ರೈತರ ಸಮಸ್ಯೆ ಬಗೆಹರಿಯದಿದ್ರೆ ಆಹಾರ ಸಮಸ್ಯೆ ಉದ್ಭವ: ಮುದಿಯಪ್ಪ
ರೈತ ಕಾಯ್ದೆ ವಿರೋಧಿಸಿ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು
Team Udayavani, Feb 7, 2021, 4:12 PM IST
ನಾಯಕನಹಟ್ಟಿ: ರೈತರ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಭವಿಷ್ಯದಲ್ಲಿ ಆಹಾರದ ಸಮಸ್ಯೆ ತಲೆದೋರಲಿದೆ ಎಂದು ನೀರಾವರಿ
ಹಾಗೂ ಸಾಮಾಜಿಕ ಹೋರಾಟ ಸಮಿತಿ ಅಧ್ಯಕ್ಷ ಜಿ.ಬಿ. ಮುದಿಯಪ್ಪ ಹೇಳಿದರು.
ಕೇಂದ್ರ ಸರಕಾರದ ಮೂರು ರೈತ ವಿರೋಧಿ ಕಾಯ್ದೆ ವಿರೋಧಿಸಿ ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಸರಕಾರ ರೈತ ವಿರೋಧಿ ನಿಲುವು ಅನುಸರಿಸುತ್ತಿದೆ. ಮೂರು ತಿಂಗಳಿನಿಂದ ದೇಶದ ಎಲ್ಲೆಡೆ ರೈತರ ಪ್ರತಿಭಟನೆಗಳು ನಡೆಯುತ್ತಿವೆ.ಹೀಗಿದ್ದರೂ ಸರಕಾರ ನಿರ್ಲಕ್ಷé ಧೋರಣೆ ತಳೆದಿದೆ.
ಪ್ರಧಾನಿಗಳು ಸಮಸ್ಯೆ ಬಗೆಹರಿಸುವುದಕ್ಕೆ ಆಸಕ್ತಿ ತೋರಿಸುತ್ತಿಲ್ಲ. ವಿದೇಶ ಪ್ರವಾಸ, ಸೆಲೆಬ್ರೆಟಿಗಳ ಮಕ್ಕಳ ಮದುವೆ ಹಾಜರಾಗುವ ಪ್ರಧಾನಿ, ರೈತರ ಸಮಸ್ಯೆಗಳನ್ನು ಬಗೆಹರಿಸಲು ಸಮಯ ನೀಡುತ್ತಿಲ್ಲ. ಇದೀಗ 18 ತಿಂಗಳು ರೈತ ಕಾಯ್ದೆಗಳನ್ನು ಅಮಾನತ್ತಿನಲ್ಲಿಡಲು ಕೇಂದ್ರ
ಸರಕಾರ ಸಮ್ಮತಿಸಿದೆ. ಈ ಎಲ್ಲ ಕಾಯ್ದೆಗಳನ್ನು ಶಾಶ್ವತವಾಗಿ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ರೈತರು ಕೆಲ ಕಾಲ ರಾಜ್ಯ ಹೆದ್ದಾರಿ 45 ರಲ್ಲಿ ರಸ್ತೆ ತಡೆ ನಡೆಸಿದರು.
ನಂತರ ವಾಲ್ಮೀಕಿ ವೃತ್ತದಿಂದ ನಾಡ ಕಚೇರಿಯವರೆಗೆ ಮೆರವಣಿಗೆ ನಡೆಸಿ ಉಪ ತಹಶೀಲ್ದಾರ್ ಟಿ. ಜಗದೀಶ್ ಅವರಿಗೆ ಮನವಿ ಸಲ್ಲಿಸಿದರು. ಜಿಪಂ ಮಾಜಿ ಸದಸ್ಯ ಜಿ. ತಿಪ್ಪೇಸ್ವಾಮಿ, ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಜಿ.ಬಿ. ಮುದಿಯಪ್ಪ, ಪುರ್ನಓಬಯ್ಯ, ಪಪಂ ಸದಸ್ಯ ಟಿ. ಬಸಣ್ಣ, ಗ್ರಾಪಂ ಸದಸ್ಯ ಕಾಟಯ್ಯ, ಮುಖಂಡರಾದ ಬಸವರಾಜ್, ವಕೀಲ ನಾಗೇಂದ್ರಪ್ಪ, ಮುಖಂಡರಾದ ಪ್ರಕಾಶ್, ಬಸವರಾಜ್, ಬೋರೇಶ್ ಮತ್ತಿತರರು ಇದ್ದರು.
ಓದಿ : ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಅರಶಿನ-ಕಾಳುಮೆಣಸಿನ ಕಷಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.