ನಾಳೆ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ

ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

Team Udayavani, Jan 26, 2021, 3:20 PM IST

26-10

ಚಿತ್ರದುರ್ಗ: ಭಾರತೀಯ ಜನತಾ ಪಕ್ಷದ ರಾಜ್ಯ ಯುವ ಮೋರ್ಚಾ ಕಾರ್ಯಕಾರಿಣಿ ಜ.27 ರಂದು ತುರುವನೂರು ರಸ್ತೆಯಲ್ಲಿರುವ ರೆಡ್ಡಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನೆ ಗಟ್ಟಿಗೊಳಿಸುವ ಉದ್ದೇಶದಿಂದ ನಡೆಯಲಿರುವ ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿಯಲ್ಲಿ ರಾಜ್ಯದ ಪದಾಧಿಕಾರಿಗಳು ಆಗಮಿಸಲಿದ್ದಾರೆ ಎಂದರು.

ಜ.26 ರಂದು ಸಂಜೆ ಐಶ್ವರ್ಯ ಫೋರ್ಟ್‌ನಲ್ಲಿ ಪದಾ ಧಿಕಾರಿಗಳ ಸಭೆ ನಡೆಯಲಿದೆ. 27 ರ ಕಾರ್ಯಕಾರಿಣಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌
ಕುಮಾರ್‌ ಕಟೀಲ್‌ ಹಾಗೂ ಯುವ ಮೋರ್ಚಾ ರಾಜ್ಯಾಧ್ಯಕ್ಷ ಸಂದೀಪ್‌ ಭಾಗವಹಿಸಲಿದ್ದಾರೆ ಎಂದು
ಹೇಳಿದರು.
ಯುವ ಮೋರ್ಚಾದ 156 ಪದಾಧಿ ಕಾರಿಗಳು ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲಿದ್ದು, ಅಂದು ಬೆಳಗ್ಗೆ 9.30 ಕ್ಕೆ ನೀಲಕಂಠೇಶ್ವರಸ್ವಾಮಿ

ದೇವಸ್ಥಾನದಿಂದ ಮೆರವಣಿಗೆ ಹೊರಟು ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ಒನಕೆ ಓಬವ್ವ ವೃತ್ತದಲ್ಲಿ ಮೆರವಣಿಗೆ ಮುಕ್ತಾಯವಾಗಲಿದೆ. ಜಿಲ್ಲೆಯ ಐವರು ಶಾಸಕರು, ಸಂಸದರು, ವಿಧಾನ ಪರಿಷತ್‌ ಸದಸ್ಯರು, ಪಕ್ಷದ ಮುಖಂಡರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ರಾಜ್ಯ ಕಾರ್ಯಕಾರಿಣಿಗೆ ಈಗಾಗಲೆ 19 ವಿಭಾಗಗಳನ್ನು ರಚಿಸಿದ್ದು, ಒಂದೊಂದು ವಿಭಾಗವೂ ಕಾರ್ಯಕಾರಿಣಿಯ ಸಿದ್ಧತೆ ನೋಡಿಕೊಳ್ಳಲಿದೆ ಎಂದರು.

ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹನುಮಂತೇಗೌಡ ಮಾತನಾಡಿ, ರಾಷ್ಟ್ರಮಟ್ಟದಿಂದ ಹಿಡಿದು ಬೂತ್‌ ಮಟ್ಟದವರೆಗೆ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಡುತ್ತಿರುವ ಬಿಜೆಪಿ ಇತರೆ ಪಕ್ಷಗಳಿಗಿಂತ ವಿಭಿನ್ನ, ಚಿತ್ರದುರ್ಗದಲ್ಲಿ ಪ್ರಥಮ ಬಾರಿಗೆ ನಾಳೆ ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ
ನಡೆಯುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನತೆಗೆ ತಲುಪಿಸುವುದು. ರಾಷ್ಟ್ರ ಭಕ್ತರನ್ನು ಸೃಷ್ಟಿಸುವ ಕೆಲಸ ಪಕ್ಷದಿಂದ ಆಗುತ್ತಿದೆ ಎಂದು ಹೇಳಿದರು.

ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹರ್ಷಿತ್‌ ಮಾತನಾಡಿ, ಮುಂದಿನ ಮೂರು ವರ್ಷಗಳಲ್ಲಿ ಯುವ ಮೋರ್ಚಾ ಏನೇನು ಕೆಲಸ ಮಾಡಬೇಕು ಎನ್ನುವ ಅಜೆಂಡಾ ಇಟ್ಟುಕೊಂಡು ರಾಜ್ಯ ಯುವ ಮೋರ್ಚಾ ಕಾರ್ಯಕಾರಿಣಿಯಲ್ಲಿ ಪದಾಧಿಕಾರಿಗಳಿಗೆ ಮಾರ್ಗದರ್ಶನ ಮಾಡಲಾಗುವುದು ಎಂದರು.

ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ, ವಿಭಾಗ ಪ್ರಭಾರಿ ಜಿ.ಎಂ.ಸುರೇಶ್‌, ಪ್ರಧಾನ ಕಾರ್ಯದರ್ಶಿ ಜಯಪಾಲ್‌, ಮುಖಂಡರಾದ ಎಂ.ಎ.ಸೇತುರಾಂ, ಮಲ್ಲಿಕಾರ್ಜುನ್‌, ಮಂಜುನಾಥ್‌, ವಕ್ತಾರರಾದ ನಾಗರಾಜ್‌ ಬೇದ್ರೆ, ದಗ್ಗೆ ಶಿವಪ್ರಕಾಶ್‌ ಇದ್ದರು.

ಓದಿ : ಇಂದು ಸಂಜೆ ಇನ್ಸ್‌ಪೆಕ್ಟರ್‌ ವಿಕ್ರಂ ಟ್ರೇಲರ್‌ ರಿಲೀಸ್‌

ಟಾಪ್ ನ್ಯೂಸ್

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Women’s Ashes Series: Big Fight between Australia-England

Women’s Ashes Series: ಆಸ್ಟ್ರೇಲಿಯ-ಇಂಗ್ಲೆಂಡ್‌ ಬಿಗ್‌ ಫೈಟ್‌

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Two more children test positive for HMP virus: Number of cases in the country rises to 7

HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್‌: ದೇಶದಲ್ಲಿ 7ಕ್ಕೇರಿದ ಕೇಸ್‌

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌ ಭಾರತದ 21 ಸ್ಪರ್ಧಿಗಳು ಭಾಗಿ

ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌ ಭಾರತದ 21 ಸ್ಪರ್ಧಿಗಳು ಭಾಗಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್‌

Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.