ಸೋಲಿಲ್ಲದ ಸರದಾರ ಜಿ.ಮಾದೇಗೌಡರು ನೆನಪು ಮಾತ್ರ


Team Udayavani, Jul 18, 2021, 9:41 PM IST

18-20

ಮಂಡ್ಯ: ಜಿ.ಮಾದೇಗೌಡರು ಸಲ್ಲಿಸಿರುವ ಸಾಮಾಜಿಕ ಸೇವೆ ಅಪಾರವಾದುದು. ರೈತ ಕುಟುಂಬದಲ್ಲಿ ಜನಿಸಿದ ಇವರು, ರೈತರ ಕಷ್ಟ-ಸುಖಗಳನ್ನು ಅರಿತು ಅವರ ಆರೋಗ್ಯ, ಶಿಕ್ಷಣ, ಬಡತನ ಅರ್ಥ ಮಾಡಿಕೊಂಡು ಸಲ್ಲಿಸಿ ರುವ ಸೇವೆ, ಕೈಗೊಂಡಿರುವ ಕಾರ್ಯಕ್ರಮಗಳು ಶ್ಲಾಘ ನೀಯ.

ರೈತರ ಜೀವನದಿಯಾಗಿರುವ ಕಾವೇರಿ ನೀರಿನ ಹಕ್ಕಿಗಾಗಿ ಹೋರಾಟ ನಡೆಸಿ ಕಾವೇರಿ ಹಿತರಕ್ಷಣಾ ಸಮಿತಿ ಯ ಅಧ್ಯಕ್ಷರಾಗಿದ್ದುಕೊಂಡು ಕಾವೇರಿ ನೀರನ್ನು ಬೇರೆ ಕಡೆಗೆ ಕೊಡ ದಂತೆ ತಮ್ಮ ದಿಟ್ಟ ಹಾಗೂ ದಕ್ಷ ನಾಯಕತ್ವದಲ್ಲಿ ರೈತರ ಸಹಕಾರದೊಡನೆ ಉಳಿಸಿಕೊಂಡು ಹೋಗುತ್ತಿದ್ದರು. ರೈತರ ಪ್ರಮುಖ ಬೆಳೆಯಾದ ಕಬ್ಬಿಗೆ ಸೂಕ್ತ ಬೆಲೆ ಕೊಡಿಸಲು ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಭಾರತೀನಗರದಲ್ಲಿ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ ಸ್ಥಾಪಿಸಿ ಆ ಭಾಗದ ರೈತರ ಕಣ್ಮಣಿಯಾಗಿದ್ದರು.

ಮದ್ದೂರು ತಾಲೂಕಿನ ಚಿಕ್ಕರಸಿನಕೆರೆ ಹೋಬಳಿಯ ಗುರುದೇವರಹಳ್ಳಿ ಎಂಬ ಸಣ್ಣ ಗ್ರಾಮ ದ ಪುಟ್ಟೇಗೌಡ-ಕಾಳಮ್ಮ ಅವರ 6 ಮಕ್ಕಳಲ್ಲಿ ಕೊನೆಯವರಾಗಿ 1928ರ ಜು.14ರಂದು ಮಾದೇಗೌಡರು ಜನಿಸಿದರು. ಎತ್ತರದ ನಿಲುವು, ಎತ್ತರಕ್ಕೆ ತಕ್ಕ ಮೈಕಟ್ಟು, ಗೋ ಧಿ ಬಣ್ಣ ಮೊದಲ ನೋಟದಲ್ಲೇ ಗೌರವ ಮೂಡುವಂತಹ ಸುಲಕ್ಷಣ ರೂಪು. ಮಾತು ಕಡಿಮೆ, ಹಿಡಿದ ಕೆಲಸ ಮುಗಿ ಯುವವರೆಗೂ ಬಿಡದ ಛಲ, ಕಪಟವಿಲ್ಲದ ನೇರ ನಡ ವಳಿಕೆ, ತಮಗೆ ಅನ್ನಿಸಿದ್ದನ್ನು ಯಾವ ಮುಲಾಜಿಗೂ ಒಳಗಾಗದೆ ಹೇಳುವ ಎದೆಗಾರಿಕೆ.

ಸಾಕಷ್ಟು ಸಾಧನೆ ಮಾಡಿ ದ್ದರೂ ಹಮ್ಮಿಲ್ಲದ ಸ್ವಭಾವ. ರೈತರು, ಕಾರ್ಮಿಕರು, ಜಾನಿಗಳ ಬಗ್ಗೆ ಅಪಾರ ಪ್ರೀತಿ, ಕೆಲಸ ಕದಿಯುವವರನ್ನು ಕಂಡರೆ ಅಷ್ಟೇ ಸಿಡುಕು, ಮೂಗಿನ ತುದಿಯಲ್ಲೇ ಕೋಪ ಈ ಎಲ್ಲ ಗುಣಗಳನ್ನು ಒಂದು ಗೂಡಿಸಿದರೆ ಬರುವ ವ್ಯಕ್ತಿತ್ವವೇ ಜಿ.ಮಾದೇಗೌಡರದು.

ಹುಟ್ಟೂರು ಗುರುದೇವರಹಳ್ಳಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಅನುಕೂಲವಿರಲಿಲ್ಲ. ಆದ್ದರಿಂದ ಅವರ ತಾಯಿಯ ತವರೂರು ಮಂಡ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆದು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿಎ ಪದವಿ ಪಡೆದರು. ನಂತರ ಬೆಂಗಳೂರಿಗೆ ತೆರಳಿ ವಕೀಲ ಪದವಿ ಪಡೆದರು. ವಕೀಲ ಪದವಿ ಪಡೆದರೂ ವಕೀಲರಾದರೂ ಅಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ. ಹಣ ಮಾಡುವ ವಕೀಲಿ ಹುದ್ದೆಗಿಂತ ಜನಸೇವೆ ಮಾಡುವ ಜನನಾಯಕ ಹುದ್ದೆ ಅವರನ್ನು ಕೈಬೀಸಿ ಕರೆಯಿತು.

ರಾಜಕೀಯ ಪ್ರವೇಶ: 1959ರಲ್ಲಿ ತಾಲೂಕು ಬೋರ್ಡ್‌ ಚುನಾವಣೆ ಬಂದಾಗ, ಅಂದು ಮಂಡ್ಯ ಮತ್ತು ಮದ್ದೂರಿನ ಕಾಂಗ್ರೆಸ್‌ ಪಕ್ಷದ ಜನಪ್ರಿಯ ನಾಯಕರಾಗಿದ್ದ ಕೆ.ವಿ.ಶಂಕರಗೌಡ ಮತ್ತು ಎಚ್‌. ಕೆ.ವೀರಣ್ಣಗೌಡರು ಕಾಂಗ್ರೆಸ್‌ನಲ್ಲಿ ಚಟುವಟಿಕೆಯಿಂದ ಓಡಾಡುತ್ತಿದ್ದ ಮಾದೇ ಗೌಡರನ್ನು ಕರೆದು, ತಾಲೂಕು ಬೋರ್ಡ್‌ ಚುನಾವಣೆಗೆ ನಿಲ್ಲಿಸಿದರು. ಇದರಲ್ಲಿ ಗೆದ್ದು ಬಂದರು. ಇದು ಗೌಡರ ರಾಜಕೀಯದಲ್ಲಿ ಸಾಮಾನ್ಯ ವಾದ ಗೆಲುವಲ್ಲ. ಅವರ ಮುಂದಿನ ಗೆಲುವಿನ ಮಾಲೆಗೆ ನಾಂದಿಯಾಯಿತು. ನಂತರ ಮಾದೇಗೌಡರ ಬದುಕು 3 ದಶಕಗಳ ಕಾಲ ಬರೀ ಗೆಲುವಾಗಿತ್ತು. 1962ರಲ್ಲಿ ವಿಧಾನಸಭೆ ಚುನಾವಣೆ ಬಂದಾಗ, ಮಳವಳ್ಳಿ ಕ್ಷೇತ್ರದ ಶಾಸಕರಾಗಿದ್ದ ಹಿಟ್ಟನಹಳ್ಳಿ ಕೊಪ್ಪಲಿನ ಎಚ್‌.ವಿ.ವೀರೇಗೌಡರು ಬಿಟ್ಟು ಕೊಟ್ಟ ಸ್ಥಾನಕ್ಕೆ ಮಾದೇಗೌಡರು ನಿಂತು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು.

ಆಗ ಮಾದೇಗೌಡರಿಗೆ ಕೇವಲ 32 ವರ್ಷ. ಮಳವಳ್ಳಿ, ಕಿರುಗಾವಲು ಕ್ಷೇತ್ರದ ಕೇಂದ್ರವಾದ ಕುಗ್ರಾಮ ಕಾಳ ಮುದ್ದನದೊಡ್ಡಿ ಯನ್ನು ಕೇಂದ್ರವನ್ನಾಗಿಟ್ಟುಕೊಂಡು ಒಂದೊಂದೇ ಜನಪರ ಕೆಲಸ ಮಾಡತೊಡಗಿದರು. ಕೃಷಿ ಕ್ಷೇತ್ರ, ಆರ್ಥಿಕ ಕ್ಷೇತ್ರ, ಶಿಕ್ಷಣ ಕ್ಷೇತ್ರಗಳ ಬಗ್ಗೆ ಗೌಡರು ಕೈಗೊಂಡ ಪ್ರಗತಿಪರ ಕೆಲಸಗಳು ಜನಮೆಚ್ಚುಗೆ ಗಳಿಸಿದ್ದವು. ಇದಕ್ಕೆ ಅವರು ಮತ್ತೆ ಮತ್ತೆ ಚುನಾವಣೆಗಳಲ್ಲಿ ಗೆಲುವು ಸಾಧಿ ಸುತ್ತಿದ್ದದ್ದೇ ಪ್ರತ್ಯಕ್ಷ ಸಾಕ್ಷಿ. ಚುನಾವಣಾ ಸಮಯದಲ್ಲಿ ಖರ್ಚಿಗೆಂದು ಗೌಡರಿಗೆ ತಾವೇ ಕಾಸು ಕೊಟ್ಟು ಮತವನ್ನೂ ಕೊಡುತ್ತಿದ್ದರು. 1962ರಿಂದ 1989ರವರೆಗೆ ಮಾದೇಗೌಡರು ಸತತವಾಗಿ 6 ಬಾರಿ ಕಿರುಗಾವಲು ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಇದು ಯಾವುದೇ ರಾಜಕಾರಣಿಗಳ ಬದುಕಿನಲ್ಲಿ ಮಹತ್ವದ ದಾಖಲೆಯೂ ಹೌದು. ಜನ ಅವರನ್ನು ಸೋಲಿಲ್ಲದ ಸರದಾರ ಎಂದು ಕರೆದರು.

ಆರ್‌.ಗುಂಡೂರಾವ್‌ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ  ದಲ್ಲಿ ಮಾದೇಗೌಡರು ಅರಣ್ಯ ಮತ್ತು ಗಣಿ ಅಭಿವೃದ್ಧಿ ಮಂತ್ರಿಗಳಾಗಿ ಗಮ ನಾರ್ಹ ಸೇವೆ ಸಲ್ಲಿಸಿದರು. 1989ರಲ್ಲಿ ಗೌಡರ ರಾಜಕೀಯ ಕಿರು ಗಾವಲು ಕ್ಷೇತ್ರದಿಂದ ಮಂಡ್ಯ ಜಿಲ್ಲೆಗೆ ವಿಸ್ತರಿಸಿ ಸಂಸದರಾಗಿ ಆಯ್ಕೆ ಯಾದರು. ಮತ್ತೆ 1991ರಲ್ಲಿ ನಡೆದ ಮರು ಚುನಾವಣೆಯಲ್ಲೂ ಜನತೆ ಗೌಡರನ್ನು ಸಂಸದರಾಗಿ ಆಯ್ಕೆ ಮಾಡಿದರು. ಹೀಗೆ 3 ದಶಕಗಳ ಕಾಲ ಜನ ಗೌಡರಿಗೆ ಮತ ನೀಡಿ ಗೆಲ್ಲಿಸಿದರು. ಪ್ರತಿಯಾಗಿ ಮಾದೇಗೌಡರು ತಮ್ಮ ಕ್ಷೇತ್ರದ ಜಿಲ್ಲೆಯ ಜನತೆಗೆ ಶಾಲೆ, ಕಾಲೇಜು, ಕಾರ್ಖಾನೆ, ಆಸ್ಪತ್ರೆ, ದೇವಸ್ಥಾನ ಹಲವು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ.

ಟಾಪ್ ನ್ಯೂಸ್

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.