ಪೊಲೀಸರು ಜನರ ಸಮಸ್ಯೆಗೆ ಸ್ಪಂದಿಸಲಿ
ಪ್ರಶಿಕ್ಷಣಾರ್ಥಿಗಳು ಉತ್ತ ಮ ಸೇವೆ ಸಲಿ Éಸಿ ಹೆಸರು ಪಡೆಯಿರಿ: ಪೊಲೀಸ್ ಮಹಾನಿರ್ದೇಶಕ ಗರ್ಗ್
Team Udayavani, Jan 31, 2021, 5:14 PM IST
ಚಿತ್ರದುರ್ಗ: ಸಾರ್ವಜನಿಕರ ಸಮಸ್ಯೆಗಳಿಗೆ ಉತ್ತಮವಾಗಿ ಸ್ಪಂದಿಸಿ ಅವರ ಪ್ರೀತಿ ವಿಶ್ವಾಸ ಗಳಿಸಿ. ಅಧಿ ಕಾರವನ್ನು ಸಮರ್ಥವಾಗಿ ಬಳಸಿಕೊಳ್ಳಿ ಎಂದು ಪೊಲೀಸ್ ಮಹಾನಿರ್ದೇಶಕ (ತರಬೇತಿ) ಪದಮ್ ಕುಮಾರ್ ಗರ್ಗ್ ಕಿವಿಮಾತು ಹೇಳಿದರು.
ಐಮಂಗಲ ಪೊಲೀಸ್ ತರಬೇತಿ ಶಾಲೆಯ ಕವಾಯತು ಮೈದಾನದಲ್ಲಿ ಶನಿವಾರ 5ನೇ ತಂಡದ ಸಿಪಿಸಿ ಮತ್ತು 2ನೇ ತಂಡದ ಎಪಿಸಿ ಮತ್ತು ಕೆಎಸ್‌ಐಎಸ್‌ಎಫ್ ಪೊಲೀಸ್ ಕಾನ್‌ಸ್ಟೆಬಲ್ ಗಳ ನಿರ್ಗಮನ ಪಥ ಸಂಚಲನದಲ್ಲಿ ಅವರು ಮಾತನಾಡಿದರು.
ಪ್ರಶಿಕ್ಷಣಾರ್ಥಿಗಳು ಪೊಲೀಸ್ ಸೇವೆಗೆ ಸೇರಿದ ನಂತರ ದೇಶದ ಶೇ. 3 ರಷ್ಟು ವಿಶಿಷ್ಟ ವ್ಯಕ್ತಿಗಳ ಸಾಲಿಗೆ ತಾವು ಸೇರಿಕೊಳ್ಳುತ್ತೀರಿ. ಇಲಾಖೆಯಿಂದ ಹಲವು ಸೌಲಭ್ಯ ನೀಡಲಾಗುತ್ತಿದೆ. ಹಾಗಾಗಿ ಇಲಾಖೆಗೆ ಉತ್ತಮ ಸೇವೆ ಸಲ್ಲಿಸಬೇಕು. ಇಲ್ಲಿ ತೆಗೆದುಕೊಳ್ಳುವ ಪ್ರತಿಜ್ಞೆ ಕೇವಲ ಶಬ್ದವಲ್ಲ, ಪ್ರತಿಜ್ಞೆಯ ಪ್ರತಿ ಪದವನ್ನು ಯೋಚಿಸಿ ಅರ್ಥ ಮಾಡಿಕೊಂಡು ವೃತ್ತಿ ಜೀವನದಲ್ಲಿ ಅನುಸರಿಸಬೇಕು ಎಂದರು.
ಐಮಂಗಲ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲ ಪಿ. ಪಾಪಣ್ಣ ಮಾತನಾಡಿ, ಪೊಲೀಸ್ ತರಬೇತಿ ಶಾಲೆ ಕಾಯಂ ತರಬೇತಿ ಶಾಲೆಯಾಗಿ ಕಾರ್ಯಾರಂಭಗೊಂಡ ನಂತರದಿಂದ ಒಟ್ಟು 4 ತಂಡಗಳಲ್ಲಿ 1317 ನಾಗರಿಕ ಪೊಲೀಸ್ ಕಾನ್ ಸ್ಟೇಬಲ್‌ಗಳಿಗೆ ಮತ್ತು 1ನೇ ತಂಡದಲ್ಲಿ 363 ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್‌ಗಳಿಗೆ ವೃತ್ತಿ ಬುನಾದಿ ತರಬೇತಿಯನ್ನು ಯಶಸ್ವಿಯಾಗಿ ನೀಡಲಾಗಿದೆ. ಪ್ರಸ್ತುತ 280 ಪ್ರಶಿಕ್ಷಣಾರ್ಥಿಗಳು 8 ತಿಂಗಳ ಕಾಲ ಎಲ್ಲರೂ ಬುನಾದಿ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಕೊರೊನಾ ಭಯದ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಯಾವ ಪ್ರಶಿಕ್ಷಣಾರ್ಥಿಗೂ ಕೋವಿಡ್ ರೋಗ ಲಕ್ಷಣಗಳು ಬರದಂತೆ ನೋಡಿಕೊಳ್ಳಲಾಗಿದೆ. ಇಲ್ಲಿಯವರೆಗೆ ಒಟ್ಟು 1960
ಪ್ರಶಿಕ್ಷಣಾರ್ಥಿಗಳಿಗೆ ವೃತ್ತಿ ಬುನಾದಿ ತರಬೇತಿಯನ್ನು ನೀಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ಮಹಾನಿರೀಕ್ಷಕ (ತರಬೇತಿ) ಪಿ. ಹರಿಶೇಖರನ್, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಜಿ. ರಾ ಧಿಕಾ ಸೇರಿದಂತೆ ಇತರೆ ಪೊಲೀಸ್ ಅ ಧಿಕಾರಿ, ಸಿಬ್ಬಂದಿ ಭಾಗವಹಿಸಿದ್ದರು.
ಓದಿ : ಭಾಷಾ ಉಳಿವಿನ ಚಿಂತನೆ ಅಗತ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.