ರೈತ ಸಂಘದ ಅನಿರ್ದಿಷ್ಟಾವಧಿ ಧರಣಿ ಅಂತ್ಯ
ಹೊಳಲ್ಕೆರೆ: ಕಾರ್ಯಾಧ್ಯಕ್ಷ ಈಚಘಟ್ಟ ಸಿದ್ಧವೀರಪ್ಪ ಮಾತನಾಡಿದರು.
Team Udayavani, Feb 18, 2021, 4:20 PM IST
ಹೊಳಲ್ಕೆರೆ: ಕೃಷಿ ಮತ್ತು ತೋಟಗಾರಿಕೆಗೆ 7 ತಾಸು ವಿದ್ಯುತ್ ಪೂರೈಕೆ ಮಾಡುವಂತೆ ಪಟ್ಟಣದ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಬುಧವಾರ ಅಂತ್ಯಗೊಂಡಿದೆ.
ಬೆಸ್ಕಾಂ ಇಂಜಿನಿಯರ್ ರೈತ ಮುಖಂಡರೊಂದಿಗೆ ನಡೆಸಿದ ಮಾತುಕತೆ ಫಲಪ್ರದವಾಗಿದ್ದು, ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿ ದಿನ 4 ಗಂಟೆ
ವಿದ್ಯುತ್ ಸರಬರಾಜು ಮಾಡುವುದಾಗಿ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಧರಣಿ ಹಿಂಪಡೆಯಲಾಯಿತು.
ಪಟ್ಟಣದ ವೀರಸೌಧದ ರೈತ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಈಚಘಟ್ಟ ಸಿದ್ಧವೀರಪ್ಪ, ಚಿತ್ರದುರ್ಗ ಜಿಲ್ಲೆಯಲ್ಲಿ ಹೊಳಲ್ಕೆರೆ ತಾಲೂಕು ಹೊರತುಪಡಿಸಿ ಬೇರೆ ತಾಲೂಕುಗಳಲ್ಲಿ 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಆದರೆ ಹೊಳಲ್ಕೆರೆ ತಾಲೂಕಿನ ರೈತರಿಗೆ ಇರುವಷ್ಟು ವಿದ್ಯುತ್ ಅಗತ್ಯತೆ ಬೇರೆ ತಾಲೂಕುಗಳಿಗಿಲ್ಲ. ಹೀಗಾಗಿ ಹಗಲಿನ
ವೇಳೆ 5 ಗಂಟೆ ವಿದ್ಯುತ್ ಸರಬರಾಜು ಮಾಡುವಂತೆ ಕೇಳಿಕೊಂಡಿದ್ದೆವು.
ಬೆಸ್ಕಾಂ ಅ ಧಿಕಾರಿಗಳು ಸಾಕಷ್ಟು ಚರ್ಚೆ ನಡೆಸಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಹಾಗಾಗಿ ತಾತ್ಕಾಲಿಕವಾಗಿ ಧರಣಿ ವಾಪಸ್ ಪಡೆದಿದ್ದಾರೆ. ಕೊಟ್ಟ ಮಾತಿನಂತೆ 5 ದಿನಗಳಲ್ಲಿ ತಾಲೂಕಿನ ಎಲ್ಲಾ ಕಡೆಗಳಲ್ಲಿ 4 ರಿಂದ 5 ಗಂಟೆ ವಿದ್ಯುತ್ ಸರಬರಾಜು ಮಾಡಬೇಕೆಂದು ಒತ್ತಾಯಿಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಅಪ್ಪರಸನಹಳ್ಳಿ ಬಸವರಾಜಪ್ಪ, ಕುನಗಲಿ ಮಹಾಲಿಂಗಪ್ಪ, ಶಂಕರಮೂರ್ತಿ ತೊಡರನಾಳ್, ಮಂಜುನಾಥ್
ತೊಡರನಾಳ್, ಕುನಗಲಿ ಉಮೇಶ್, ಟಿ. ನುಲೇನೂರು ಜಯಣ್ಣ, ಸದಾಶಿವಪ್ಪ ಚಿಕ್ಕಜಾಜೂರು, ಲೋಕೇಶ್ ಅಗ್ರಹಾರ, ರುದ್ರೇಶ್ ಮತಿಗಟ್ಟ, ಹೊಸಹಳ್ಳಿ ತುಂಗಪ್ಪ ಇತರರು ಇದ್ದರು.
ಓದಿ : ದುಬೈ ಯುವರಾಣಿ ಗೋವಾದಲ್ಲಿ ಸೆರೆ ಸಿಕ್ಕಿದ್ದು ಹೇಗೆ, ಅಪ್ಪನೇ ಮಗಳನ್ನು ಜೈಲಿಗೆ ಹಾಕಿದ್ದೇಕೆ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUDA CASE: ರಾಜಕೀಯ ಸುದ್ದಿಗಾಗಿ ಇ.ಡಿ. ಯತ್ನ : ಹರಿಪ್ರಸಾದ್ ಆರೋಪ
ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Indrali ರೈಲ್ವೇ ನಿಲ್ದಾಣಕ್ಕೆ ಶೆಲ್ಟರ್ ಅಳವಡಿಕೆ
Deepavali ಹಿರಿಯರ ನೆನಪಿನ ಬೆಳಕು; ನರಕ ಚತುರ್ದಶಿಗೂ ಮೊದಲೇ ನಡೆಯುತ್ತದೆ ಸೈತಿನಕ್ಲೆನ ಪರ್ಬ
Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…
Dr Bibek Debroy: ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ
Waqf ವಿವಾದ ಹಿನ್ನೆಲೆ ಭೂದಾಖಲೆ ಪರಿಶೀಲನೆಗೆ ವಿಎಚ್‌ಪಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.