ಶಿವಶರಣ ಹಡಪದ ಅಪ್ಪಣ್ಣ ಆದರ್ಶ ಪಾಲಿಸಿ
Team Udayavani, Jul 25, 2021, 6:29 PM IST
ಚಿತ್ರದುರ್ಗ : ಶಿವಶರಣ ಹಡಪದ ಅಪ್ಪಣ್ಣ 12ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿ ತಮ್ಮ ವಚನಗಳ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ ಎಂದು ಅಪರ ಜಿಲ್ಲಾ ಧಿಕಾರಿ ಇ.ಬಾಲಕೃಷ್ಣ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಹಡಪದ ಅಪ್ಪಣ್ಣ ಅವರು ಸಾಮಾಜಿಕ ಅಸಮಾನತೆ, ಅಸ್ಪೃಶ್ಯತೆ, ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿ ಸಮಾಜದಲ್ಲಿ ಕೆಲವು ಕ್ರಾಂತಿಕಾರಕ ಬದಲಾವಣೆಗಳನ್ನು ತರಲು ಶ್ರಮಿಸಿದರು.
ತಮ್ಮ ವಚನಗಳ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಿದ ಅವರು ಸದಾ ಸ್ಮರಣೀಯರು ಎಂದು ಹೇಳಿದರು. ಕೋವಿಡ್-19 ಸಾಂಕ್ರಾಮಿಕ ರೋಗದ ಸಂಖ್ಯೆ ಏರುಗತಿಯಲ್ಲಿ ಇರುವುದರಿಂದ ಹಾಗೂ ಮೂರನೇ ಅಲೆಯ ಮುನ್ಸೂಚನೆ ಇರುವುದರಿಂದ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದರು. ಉಪವಿಭಾಗಾ ಧಿಕಾರಿ ಆರ್.ಚಂದ್ರಯ್ಯ ಮಾತನಾಡಿ, ಶಿವಶರಣ ಹಡಪದ ಅಪ್ಪಣ್ಣ ಅವರು 12ನೇ ಶತಮಾನದಲ್ಲಿಯೇ ಸಾಮಾಜಿಕ ತಾರತಮ್ಯಗಳ ಸುಧಾರಣೆಗಾಗಿ, ಅಸಮಾನತೆ ಹೋಗಲಾಡಿಸಲು ಬಸವಣ್ಣನ ಅವರ ಅನುಯಾಯಿಯಾಗಿ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ.
ಆ ನಿಟ್ಟಿನಲ್ಲಿ ಅನುಭವ ಮಂಟಪವನ್ನು ಸ್ಥಾಪನೆ ಮಾಡಿ ಸಾಮಾಜಿಕ ಚಿಂತಕರನ್ನು ಸೇರಿಸಿ ಸಾಮಾಜಿಕ ಸಮಾನತೆಯ ಧ್ಯೇಯಗಳಿಗಾಗಿ, ಸಮಾಜ ಸುಧಾರಣೆಗಾಗಿ, ಜನರ ಸಾಮಾಜಿಕ, ಆರ್ಥಿಕ ಸಮಾನತೆಗಾಗಿ ಚಿಂತನ ಮಂಥನಗಳನ್ನು ಅನುಭವ ಮಂಟಪದಲ್ಲಿ ನಡೆಸಲಾಗುತ್ತಿತ್ತು ಎಂದರು. ಹಡಪದ ಅಪ್ಪಣ್ಣ ಅವರು ಬಸವಣ್ಣನವರಿಗೆ ಅತ್ಯಂತ ಆತ್ಮೀಯರು ಮತ್ತು ಕಾರ್ಯದರ್ಶಿಗಳಾಗಿದ್ದರು. 12ನೇ ಶತಮಾನದಲ್ಲಿ ಸಾಮಾಜಿಕ, ಆರ್ಥಿಕ ಸುಧಾರಣೆಗಾಗಿ ತಮ್ಮ ವಚನಗಳ ಮೂಲಕ ಹೋರಾಟ ಮಾಡಿ ಸಮಾಜದಲ್ಲಿನ ತಾರತಮ್ಯಗಳ ನಿವಾರಣೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಬಣ್ಣಿಸಿದರು.
ತಹಶೀಲ್ದಾರ್ ಸತ್ಯನಾರಾಯಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಧನಂಜಯ, ಶಿವಶರಣ ಹಡಪದ ಅಪ್ಪಣ್ಣ ಸಮಾಜದ ಅಧ್ಯಕ್ಷ ವೀರಭದ್ರಪ್ಪ, ಕಾರ್ಯದರ್ಶಿ ಚೆನ್ನಬಸವಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.