ರಸ್ತೆ ಕಾಮಗಾರಿಗೆ 6 ತಿಂಗಳ ಗಡುವು
ಗುತ್ತಿಗೆದಾರರು-ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕವಿತಾ ತಾಕೀತು
Team Udayavani, Feb 25, 2021, 3:50 PM IST
ಚಿತ್ರದುರ್ಗ: ನಗರದ ಎಲ್ಲಾ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಆರು ತಿಂಗಳೊಳಗೆ ಮುಗಿಸಿಕೊಡಬೇಕು ಎಂದು ಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನಿಕೇರಿ ಗುತ್ತಿಗೆದಾರರು ಹಾಗೂ ಅ ಧಿಕಾರಿಗಳಿಗೆ ತಾಕೀತು ಮಾಡಿದರು. ಬುಧವಾರ ನಸುಕಿನಲ್ಲಿ ನಗರದ ಚಳ್ಳಕೆರೆ ಗೇಟ್, ಸ್ಟೇಡಿಯಂ ರಸ್ತೆ, ಬಿ.ಡಿ. ರಸ್ತೆ, ಹೊಳಲ್ಕೆರೆ ರಸ್ತೆ, ಗಾಂ ಧಿ ವೃತ್ತ, ಮದಕರಿ ವೃತ್ತ, ಕನಕ ವೃತ್ತ ಸೇರಿದಂತೆ ವಿವಿಧೆಡೆ ನಡೆಯುತ್ತಿರುವ ಕಾಮಗಾರಿಗಳನ್ನು ಸಿಟಿ ರೌಂಡ್ಸ್ ಮಾಡುವ ಮೂಲಕ ಪರಿಶೀಲಿಸಿದರು.
ನಗರದ ಶಂಕರ್ ಟಾಕೀಸ್ ಬಳಿ ಮಳೆ ಬಂದಾಗ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ರಸ್ತೆಗಳು ನದಿಯಂತಾಗುತ್ತವೆ. ಇದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಅಧಿ ಕಾರಿಗಳು ವಿವರಿಸಿದರು. ಸ್ಥಳ ಪರಿಶೀಲನೆ ನಡೆಸಿದ ಡಿಸಿ, ರಸ್ತೆಯಲ್ಲಿ ನೀರು ನಿಲ್ಲದಂತೆ ಮಳೆಯ ನೀರು ಸರಾಗವಾಗಿ ಹೋಗುವಂತೆ ಕ್ರಮ ವಹಿಸಬೇಕು ಎಂದರು.
ಇಲ್ಲಿ ಸ್ಪೈ ವಾಕ್ ಬೇಕು ಎಂಬ ಸಾರ್ವಜನಿಕರ ಮನವಿ ಬಗ್ಗೆ ಸುದ್ದಿಗಾರರು ಗಮನ ಸೆಳೆದಾಗ, ಈ ಬಗ್ಗೆ ಪರಿಶೀಲಿಸಿ, ಅಗತ್ಯವಿದ್ದರೆ ಸ್ಕೈ ವಾಕ್
ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದರು. ಹೊಳಲ್ಕೆರೆ ರಸ್ತೆ ಮಾರ್ಗದಲ್ಲಿ ನಿರ್ಮಾಣ ಆಗುತ್ತಿರುವ ರಸ್ತೆ ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿಗಳು, ಆದಷ್ಟು ಶೀಘ್ರದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ತಾಕೀತು ಮಾಡಿದರು. ರಸ್ತೆ ಕಾಮಗಾರಿಯಿಂದ ಧೂಳು ಬರುತ್ತಿದ್ದು, ಪ್ರತಿನಿತ್ಯವೂ ನೀರು ಹಾಕಬೇಕು. ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಬೇಕು. ಇಲ್ಲವಾದರೆ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗಲಿದೆ.ಹಾಗಾಗಿ ಗುತ್ತಿಗೆದಾರರು ಹೆಚ್ಚಿನ ಜವಾಬ್ದಾರಿ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದರು.
ನ್ಯಾಯಾಲಯದ ತಡೆಯಾಜ್ಞೆ ಹೊರತುಪಡಿಸಿ ಚಿತ್ರದುರ್ಗ ನಗರದ ವಿವಿಧೆಡೆಯಲ್ಲಿ ಎಲ್ಲೆಲ್ಲಿ ರಸ್ತೆ ಒತ್ತುವರಿ ಮಾಡಲಾಗಿದೆ ಅವುಗಳನ್ನು ತೆರವುಗೊಳಿಸಬೇಕು. ಬಿ.ಡಿ. ರಸ್ತೆಯಲ್ಲಿ ಪಂಚಾಚಾರ್ಯ ಕಲ್ಯಾಣಮಂಟಪ, ಬಂಜಾರ ಸಮುದಾಯ ಭವನ, ಕೆಎಸ್‌ಆರ್ ಟಿಸಿ ರಸ್ತೆಯಲ್ಲಿರುವ ದರ್ಗಾ ಸೇರಿದಂತೆ ಹಲವು ಕಟ್ಟಡಗಳು ರಸ್ತೆಯಲ್ಲಿದ್ದು ಎಲ್ಲವನ್ನೂ ತೆರವುಗೊಳಿಸಬೇಕಿದೆ ಎಂದು ಖುದ್ದು ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಲೋಕೋಪಯೋಗಿ ಕಾರ್ಯಪಾಲಕ ಇಂಜಿನಿಯರ್ ಸತೀಶ್ ಬಾಬು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸತೀಶ್ ರೆಡ್ಡಿ, ನಗರಸಭೆ ಆಯುಕ್ತ ಜೆ.ಟಿ. ಹನುಮಂತರಾಜು ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.
ಓದಿ : ಲಾರಿ-ಬಸ್ ಮುಖಾಮುಖಿ ಢಿಕ್ಕಿ: ಬಸ್ ಚಾಲಕ, ನಿರ್ವಾಹಕ ಸೇರಿ 7 ಜನರಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.