ಸಹಕಾರ ಮನೋಭಾವದಿಂದ ಜೀವನ ನಡೆಸಿ: ಶ್ರೀ
ಮುರುಘಾ ಮಠದಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ 14 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.
Team Udayavani, Feb 6, 2021, 3:11 PM IST
ಚಿತ್ರದುರ್ಗ: ಸತಿ-ಪತಿಗಳು ಅನ್ಯೂನ್ಯತೆ ಹಾಗೂ ಸಹಕಾರ ಮನೋಭಾವದಿಂದ ಸಾಗಿದಾಗ ಬದುಕಿನಲ್ಲಿ ನೆಮ್ಮದಿ ಕಾಣಲು
ಸಾಧ್ಯ ಎಂದು ಇಂಗಳೇಶ್ವರ ವಿರಕ್ತಮಠದ ಚನ್ನಬಸವ ಸ್ವಾಮೀಜಿ ತಿಳಿಸಿದರು.
ಮುರುಘರಾಜೇಂದ್ರ ಬೃಹನ್ಮಠ ಮತ್ತು ಎಸ್.ಜೆ.ಎಂ. ಶಾಂತಿ ಮತ್ತು ಪ್ರಗತಿ ಫೌಂಡೇಶನ್ ಸಹಯೋಗದಲ್ಲಿ ನಡೆದ 31ನೇ ವರ್ಷದ 2ನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದಲ್ಲಿ ಮಾತನಾಡಿದ ಅವರು, ಬಸವಾದಿ ಪ್ರಮಥರ ನಾಡಿನಲ್ಲಿ ಹುಟ್ಟಿರುವ ನಾವೆಲ್ಲ ಧನ್ಯರು. ಮುರುಘಾ ಶರಣರು ಇಂತಹ ಶ್ರೇಷ್ಠ ಕಾರ್ಯಗಳನ್ನು ಮಾಡುತ್ತಿರುವುದು ಪುಣ್ಯದ ಕೆಲಸ. ಶ್ರೀಗಳು 31 ವರ್ಷಗಳಿಂದ ನಿರಂತರವಾಗಿ ಈ
ಕಾರ್ಯಕ್ರಮ ನಡೆಸಿಕೊಂಡು ಬಂದಿರುವುದು ಸಾಮಾನ್ಯ ಮಾತಲ್ಲ ಎಂದರು.
ವಿಧಾನಸಭೆ ಉಪಾಧ್ಯಕ್ಷ ಆನಂದ ವಿ. ಮಾಮನಿ ಮಾತನಾಡಿ, ಸರಳ ಸಾಮೂಹಿಕ ಕಲ್ಯಾಣ ಮಹೋತ್ಸವದ ಹರಿಕಾರರು ಮುರುಘಾ ಶರಣರು.
ನಮ್ಮ ಸರ್ಕಾರ ಮುರುಘರಾಜೇಂದ್ರ ವಿಶ್ವವಿದ್ಯಾನಿಲಯವನ್ನು ಮಂಜೂರು ಮಾಡಿದೆ. ಸಾಮೂಹಿಕ ಕಲ್ಯಾಣ ಮಹೋತ್ಸವ ಕಾರ್ಯಕ್ರಮ ಎಲ್ಲರಿಗೂ ಮಾದರಿಯಾಗಿದೆ. ಶರಣರ ಆಶಯದಂತೆ ಮುರುಘಾ ಮಠ ಬಸವತತ್ವವನ್ನು ಮುಂದುವರಿಸಿಕೊಂಡು
ಹೋಗುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು.
ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಜೀವನಮೂರ್ತಿ ಮಾತನಾಡಿ, ಸರಳ ಸಾಮೂಹಿಕ ವಿವಾಹವು ಎಲ್ಲರಿಗೂ ಮಾದರಿಯಾಗಿದೆ. ದುಂದುವೆಚ್ಚ ಮಾಡದೆ ಇಂತಹ ವಿವಾಹಗಳಲ್ಲಿ ಭಾಗವಹಿಸಿ ಆ ಹಣವನ್ನು ಯಾವುದಾದರೂ ಉದ್ಯೋಗ ಅಥವಾ ಜೀವನ ರೂಪಿಸಿಕೊಳ್ಳಲು ಬಳಸಿಕೊಳ್ಳಬಹುದು ಎಂದರು. ಇದೇ ಸಂದರ್ಭದಲ್ಲಿ 14 ಜೋಡಿಗಳು ವಿವಾಹವಾದರು. ಕೆಇಬಿ ಷಣ್ಮುಖಪ್ಪ, ಪೈಲ್ವಾನ್ ತಿಪ್ಪೇಸ್ವಾಮಿ ಮತ್ತಿತರರಿದ್ದರು. ಜಮುರಾ ಕಲಾವಿದರು ಪ್ರಾರ್ಥಿಸಿದರು. ವೀರಭದ್ರಪ್ಪ ಸ್ವಾಗತಿಸಿದರು. ಜ್ಞಾನಮೂರ್ತಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.