ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ರಾಜಸ್ಥಾನ ಮೂಲದ ಮೂವರ ಸಾವು
Team Udayavani, Jul 20, 2021, 6:21 PM IST
ಚಿತ್ರದುರ್ಗ: ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ರಾಜಸ್ಥಾನ ಮೂಲದ ಜಯರಾಮ್ (35), ಪತ್ನಿ ಸುಶೀಲಾದೇವಿ (30) ಹಾಗೂ 4 ವರ್ಷದ ಮಗು ಕುಲದೀಪ್ ಸರಣ್ ಮೃತಪಟ್ಟಿದ್ದಾರೆ. ಪುತ್ರಿ ಕರುಣಾ ಸರಣ್ (6) ಹಾಗೂ ರಾಕೇಶ್ (28) ಗಾಯಗೊಂಡಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವೇಗವಾಗಿ ಬಂದ ಕಾರು ಸಿಮೆಂಟ್ ಲೋಡ್‌ನೊಂದಿಗೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಲಾರಿಯ ಹಿಂಬದಿಯಲ್ಲಿ ಸಿಲುಕಿಕೊಂಡಿತ್ತು. ಕಾರಿನಲ್ಲಿ ಸಿಲುಕಿದ್ದವರನ್ನು ಕ್ರೇನ್ ಹಾಗೂ ಟ್ರಾÂಕ್ಟರ್ ಬಳಸಿ ಹೊರ ತೆಗೆಯಲಾಗಿದೆ. ಅಪಘಾತದ ಸ್ಥಳಕ್ಕೆ ಬಂದ ಜನ ತಾಯಿಯನ್ನು ಅಪ್ಪಿಕೊಂಡೇ ಮೃತಪಟ್ಟಿದ್ದ ಮಗುವನ್ನು ನೋಡಿ ಮಮ್ಮಲ ಮರುಗಿದರು.
ಮೃತರು ಕಬ್ಬಿಣದ ಗ್ರಿಲ್ ಹಾಕುವ ಕೆಲಸ ಮಾಡುತ್ತಾ ಬೆಂಗಳೂರಿನಲ್ಲಿ ನೆಲೆಸಿದ್ದರು ಎನ್ನಲಾಗಿದೆ. ರಾಜಸ್ಥಾನದಿಂದ ಬೆಂಗಳೂರಿಗೆ ಮರಳುತ್ತಿರುವಾಗ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಎಸ್‌ಪಿ ಜಿ. ರಾಧಿ ಕಾ, ಎಎಸ್‌ಪಿ ಎಂ.ಬಿ. ನಂದಗಾವಿ, ಡಿವೈಎಸ್‌ಪಿ ರೋಷನ್ ಜಮೀರ್, ಹಿರಿಯೂರು ಸಿಪಿಐ ಕೆ. ರಾಘವೇಂದ್ರ, ಐಮಂಗಲ ಠಾಣೆ ಪಿಎಸ್‌ಐ ಎ. ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಐಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.