ದೇಸಿ ಗೋವುಗಳ ಸಂರಕ್ಷಣೆ ಅಗತ್ಯ: ಶಾಸಕ ರಘುಮೂರ್ತಿ

Team Udayavani, Jul 12, 2021, 10:46 PM IST

12-21

ಚಿತ್ರದುರ್ಗ: ದೇಸಿ ಗೋವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಮಾಡಬೇಕು ಎಂಬ ಕಾರಣಕ್ಕೆ ಜಿಲ್ಲೆಯಲ್ಲಿ ದೇಶಿ ತಳಿ ಗಿರ್‌ ಹಸುಗಳ ಸಾಕಾಣಿಕೆದಾರರ ಸಹಕಾರ ಸಂಘ ಸ್ಥಾಪಿಸಿದ್ದು, ಭವಿಷ್ಯದಲ್ಲಿ ಇದನ್ನು ದೊಡ್ಡ ಸಂಸ್ಥೆಯನ್ನಾಗಿ ಮಾಡಿ ಇಡೀ ರಾಜ್ಯಕ್ಕೆ ವಿಸ್ತರಿಸುವ ಚಿಂತನೆ ಇದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ನಗರದ ಜೆಸಿಆರ್‌ ಮುಖ್ಯ ರಸ್ತೆಯ ಸಾಯಿಬಾಬಾ ಮಂದಿರದ ಪಕ್ಕದಲ್ಲಿ ದೇಸಿ ತಳಿ ಹಸುಗಳ ಹಾಲು ಹಾಗೂ ಇದರ ಉತ್ಪನ್ನಗಳ ಮಾರಾಟ ಮಳಿಗೆ ದುರ್ಗಾಮೃತ ದೇಸಿ ಎ2 ಮಿಲ್ಕ್ನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ರೋಗ ನಿರೋಧಕ ಶಕ್ತಿ ಹೊಂದಿರುವ ದೇಸಿ ತಳಿಗಳ ಗೋವಿನ ಉತ್ಪನ್ನಗಳನ್ನು ಗ್ರಾಹಕರಿಗೆ ತಲುಪಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ದೇಸಿ ಗೋವುಗಳ ಸಾಕಾಣಿಕೆದಾರರ ಸಹಕಾರ ಸಂಘ ಸ್ಥಾಪಿಸಲಾಗಿದ್ದು, ಗ್ರಾಹಕರು ನಮ್ಮ ದೇಸಿ ತಳಿಗಳ ಹಸುವಿನ ಹಾಲನ್ನು ಖರೀದಿಸುವ ಮೂಲಕ ದೇಸಿ ಹಸುಗಳ ಸಾಕಾಣಿಕೆದಾರರನ್ನು ಪ್ರೋತ್ಸಾಹಿಸಿ ದೇಸಿ ಗೋವುಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.

ಗ್ರಾಹಕರಿಗೆ ಲೀಟರ್‌ಗೆ 75 ರೂ.ನಂತೆ, ತಮ್ಮ ಮನೆಗೆ ಡೆಲಿವರಿ ನೀಡಲು 80 ರೂ. ನಿಗ ದಿ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ದೇಸಿ ತಳಿ ಹಸುಗಳ ಬೆಣ್ಣೆ, ತುಪ್ಪ, ಆಕರ ಸೇರಿದಂತೆ ಮತ್ತಿತರ ಉತ್ಪನ್ನಗಳ ಮಾರಾಟ ಮಾಡಲಾಗುವುದು ಎಂದು ಹೇಳಿದರು.

ಟೌನ್‌ ಕೋ ಆಪರೇಟಿವ್‌ ಸೊಸೈಟಿ ಅಧ್ಯಕ್ಷ ನಿಶಾನಿ ಎಂ. ಜಯಣ್ಣ ಮಾತನಾಡಿ, ಸುಮಾರು 85 ದೇಸಿ ತಳಿ ಗಿರ್‌ ಹಸುಗಳ ಸಾಕಾಣಿಕೆ ಮಾಡುತ್ತಿದ್ದೇವೆ. ಶ್ರದ್ಧೆ ಆಸಕ್ತಿಯಿಂದ ಮಾಡಿದರೆ ಯಸಸ್ಸು ಸಾ ಧಿಸಬಹುದು ಎಂದರು. ಕಬೀರಾನಂದ ಆಶ್ರಮದ ಶಿವಲಿಂಗಾನಂದ ಸ್ವಾಮೀಜಿ ಮಾತನಾಡಿ, ದುಶ್ಚಟಗಳಿಂದ ದೂರ ಇದ್ದು ದೇಸಿ ತಳಿ ಹಸುಗಳ ಹಾಲು ಮತ್ತಿತರ ಉತ್ಪನ್ನಗಳನ್ನು ಸೇವಿಸಬೇಕು. ಇದರಿಂದ ಸುಖ ನಿದ್ರೆ, ಉತ್ತಮ ಆರೋಗ್ಯ ಹೊಂದಲು ಸಾಧ್ಯ. 33 ಕೋಟಿ ದೇವತೆಗಳು ಗೋವಿನಲ್ಲಿವೆ. ಗೋವುಗಳನ್ನು ಸಾಕುವುದರಿಂದ ನಾನಾ ರೋಗಗಳಿಂದ ಮುಕ್ತಿ ಹೊಂದಬಹುದು ಎಂದು ಹೇಳಿದರು.

ರಾಜರಾಜೇಶ್ವರಿ ದೇವಸ್ಥಾನದ ನಾಗರಾಜ್‌ ಭಟ್‌ ಮಾತನಾಡಿ, ನಮ್ಮಲ್ಲಿ ವೈಯಕ್ತಿಕವಾಗಿ ದೇಸಿ ತಳಿ ಹಸುಗಳನ್ನು ಸಾಕಾಣಿಕೆ ಮಾಡುವವರು ತುಂಬಾ ಜನ ಇರಬಹುದು. ಆದರೆ ದೇಸಿ ತಳಿ ಹಸುಗಳ ಸಾಕಾಣಿದಾರರ ಸಹಕಾರ ಸಂಘ ಮಾಡಿರುವುದು ಜಿಲ್ಲೆ ಅಷ್ಟೇ ಅಲ್ಲದೇ ರಾಜ್ಯದಲ್ಲಿ ಇದೇ ಮೊದಲು ಇರಬಹುದು ಎಂದರು.

ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್‌. ಮಂಜುನಾಥ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್‌, ಜಿಪಂ ಮಾಜಿ ಅಧ್ಯಕ್ಷ ರವಿಕುಮಾರ್‌, ಮಾಜಿ ಸದಸ್ಯ ಬಾಬುರೆಡ್ಡಿ, ತಾಪಂ ಮಾಜಿ ಅಧ್ಯಕ್ಷ ಡಿ.ಎಂ. ಲಿಂಗರಾಜು ಮತ್ತಿತರರು ಭಾಗವಹಿಸಿದ್ದರು.

ದೇಸಿ ತಳಿ ಹಸುಗಳ ಸಾಕಾಣಿಕೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಉಪಾಧ್ಯಕ್ಷರಾಗಿ ನಾಗರಾಜ್‌ ಭಟ್‌, ಖಜಾಂಚಿ ಮನೋಹರ್‌, ಕಾರ್ಯದರ್ಶಿ ಜ್ಞಾನೇಶ್ವರ್‌ ಸೇರಿ ಸಂಘದಲ್ಲಿ ಸುಮಾರು 15 ಮಂದಿ ಇದ್ದಾರೆ.

ಟಾಪ್ ನ್ಯೂಸ್

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

1-dinnu

Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ

highcourt

Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ

1-viji

Waqf; ವಿಜಯೇಂದ್ರ ವಿರುದ್ಧ ಲಂಚ ಆರೋಪ: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ

Anura Kumara Dissanayake

Sri Lanka; ಭಾರತದ ವಿರುದ್ದ ನಮ್ಮ ಭೂಮಿಯನ್ನು ಬಳಸಲು ಬಿಡೆವು: ಲಂಕಾ ಅಧ್ಯಕ್ಷ ಡಿಸಾನಾಯಕೆ

Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?

Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

1-dinnu

Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ

highcourt

Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.