ಬಿಜೆಪಿ ಆಡಳಿತದಿಂದ ಭ್ರಮನಿರಸನ


Team Udayavani, Jul 9, 2021, 10:12 PM IST

9-18

ಚಳ್ಳಕೆರೆ: ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ಬಗ್ಗೆ ಜನತೆ ಭ್ರಮನಿರಸನಗೊಂಡಿದ್ದಾರೆ. ಪೆಟ್ರೋಲ್‌, ಡೀಸೆಲ್‌ ಹಾಗೂ ಅಡುಗೆ ಅನಿಲ ದರ ವಿಪರೀತ ಏರಿಕೆಯಾಗಿದ್ದು, ಬಡವರ ಬದುಕು ಬೀದಿಗೆ ಬಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ಬೆಂಗಳೂರಿನಿಂದ ಬಳ್ಳಾರಿಗೆ ಹೋಗುವ ಮಾರ್ಗ ಮಧ್ಯೆ ನಗರದ ಶಾಸಕರ ಭವನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ ಆಡಳಿತದಿಂದ ಬೇಸತ್ತ ಜನರು ಕಾಂಗ್ರೆಸ್‌ನತ್ತ ಆಕರ್ಷಿತರಾಗುತ್ತಿದ್ದಾರೆ. ಹಾಗಾಗಿ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್‌ ಪಕ್ಷ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ಏಳು ವರ್ಷಗಳಿಂದ ಬಿಜೆಪಿಯ ದುರಾಡಳಿತದಿಂದ ಜನರು ಬೇಸರಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಪಕ್ಷದ ಎಲ್ಲಾ ಕಾರ್ಯಕರ್ತರು, ಅಭಿಮಾನಿಗಳು, ಮುಖಂಡರು ಸಂಘಟಿತರಾಗಿ ದುಡಿದಲ್ಲಿ ಮಾತ್ರ ಕಾಂಗ್ರೆಸ್‌ ಪಕ್ಷದ ಅಧಿಕಾರದ ಕನಸು ನನಸಾಗಲು ಸಾಧ್ಯ ಎಂದರು. ಶಾಸಕ ಟಿ. ರಘುಮೂರ್ತಿ ಮಾತನಾಡಿ, ಕಳೆದ ನೂರಾರು ವರ್ಷಗಳಿಂದ ರಾಷ್ಟ್ರದ ಎಲ್ಲಾ ವರ್ಗದ ಹಿತವನ್ನು ಕಾಯ್ದ ಏಕೈಕ ಪಕ್ಷ ಕಾಂಗ್ರೆಸ್‌ ಆಗಿದೆ. ಕಾಂಗ್ರೆಸ್‌ ಪಕ್ಷದಲ್ಲಿ ನುರಿತ ಅನುಭವಿ ನಾಯಕರಿದ್ದು, ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಮುಂಬರುವ ದಿನಗಳಲ್ಲಿ ಎಲ್ಲಾ ಚುನಾವಣೆಗಳಲ್ಲೂ ಪಕ್ಷ ಗೆಲುವು ಸಾಧಿ ಸಲಿದೆ. ಕಾರ್ಯಕರ್ತರು ಬಿಜೆಪಿಯ ಅಪಪ್ರಚಾರಕ್ಕೆ ಕಿವಿಗೊಡದೆ ಪಕ್ಷದ ಏಳಿಗಾಗಿ ದುಡಿಯಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ ಪ್ರಭುದೇವ್‌, ಎಸ್‌.ಎಚ್‌. ಸೈಯದ್‌, ಮಹಡಿ ಶಿವಮೂರ್ತಿ, ನಗರಸಭಾಧ್ಯಕ್ಷೆ ಬಿ.ಸಿ. ಜಯಲಕ್ಷ್ಮೀ ಕೃಷ್ಣಮೂರ್ತಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಟಿ. ರಮೇಶ್‌ ಗೌಡ, ಸದಸ್ಯರಾದ ಚಳ್ಳಕೆರೆಯಪ್ಪ, ಕೆ. ವೀರಭದ್ರಪ್ಪ, ಎಂ.ಜೆ. ರಾಘವೇಂದ್ರ, ಮುಖಂಡರಾದ ಕಿರಣ್‌ ಶಂಕರ್‌, ಫರೀದ್‌ ಖಾನ್‌, ಆರ್‌. ಪ್ರಸನ್ನಕುಮಾರ್‌, ಭರಮಣ್ಣ, ಆಂಜನೇಯ, ಪರಸಪ್ಪ, ಜಿ. ವೀರೇಶ್‌, ಸತ್ಯಪ್ಪ, ದೊಡ್ಡರಂಗಪ್ಪ, ಅನ್ವರ್‌ ಮಾಸ್ಟರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.