ಶಿಬಾರ ಗದ್ದಿಗೆಯ ಪ್ರತಿಷ್ಠಾಪನಾ ಮಹೋತ್ಸವ
ಮೈಲಾರಲಿಂಗೇಶ್ವರ ಸ್ವಾಮಿಯ ಶಿಬಾರದ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಗೊರವಯ್ಯರು ದೋಣಿಸೇವೆ ನಡೆಸಿದರು.
Team Udayavani, Feb 15, 2021, 3:33 PM IST
ಚಿತ್ರದುರ್ಗ: ನಗರದ ಬುರುಜನಹಟ್ಟಿಯ ಸಿಹಿನೀರು ಹೊಂಡದ ರಸ್ತೆಯಲ್ಲಿ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಶಿಬಾರ ಗದ್ದಿಗೆಯ ಪ್ರತಿಷ್ಠಾಪನಾ ಮಹೋತ್ಸವ ಭಾನುವಾರ ಶ್ರದ್ಧಾಭಕ್ತಿಯಿಂದ ಜರುಗಿತು.
ಗೊರವಯ್ಯರ ಡಮರುಗದ ಸದ್ದಿನೊಂದಿಗೆ ಭಕ್ತರು ಛಾಮರ ಬೀಸುತ್ತಾ ಸ್ವಾಮಿಯನ್ನು ಮೆರವಣಿಗೆ ಮೂಲಕ ಕೊಂಡೊಯ್ದು ಸಿಹಿನೀರು ಹೊಂಡದಲ್ಲಿ ಗಂಗಾಪೂಜೆ ನೆರವೇರಿಸಿದ ಬಳಿಕ ಶಿಬಾರದ ಮಂಟಪದಲ್ಲಿ ಸ್ವಾಮಿಯನ್ನು ಪ್ರತಿಷ್ಠಾಪಿಸಲಾಯಿತು. ಶಿಬಾರದ ಮುಂಭಾಗ ಪ್ರಧಾನ ಅರ್ಚಕ ಹಾಗೂ ಗೊರವಯ್ಯ ರಮೇಶ್ ಬಾಬು ನೇತ್ರತ್ವದಲ್ಲಿ ಸುಮಾರು 70 ರಿಂದ 80 ಗೊರವಯ್ಯರ ಸಮ್ಮುಖದಲ್ಲಿ ಪೂಜಾ ಕೈಂಕರ್ಯಗಳು ಹಾಗೂ ದೋಣಿ ಸೇವೆ ಕಾರ್ಯಕ್ರಮಗಳು ನೆರವೇರಿದವು.
ಬುರುಜನಹಟ್ಟಿಯ ಸಿಹಿನೀರು ಹೊಂಡದ ರಸ್ತೆಯಲ್ಲಿನ ನೂತನವಾಗಿ ಪ್ರತಿಷ್ಠಾಪನೆಗೊಂಡಿರುವ ಶಿಬಾರದ ಶ್ರೀ ಮೈಲಾರಲಿಂಗಸ್ವಾಮಿಗೆ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಪೂಜೆ ನೆರವೇರಲಿದೆ. ಪ್ರತಿ ಭಾನುವಾರ ಹಾಗೂ ಹುಣ್ಣಿಮೆಯಂದು ಗೊರವಯ್ಯರು ಹಾಗೂ ಭಕ್ತರಿಂದ ವಿಶೇಷ ಪೂಜೆ ಹಾಗೂ ದೋಣಿಸೇವೆ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಧಾನ ಅರ್ಚಕ ಹಾಗೂ ಗೊರವಯ್ಯ ರಮೇಶ್ ಬಾಬು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್ ಡೇಂಜರ್ ಸ್ಪಾಟ್
Brijesh Chowta: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್ ಚೌಟ
Royal Movie; ಜ.24ರಿಂದ ʼರಾಯಲ್ʼ; ಟ್ರೇಲರ್ ರಿಲೀಸ್‌ಗೆ ತಂಡ ರೆಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.