ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗಿ: ತಿಪ್ಪೆಸ್ವಾಮಿ

ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿಗಳ ಸಭೆ

Team Udayavani, Jan 29, 2021, 4:15 PM IST

29-17

ಹಿರಿಯೂರು: ರಾಜ್ಯದಲ್ಲಿ ಕೊರೊನಾ ಸಂಕಷ್ಟ ಪರಿಸ್ಥಿತಿಯಿಂದಾಗಿ ಗ್ರಾಮೀಣ ಪ್ರದೇಶದ ಜನರು ಹಾಗೂ ರೈತರು ತೀವ್ರ ಸಂಕಷ್ಟದಲ್ಲಿದ್ದು, ಜೀವನ ನಡೆಸುವುದೇ ಕಷ್ಟವಾಗಿದೆ. ಆದ್ದರಿಂದ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಅಂತಹ ವಿದ್ಯಾರ್ಥಿಗಳಿಗೆ ಶೇ.50ರಷ್ಟು ರಿಯಾಯಿತಿ ನೀಡುವ ಮೂಲಕ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗಬೇಕು ಎಂದು ರೈತ ಸಂಘದ ಅಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ
ಮನವಿ ಮಾಡಿದರು.

ನಗರದ ಕ್ಷೇತ್ರ ಸಮನ್ವಯ ಅಧಿ ಕಾರಿಗಳ ಕಚೇರಿಯಲ್ಲಿ ಶಿಕ್ಷಣ ಇಲಾಖೆಯ ವತಿಯಿಂದ ಕ್ಷೇತ್ರ ಶಿಕ್ಷಣಾ ಧಿಕಾರಿಗಳಾದ ಪಿ.ರಾಮಯ್ಯ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ನಗರದ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಸಭೆಯಲ್ಲಿ ಮಾತನಾಡಿದ ಅವರು, ನಗರದ ಖಾಸಗಿ ಶಿಕ್ಷಣ ಸಂಸ್ಥೆಗಳು ಕೊರೊನಾ ಸಂಕಷ್ಟದಲ್ಲಿಯೂ ಸಹ, ಶಿಕ್ಷಕರಿಗೆ ವೇತನ ಕೊಟ್ಟು ಕರೆಸಿ ಆನ್‌ಲೈನ್‌ ತರಗತಿಗಳನ್ನು ನಡೆಸಿದಲ್ಲದೆ, ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಶಿಕ್ಷಣವನ್ನು ನಿರಂತರವಾಗಿ ಒದಗಿಸುವ ಮೂಲಕ ವಿದ್ಯಾರ್ಥಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿವೆ. ನಿಜಕ್ಕೂ ಖಾಸಗಿ ಶಿಕ್ಷಣ ಸಂಸ್ಥೆಗಳ ಕಾರ್ಯ ಶ್ಲಾಘನೀಯ ಎಂದರು.
ರೈತ ಸಂಘದ ಮುಖಂಡರಾದ ಆಲೂರು

ಸಿದ್ಧರಾಮಣ್ಣ ಮಾತನಾಡಿ, ತಾಲೂಕಿನಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಬೇರೆ ನಗರಗಳಿಗೆ ಹೋಲಿಕೆ ಮಾಡಿದರೆ ತಾಲೂಕಿನ ಶಿಕ್ಷಣ ಸಂಸ್ಥೆಗಳು, ಕಡಿಮೆ ಶುಲ್ಕ ಪಡೆಯುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ. ಆದರೆ ಕಳೆದ ವರ್ಷದ ಕೊರೊನಾ ಪರಿಸ್ಥಿತಿಯಿಂದ ಗ್ರಾಮೀಣ ಜನರು ತೀವ್ರ ಬಳಲಿದ್ದು, ಈ ವರ್ಷದ ಶುಲ್ಕದಲ್ಲಿ ಸ್ವಲ್ಪ ಕಡಿಮೆ ಮಾಡಿಕೊಳ್ಳಿ ಎಂದು ಮನವಿಯಾಗಿದೆ ಎಂದರು.

ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಮುಖ್ಯಸ್ಥ ಆರ್‌.ಕೆ.ಎಂ. ವೆಂಕಟೇಶ್‌, ಮುಖಂಡರಾದ ಆಲೂರು ಹನುಮಂತರಾಯಪ್ಪ, ವೀರಕರಿಯಪ್ಪ, ತಿಮ್ಮಾರೆಡ್ಡಿ, ನಹೀಮ್‌, ತಿರುಮೂರ್ತಿ, ವೀರಭದ್ರಪ್ಪ, ಇತರರು ಮಾತನಾಡಿ, ವಿದ್ಯಾ ಸಂಸ್ಥೆಗಳ ನಿರ್ವಹಣೆ ಬಗ್ಗೆ ಶಿಕ್ಷಕ-ಶಿಕ್ಷಕಿಯರಿಗೆ ಸಂಬಳ ನೀಡುವುದು ಸೇರಿದಂತೆ ಬ್ಯಾಂಕ್‌ಗಳಿಗೆ ವಿದ್ಯಾಸಂಸ್ಥೆ ಕಟ್ಟಡದ ಹಾಗೂ ಶಾಲಾ ಬಸ್‌ಗಳ ಸಾಲದ ಕಂತುಗಳನ್ನು ಸಹ ಕಟ್ಟಲಾಗುತ್ತಿಲ್ಲ, ನೀವುಗಳು ಪೋಷಕರನ್ನು ಮನವೊಲಿಸಿ ಮಕ್ಕಳನ್ನು ಶಾಲೆಗಳಿಗೆ ಅಲ್ಪಸ್ವಲ್ಪ ಹಣ ಕಟ್ಟಿ ಮಕ್ಕಳ ದಾಖಲು ಮಾಡಿಸಿದರೆ ಮಾತ್ರ ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಸಾಧ್ಯವಾಗುತ್ತದೆ. ಈ ವರ್ಷದ ಶುಲ್ಕವಿರಲಿ, ಕನಿಷ್ಠ ಕಳೆದ ವರ್ಷದ ಶುಲ್ಕಗಳನ್ನು ಪಾವತಿಸಲು ದಯಮಾಡಿ ಸಹಕರಿಸಿ ಎಂಬುದಾಗಿ ರೈತ ಮುಖಂಡರಿಗೆ ಮನವಿ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾ ಧಿಕಾರಿ ಪಿ.ರಾಮಯ್ಯ ಮಾತನಾಡಿ, ಈ ಬಗ್ಗೆ ಹೇಳಬೇಕೆಂದರೆ ಜಿಲ್ಲೆಯ ಬೇರೆ ತಾಲೂಕುಗಳ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಹೋಲಿಸಿದರೆ ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಗಳು ಪೋಷಕರಿಗೆ ಹೊರೆಯಾಗುವಂತಹ ಶುಲ್ಕಗಳನ್ನು ವಿಧಿ ಸುತ್ತಿಲ್ಲಾ, ಪೋಷಕರೊಂದಿಗೆ ಸಹಕರಿಸುವ ಮೂಲಕ ಯಾವುದೇ ಸಮಸ್ಯೆಗಳು ನಮ್ಮ ಬಳಿಗೆ ಬಾರದಂತೆ ಶಾಲೆಗಳನ್ನು ನಡೆಸುತ್ತಿದ್ದಾರೆ ಎಂದರು. ಶಿಕ್ಷಣ ಸಂಯೋಜಕರಾದ ಶಶಿಧರ್‌, ರೈತ ಮುಖಂಡರಾದ ಆಲೂರು ವೀರಣ್ಣಗೌಡ, ವಿರೂಪಾಕ್ಷಪ್ಪ ಬಬ್ಬೂರು ಸೇರಿದಂತೆ ಅನೇಕರು
ಪಾಲ್ಗೊಂಡಿದ್ದರು.

ಓದಿ : ವನ್ಯಸಂಪತ್ತು: ಲೋಗೋ ಬಿಡುಗಡೆ

ಟಾಪ್ ನ್ಯೂಸ್

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

1-hck

Hockey; ವನಿತಾ ಜೂನಿಯರ್‌ ವಿಶ್ವಕಪ್‌ : ಭಾರತ ಆಯ್ಕೆ

ಇದು 0 ಪರ್ಸೆಂಟ್‌ ಅಭಿವೃದ್ಧಿ,100 ಪರ್ಸೆಂಟ್‌ ಭ್ರಷ್ಟಾಚಾರದ ಸರಕಾರ: ಸುನಿಲ್‌

ಇದು 0 ಪರ್ಸೆಂಟ್‌ ಅಭಿವೃದ್ಧಿ,100 ಪರ್ಸೆಂಟ್‌ ಭ್ರಷ್ಟಾಚಾರದ ಸರಕಾರ: ಸುನಿಲ್‌

ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ

ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ

Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್‌ ಆಸ್ಪತ್ರೆ: ಶರಣಪ್ರಕಾಶ್‌ ಪಾಟೀಲ್‌

Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್‌ ಆಸ್ಪತ್ರೆ: ಶರಣಪ್ರಕಾಶ್‌ ಪಾಟೀಲ್‌

Council session ಲಾಠಿ ಜಾರ್ಜ್‌: ಮೇಲ್ಮನೆಯಲ್ಲಿ ಪ್ರತಿಪಕ್ಷ ಸಭಾತ್ಯಾಗ

Council session ಲಾಠಿ ಜಾರ್ಜ್‌: ಮೇಲ್ಮನೆಯಲ್ಲಿ ಪ್ರತಿಪಕ್ಷ ಸಭಾತ್ಯಾಗ

Online Gaming: ಪ್ರತ್ಯೇಕ ಚರ್ಚೆಗೆ ಪಕ್ಷಾತೀತವಾಗಿ ಒತ್ತಾಯ

Online Gaming: ಪ್ರತ್ಯೇಕ ಚರ್ಚೆಗೆ ಪಕ್ಷಾತೀತವಾಗಿ ಒತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

1-ewqewq

T20; ವೆಸ್ಟ್‌ ಇಂಡೀಸ್‌ ಎದುರು ಬಾಂಗ್ಲಾದೇಶ ಗೆಲುವಿನ ಆರಂಭ

1-arg

T20I;ಡಬಲ್‌ ಹ್ಯಾಟ್ರಿಕ್‌ ಸಾಧನೆ ಮೆರೆದ ಆರ್ಜೆಂಟೀನಾದ ಫೆನೆಲ್‌

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ

1-gukesh

Gukesh Dommaraju; ಚದುರಂಗ ಚಾಂಪಿಯನ್‌ ಗೆ ತವರೂರು ಚೆನ್ನೈಯಲ್ಲಿ ಭವ್ಯ ಸ್ವಾಗತ

1-mahe

MAHE;ಅ.ಭಾ.ಅಂತರ್‌ ವಿ.ವಿ. ವನಿತಾ ಟೆನಿಸ್‌: ಒಸ್ಮಾನಿಯಾ ವಿ.ವಿ. ಚಾಂಪಿಯನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.