ಅನುದಾನ ಬಳಸದ ಅಧಿಕಾರಿಗಳಿಗೆ ಕ್ಲಾಸ್
Team Udayavani, Jul 7, 2021, 10:23 PM IST
ಚಿತ್ರದುರ್ಗ: ಸರ್ಕಾರದಿಂದ ವಿವಿಧ ಉದ್ದೇಶಗಳಿಗೆ ಬಿಡುಗಡೆಯಾದ ಅನುದಾನವನ್ನು ಕಾಲಮಿತಿಯೊಳಗೆ ಬಳಕೆ ಮಾಡದ ಅ ಧಿಕಾರಿಗಳನ್ನು ಕ್ರೀಡಾ ಸಚಿವ ಡಾ| ನಾರಾಯಣ ಗೌಡ ತರಾಟೆಗೆ ತೆಗೆದುಕೊಂಡರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕ್ರೀಡಾ ಇಲಾಖೆ, ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಬಳಕೆ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮತ್ತಿತರೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರ ಅನುದಾನ ನೀಡಿದರೂ ಸರಿಯಾದ ರೀತಿಯಲ್ಲಿ ನಿರ್ಮಾಣ ಏಜೆನ್ಸಿಯವರು ಕಾರ್ಯ ನಿರ್ವಹಿಸುತ್ತಿಲ್ಲ. ನಿರ್ಮಾಣ ಏಜೆನ್ಸಿಯವರ ವಿಳಂಬದಿಂದ ಅಭಿವೃದ್ಧಿ ಕಾರ್ಯಗಳಿಗೆ ತೊಂದರೆಯಾಗುತ್ತಿದೆ ಎಂದು ಕೆಆರ್‌ಐಡಿಎಲ್, ನಿರ್ಮಿತಿ ಕೇಂದ್ರ, ಭೂಸೇನಾ ನಿಗಮದ ಅಧಿ ಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಒಟ್ಟು 24.94 ಕೋಟಿ ರೂ. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನವಿದ್ದು, ದಾಖಲೆ ಪ್ರಕಾರ ಅನುದಾನದ ಶೇ.1 ರಷ್ಟೂ ಖರ್ಚಾಗಿಲ್ಲ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅ ಧಿಕಾರಿಗಳು ತಕ್ಷಣ ಎಚ್ಚೆತ್ತು ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.
ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಮಾತನಾಡಿ, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನಕ್ಕೆ ಸಂಬಂಧಿ ಸಿದಂತೆ ಎಲ್ಲ ಅನುದಾನಕ್ಕೂ ಕ್ರಿಯಾ ಯೋಜನೆ ನೀಡಲಾಗಿದೆ. ಹೆಚ್ಚಿನ ಅನುದಾನಕ್ಕೆ ಬೇಡಿಕೆ ಇಡಗಿದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ದಾಖಲೆ ಪ್ರಕಾರ ಅನುದಾನದ ಬಳಕೆ ಶೇ. 1ರಷ್ಟು ಅನುದಾನವೂ ಖರ್ಚಾಗಿಲ್ಲ. ಕಾಮಗಾರಿ ಮುಗಿಸಿ ಅಪ್ರೂವ್ ಮಾಡದೆ ಅಧಿ ಕಾರಿಗಳು ನಿರ್ಲಕ್ಷé ಮಾಡಿದ್ದರಿಂದ ಸಮಸ್ಯೆಯಾಗಿದೆ. ಶಾಸಕರು ಅಧಿ ಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡಬೇಕು. ಸರ್ಕಾರ ನೀಡಿರುವ ಅನುದಾನ ಖರ್ಚಾಗದಿದ್ದರೆ ಸರ್ಕಾರ ಅನುದಾನವನ್ನು ವಾಪಾಸ್ ಪಡೆಯಲಿದೆ ಎಂದರು.
ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನಕ್ಕೆ ಸಂಬಂಧಿ ಸಿದಂತೆ ನಿಯಮಾವಳಿಗಳನ್ನು ಸರಳೀಕರಣ ಮಾಡುವ ಅಗತ್ಯವಿದೆ. ಅನುದಾನ ಮಂಜೂರಾತಿಯಲ್ಲಿ ಸಾಕಷ್ಟು ವಿಳಂಬವಾಗುತ್ತಿದೆ. ಸ್ಥಳೀಯ ಶಾಸಕರ ಅನುದಾನದಲ್ಲಿ ನಿರ್ಮಾಣವಾಗುವ ಕೆಲಸಗಳು ಶೀಘ್ರದಲ್ಲಿ ಪ್ರಾರಂಭ ವಾಗಬೇಕು. ಆದರೆ ಅನುದಾನ ಮಂಜೂರಾಗಲು ವಿವಿಧ ಇಲಾಖೆಗಳಲ್ಲಿ ತಿಂಗಳುಗಳ ಕಾಲ ವ್ಯಯವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕಾಮಗಾರಿಯಲ್ಲಿ ಲೋಪವಾದರೆ ಕ್ರಮ: ಅ ಧಿಕಾರಿಗಳು ಅನುದಾನ ಬಿಡುಗಡೆಯಲ್ಲಿ ಅಥವಾ ಕಾಮಗಾರಿಯಲ್ಲಿ ಲೋಪವೆಸಗಿದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಅ ಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸಾಮಾನ್ಯವಾಗಿ ಯೋಜನಾ ಇಲಾಖೆ ಮುಖ್ಯಮಂತ್ರಿಗಳ ಬಳಿ ಇರುತ್ತಿತ್ತು. ಸಮಯದ ಅಭಾವದಿಂದ ಸರಿಯಾಗಿ ಎಲ್ಲವವನ್ನೂ ಗಮನಿಸಲು ಸಾಧ್ಯವಾಗುತ್ತಿರಲಿಲ್ಲ. ಮುಖ್ಯಮಂತ್ರಿಗಳು ಆ ಇಲಾಖೆಯನ್ನು ನನಗೆ ನೀಡಿ ಜವಾಬ್ದಾರಿ ವಹಿಸಿದ್ದಾರೆ.
ಹೀಗಾಗಿ ಸುಮ್ಮನೆ ಕೂರಲು ಸಾಧ್ಯವಿಲ್ಲ. ಪ್ರತಿ ಜಿಲ್ಲೆಗೆ ತೆರಳಿ ಪರಿಶೀಲನೆ ನಡೆಸುತ್ತೇನೆ. ಕೂಲಂಕುಷವಾಗಿ ಎಲ್ಲವನ್ನೂ ಗಮನಿಸಿ ಅನುದಾನ ಬಿಡುಗಡೆ ಹಾಗೂ ಅನುದಾನ ಬಳಕೆಯನ್ನು ಗಮನಿಸುತ್ತೇನೆ ಎಂದು ಸಚಿವ ಡಾ| ನಾರಾಯಣಗೌಡ ತಿಳಿಸಿದರು.
ಕೃಷಿಹೊಂಡ ಫಲಾನುಭವಿಗಳ ಮಾಹಿತಿ ನೀಡಿ: ಕೃಷಿಹೊಂಡಗಳನ್ನು ವೈಜ್ಞಾನಿಕವಾಗಿ ನಿರ್ಮಿಸಬೇಕು. ಕೃಷಿ ಹೊಂಡ ಫಲಾನುಭವಿಗಳ ಸಂಪೂರ್ಣ ಮಾಹಿತಿಯನ್ನು ಶಾಸಕರಿಗೆ ನೀಡಬೇಕು ಎಂದು ಸಚಿವರು ಸೂಚಿಸಿದರು. ಕೃಷಿಹೊಂಡ ತೆಗೆದು ಒಂದೇ ವರ್ಷದಲ್ಲೇ ಮುಚ್ಚುತ್ತಾರೆ. ಈ ಫಲಾನುಭವಿಗಳ ಆಯ್ಕೆಯಲ್ಲಿ ಅಕ್ರಮ ನಡೆಯುತ್ತದೆ. ಹಾಗಾಗಿ ಶಾಸಕರ ಗಮನಕ್ಕೆ ತರದೆ ಫಲಾನುಭವಿಗಳ ಆಯ್ಕೆ ಆಗಬಾರದು ಎಂದು ಜಂಟಿ ಕೃಷಿ ನಿರ್ದೇಶಕರಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಕಳೆದ ಐದು ವರ್ಷದಲ್ಲಿ ನಿರ್ಮಾಣಗೊಂಡ ಕೃಷಿಹೊಂಡಗಳ ಸಂಪೂರ್ಣ ಮಾಹಿತಿ ಪಡೆದು, ಶಾಸಕರು ಸ್ಥಳ ಪರಿಶೀಲನೆ ಮಾಡಿ ಪರಿಶೀಲಿಸಬೇಕೆಂದರು. ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀಬಾಯಿ ಮಾತನಾಡಿ, ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಕಳೆದ ವರ್ಷ 2.72 ಕೋಟಿ ರೂ. ಅನುದಾನ ಬಿಡುಗಡೆಯಾಗಿತ್ತು. ಈ ಅನುದಾನವನ್ನು 10 ಯೋಜನೆಗಳಿಗೆ ಬಳಸಿದ್ದು, ಶೇ. 99 ಅನುದಾನ ಖರ್ಚಾಗಿದೆ.
ಉಳಿದ ಅನುದಾನದಲ್ಲಿ ಗ್ರಾಮೀಣ ಕ್ರೀಡಾಕೂಟ ಹಾಗೂ 150 ಮಕ್ಕಳಿಗೆ ವಿವಿ ಸಾಗರದಲ್ಲಿ ಜಲಸಾಹಸ ಶಿಬಿರ ಆಯೋಜಿಸಲಾಗಿದೆ. ಪ್ರಸಕ್ತ ವರ್ಷ 1.92 ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಿದ್ದು, ಅನುಮೋದನೆಯ ಹಂತದಲ್ಲಿದೆ ಎಂದು ತಿಳಿಸಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು 6 ಕೋಟಿ ರೂ. ಅನುದಾನದ ಅಗತ್ಯವಿದೆ ಎಂದು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜಿಲ್ಲೆಯಲ್ಲಿ ಕ್ರೀಡಾಂಗಣಗಳ ಅಭಿವೃದ್ಧಿಗೆ ಜಿಲ್ಲಾ ಖನಿಜ ಪ್ರತಿಷ್ಠಾನದ ನಿ ಧಿ (ಡಿಎಂಎಫ್) ಬಳಸುವಂತೆ ಸೂಚಿಸಿದರು. ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ವಿವಿಧ ಕಾಮಗಾರಿಗಳ ಮಾಹಿತಿ ನೀಡಿದರು.
ಸಭೆಯಲ್ಲಿ ಶಾಸಕ ಟಿ. ರಘುಮೂರ್ತಿ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಜೀವನ್ ಮೂರ್ತಿ, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಅಪರ ಜಿಲ್ಲಾಧಿ ಕಾರಿ ಇ. ಬಾಲಕೃಷ್ಣ, ಉಪವಿಭಾಗಾ ಧಿಕಾರಿ ಚಂದ್ರಯ್ಯ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.