ಮಾ. 5ರಿಂದ ಶಿವರಾತ್ರಿ ಮಹೋತ್ಸವ
ಕಬೀರಾನಂದ ಮಠದಲ್ಲಿ ಪೂರ್ವಭಾವಿ ಸಭೆ ನಡೆಯಿತು.
Team Udayavani, Feb 8, 2021, 2:37 PM IST
ಚಿತ್ರದುರ್ಗ: ನಗರದ ಸದ್ಗುರು ಕಬೀರಾನಂದ ಮಠದಿಂದ ನಡೆಸುವ ಮಹಾಶಿವರಾತ್ರಿ ಮಹೋತ್ಸವವನ್ನು ಈ ವರ್ಷ ಮಾರ್ಚ್ 5 ರಿಂದ 11 ರವರೆಗೆ ಸರಳವಾಗಿ ನಡೆಸಲು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಶ್ರೀ ಶಿವಲಿಂಗಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆದ
ಪೂರ್ವಭಾವಿ ಸಭೆಯಲ್ಲಿ 2021ನೇ ಸಾಲಿನ 91ನೇ ಮಹಾ ಶಿವರಾತ್ರಿ ಮಹೋತ್ಸವದ ರೂಪುರೇಷೆಗಳನ್ನು ಸಿದ್ಧಪಡಿಸಲಾಯಿತು. ಮಾ. 5 ರಿಂದ 11 ರವರೆಗೆ ಪ್ರತಿ ದಿನ ಸಂಜೆ 5:30ರಿಂದ 6:30ರವರೆಗೆ ಸಾಮೂಹಿಕ ಶಿವಪಂಚಾಕ್ಷರಿ ಸ್ತೋತ್ರ ಮತ್ತು ಶ್ರೀಮದ್ ಭಗವದ್ಗೀತಾ ಪಾರಾಯಣ ಹಾಗೂ ಮಾ. 7 ರಿಂದ 11 ವರೆಗೆ ಪ್ರತಿ ದಿನ ಸಂಜೆ ಮಹಾ ಶಿವರಾತ್ರಿಯ ಅಂಗವಾಗಿ ವಿವಿಧ ರೀತಿಯ ವೇದಿಕೆಯ ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್‌ಪೀರ್ ಮಾತನಾಡಿ, ಈ ಬಾರಿ ನಗರದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಶಿವರಾತ್ರಿ ಮಹೋತ್ಸವದ ಹಿನ್ನಲೆಯಲ್ಲಿ ಜೋಗಿಮಟ್ಟಿ ರಸ್ತೆ ಹಾಗೂ ಆಶ್ರಮದ ರಸ್ತೆಯನ್ನು ಆದ್ಯತೆ ಮೇರೆಗೆ ಬೇಗ ಮುಗಿಸಿಕೊಡಲು ಮನವಿ ಮಾಡಿದರು.
ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಟಿ. ಬದರೀನಾಥ್ ಮಾತನಾಡಿ, ದಿನಾಂಕ ಹಾಗೂ ಸಮಯವನ್ನು ನೋಡಿಕೊಂಡು ಕಾರ್ಯಕ್ರಮಕ್ಕೆ ಸಚಿವರನ್ನು ಆಹ್ವಾನಿಸಲಾಗುವುದು. ಯಾರನ್ನು ಆಹ್ವಾನಿಸಬೇಕು ಎನ್ನುವುದನ್ನು ಸ್ವಾಮೀಜಿಗಳ ಜತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು. ಬಿಜೆಪಿ ಮುಖಂಡ ಎಂ.ಎ. ಸೇತುರಾಂ, ಹೆಬ್ಬಳ್ಳಿ ನಾಗರಾಜ್ ಮತ್ತಿತರರು ಇದ್ದರು.
ಓದಿ: ರಾಜ್ಯದ ಸಂಸದರು ಬಾಯಿಗೆ ಬೀಗ ಹಾಕಿದ ಕಾರಣ ಸತತ ಅನ್ಯಾಯವಾಗುತ್ತಿದೆ: ಖಾದರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.