ರಾಜ್ಯ ಸರ್ಕಾರದ ವಿರುದ್ಧ ಒನಕೆ ಪ್ರದರ್ಶನ
ಪಂಚಮಸಾಲಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ವೀಣಾ ಕಾಶಪ್ಪನವರ ಹೇಳಿಕೆ
Team Udayavani, Feb 2, 2021, 4:03 PM IST
ಚಿತ್ರದುರ್ಗ: ಪಂಚಮಸಾಲಿ ಸಮುದಾಯವನ್ನು 2ಎಗೆ·ಸೇರಿಸುವುದು ಹಾಗೂ ಲಿಂಗಾಯಿತ ಸಮಾಜಕ್ಕೆ ಕೇಂದ್ರದಲ್ಲಿಒಬಿಸಿ ಮೀಸಲಾತಿ ನೀಡುವಂತೆ ಪಂಚಮಸಾಲಿ ಸಮಾಜಕೂಡಲಸಂಗಮದಿಂದ ಪಾದಯಾತ್ರೆ ನಡೆಸುತ್ತಿದೆ. ಆದರೆಸಿಎಂ ಯಡಿಯೂರಪ್ಪ ಈವರೆಗೂ ಇದಕ್ಕೆ ಸ್ಪಂದಿಸಿಲ್ಲ.
ಹಾಗಾಗಿ ಮಂಗಳವಾರ ಚಿತ್ರದುರ್ಗದಲ್ಲಿ ಸರ್ಕಾರದವಿರುದ್ಧ ಒನಕೆ ಪ್ರದರ್ಶನ ಮಾಡಲಾಗುವುದು ಎಂದುಪಂಚಮಸಾಲಿ ಮಹಿಳಾ ಘಟಕದರಾಜ್ಯಾಧ್ಯಕ್ಷೆ ವೀಣಾ ವಿ.ಕಾಶಪ್ಪನವರ್ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ಬಸವ ಜಯಮೃತ್ಯುಂಜಯ ಸ್ವಾಮೀಜಿ ಹಾಗೂವಚನಾನಂದ ಸ್ವಾಮೀಜಿಗಳು ಬೀದಿಗಿಳಿದು ಪಾದಯಾತ್ರೆನಡೆಸುತ್ತಿದ್ದಾರೆ. ಆದರೂ ಸರ್ಕಾರ ಮೌನವಾಗಿದೆ. ಇದುಮುಖ್ಯಮಂತ್ರಿಗಳಿಗೆ ಶೋಭೆಯಲ್ಲ. ಅದಕ್ಕಾಗಿ ವೀರವನಿತೆಒನಕೆ ಓಬವ್ವಳ ನಾಡು ಚಿತ್ರದುರ್ಗದಲ್ಲಿ ಸರ್ಕಾರದ ವಿರುದ್ಧಒನಕೆ ಪ್ರದರ್ಶಿಸಲಾಗುವುದು. ಮಹಿಳೆಯರು ಸಹಸ್ರಾರು
ಸಂಖ್ಯೆಯಲ್ಲಿ ಭಾಗವಹಿಸಿ ಪಾದಯಾತ್ರೆಗೆ ಶಕ್ತಿ ತುಂಬುವಂತೆಮನವಿ ಮಾಡಿದರು.
ಕಳೆದ 16 ದಿನಗಳಿಂದ ಮೀಸಲಾತಿಗಾಗಿ ಪಾದಯಾತ್ರೆನಡೆಯುತ್ತಿದೆ. ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆಯಿಲ್ಲ.ನಾವು ಶಿಕ್ಷಣ, ಉದ್ಯೋಗಕ್ಕಾಗಿ ಮೀಸಲಾತಿ ಕೇಳುತ್ತಿದ್ದೇವೆಯೇಹೊರತು ರಾಜಕೀಯಕ್ಕಾಗಿ ಅಲ್ಲ. ಸರ್ಕಾರ ಈಗಲಾದರೂಎಚ್ಚೆತ್ತು ನಮ್ಮ ಬೇಡಿಕೆಗಳಿಗೆ ಸ್ಪಂದಿಸಬೇಕು. ಇಲ್ಲವಾದಲ್ಲಿಮುಂದಿನ ದಿನಗಳಲ್ಲಿ ಹೋರಾಟವನ್ನು ಉಗ್ರ ಸ್ವರೂಪಕ್ಕೆಕೊಂಡೊಯ್ಯಲಾಗುವುದು ಎಂದರು.
ಮಹಿಳಾ ಸಮಾಜದ· ರುದ್ರಸ್ವಾಮಿ ಮಾತನಾಡಿ,ಮಂಗಳವಾರ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದಪೂರ್ಣಕುಂಭ, ಆರತಿಯೊಂದಿಗೆ ಮೆರವಣಿಗೆಹೊರಡಲಿದ್ದು, ಜಿಲ್ಲೆಯಾದ್ಯಂತ ಇರುವ ಪಂಚಮಸಾಲಿ,ಲಿಂಗಾಯಿತ ಸಮುದಾಯದ ಮಹಿಳೆಯರುಪಾಲ್ಗೊಳ್ಳುವಂತೆ ಕೋರಿದರು.
ಸುದ್ದಿಗೋಷ್ಠಿಯಲ್ಲಿ ಶಾಂತಾ, ಅನ್ನಪೂರ್ಣ ಸಜ್ಜನ್,ಲತಾ ಉಮೇಶ್, ಸುಜಾತ ಹಿರೇಮs…, ಮಂಜುಳಾ ರವಿ,ರುದ್ರಾಣಿ ಗಂಗಾಧರ, ಆರತಿ ಮಹಡಿ ಶಿವಮೂರ್ತಿ, ಆಶಾಕಲ್ಲಪ್ಪ, ಜ್ಯೋತಿ ದೇವೇಂದ್ರಪ್ಪ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.