ಜಿಲ್ಲಾಸ್ಪತ್ರೆಗೆ ಡಿಸಿ ದಿಢೀರ್ ಭೇಟಿ
ಜಿಲ್ಲಾಸ್ಪತ್ರೆಯ ಎಸ್‌ಎನ್‌ಸಿಯುಗೆ ಭೇಟಿ ನೀಡಿದ್ದ ಡಿಸಿ ಕವಿತಾ ಎಸ್. ಮನ್ನಿಕೇರಿ ಮಗುವೊಂದನ್ನು ಎತ್ತಿಕೊಂಡಿದ್ದು ಹೀಗೆ.
Team Udayavani, Feb 19, 2021, 3:55 PM IST
ಚಿತ್ರದುರ್ಗ: ಜಿಲ್ಲಾಸ್ಪತ್ರೆಗೆ ಗುರುವಾರ ದಿಢೀರ್ ಭೇಟಿ ನೀಡಿದ ಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನಿಕೇರಿ, ವಿವಿಧ ವಾರ್ಡ್‌ಗಳಿಗೆ ತೆರಳಿ ಪರಿಶೀಲಿಸಿದರು.
ಆಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ವಾರ್ಡ್, ಐಸಿಯು ವಾರ್ಡ್‌ಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ವೈದ್ಯರು, ನರ್ಸ್‌ಗಳು ಮತ್ತು ಸಿಬ್ಬಂದಿ ಆಸ್ಪತ್ರೆಗೆ ಆಗಮಿಸುವ ರೋಗಿಗಳನ್ನು ಕುಟುಂಬದವರಂತೆ ನೋಡಿಕೊಳ್ಳಬೇಕು. ಇಲ್ಲಿನ ವೈದ್ಯರು ಮತ್ತು ಸಿಬ್ಬಂದಿಯವರು ಸಹ ಈಗಾಗಲೇ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಂದೆಯೂ ಇದೇ ರೀತಿ ಗುಣಮಟ್ಟದ ಸೇವೆಯನ್ನು ಮುಂದುವರೆಸಿಕೊಂಡು ಹೋಗಿ ಎಂದು ವೈದ್ಯಾಧಿ ಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿ ಕಾರಿ ಡಾ| ಸಿ.ಎಲ್. ಪಾಲಾಕ್ಷ, ಪ್ರತಿ ತಿಂಗಳು ಜಿಲ್ಲಾಸ್ಪತ್ರೆಯಲ್ಲಿ 800 ರಿಂದ 900 ಹೆರಿಗೆ ಮಾಡಿಸಲಾಗುತ್ತದೆ. ಶೇ. 60 ರಷ್ಟು ಸಾಮಾನ್ಯ ಹೆರಿಗೆ ಆದರೆ,
ಶೇ .40 ರಷ್ಟು ಶಸ್ತ್ರಚಿಕಿತ್ಸೆ ಮೂಲಕ ಆಗುತ್ತಿವೆ. ವರ್ಷಕ್ಕೆ 30 ಸಾವಿರ ಎಎನ್‌ಸಿ ನೋಂದಣಿ ಆಗುತ್ತವೆ. ಸಾಂಸ್ಥಿಕ ಹೆರಿಗೆಯನ್ನು ಹೆಚ್ಚಿಸಲು ಜಿಲ್ಲೆಯಲ್ಲಿ 34 ಕಡೆ 24×7 ಹೆರಿಗೆ ಆಸ್ಪತ್ರೆಗಳಿದ್ದು, ಬಹುತೇಕ ಹೆರಿಗೆಗಳು ಆಸ್ಪತ್ರೆಯಲ್ಲಾಗುತ್ತವೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದರು. ರಾಷ್ಟ್ರೀಯ ಆರೋಗ್ಯ ಅಭಿಯಾನದ ಮೂಲಕ ತಾಯಿ ಮತ್ತು ಮಗುವಿನ ಆರೋಗ್ಯ ಕಾಪಾಡುವ ಹಿನ್ನೆಲೆಯಲ್ಲಿ ಸಾಕಷ್ಟು ಸೌಲಭ್ಯ ಕಲ್ಪಿಸಲಾಗುತ್ತಿದೆ. ಇದರ ಸದ್ಬಳಕೆ ಮಾಡಿಕೊಂಡು ಜನರ ಆರೋಗ್ಯ ಕಾಪಾಡಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಬಸವರಾಜ್, ಡಾ| ದೇವರಾಜ್, ಡಾ| ಬಸವರಾಜ್, ಶುಶ್ರೂಷಾ ಅ ಧೀಕ್ಷಕಿ ಶಾಂತಾ ಮತ್ತಿತರರು ಇದ್ದರು.
ಓದಿ : ಇಂಧನ ಬೆಲೆ ಏರಿಕೆಗೆ ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ
Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್
T20; ಸಂಜು, ತಿಲಕ್ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ
Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್ ಅರ್ಜಿ ತಿರಸ್ಕೃತ
Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.