜುನಾಥ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.