ಖಾಸಗಿ ವಾಹನಗಳ ಭರಾಟೆ ಜೋರು

Team Udayavani, Apr 9, 2021, 6:51 PM IST

9-14

ಚಿತ್ರದುರ್ಗ: ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದ ಪರಿಣಾಮ ಖಾಸಗಿ ಬಸ್‌ಗಳು ಹಾಗೂ ಕ್ರೂಸರ್‌, ಕ್ಯಾಬ್‌ ಮತ್ತಿತರೆ ವಾಹನಗಳು ನಗರದ ಕೆಎಸ್‌ ಆರ್‌ಸಿಟಿ ಬಸ್‌ ನಿಲ್ದಾಣದಲ್ಲಿ ರಾಜಾರೋಷವಾಗಿ ಓಡಾಡಿದವು. ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಪಟ್ಟುಹಿಡಿದು ಎರಡನೇ ದಿನವೂ ಮುಷ್ಕರ ಮುಂದುವರೆಸಿದ ನೌಕರರು, ಕರ್ತವ್ಯಕ್ಕೆ ಗೆ„ರು ಹಾಜರಾಗಿ ಸರ್ಕಾರಕ್ಕೆ ಸವಾಲೆಸೆದರು.

ಈ ನಿಟ್ಟಿನಲ್ಲಿ ಸರ್ಕಾರಿ ಸರ್ಕಾರಿ ಸಾರಿಗೆಗೆ ಬದಲಾಗಿ ಖಾಸಗಿ ಸಾರಿಗೆ ಬಳಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಖಾಸಗಿ ವಾಹನಗಳು ಸೇವೆ ಒದಗಿಸಿದವು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗ ವ್ಯಾಪ್ತಿಯ 294 ಬಸ್‌ಗಳಲ್ಲಿ ಒಂದು ಬಸ್‌ ಮಾತ್ರ ಪೊಲೀಸ್‌ ಭದ್ರತೆಯಲ್ಲಿ ಗುರುವಾರ ಬೆಳಿಗ್ಗೆ ಚಳ್ಳಕೆರೆಗೆ ಸಂಚರಿಸಿತು.

ಇದರಿಂದ ನಿಧಾನವಾಗಿ ಒಂದೊಂದೇ ಬಸ್‌ ಸಂಚಾರ ಆರಂಭಿಸುವ ನಿರೀಕ್ಷೆ ಆರಂಭವಾಗಿತ್ತು. ಆದರೆ 1,250 ನೌಕರರಲ್ಲಿ ಅಧಿಕಾರಿ ಹಂತದವರನ್ನು ಹೊರತುಪಡಿಸಿ ಚಾಲಕರು, ನಿರ್ವಾಹಕರು ಗೈರುಹಾಜರಾಗಿದ್ದರಿಂದ ಈ ನಿರೀಕ್ಷೆ ಹುಸಿಯಾಯಿತು. ಬೆಂಗಳೂರು, ದಾವಣಗೆರೆ, ಹಿರಿಯೂರು, ಹೊಳಲ್ಕೆರೆ, ಭರಮಸಾಗರ ಸೇರಿ ಹಲವು ಊರುಗಳಿಗೆ ಖಾಸಗಿ ಬಸ್‌ ಸೇವೆ ಸಮರ್ಪಕವಾಗಿದೆ. ಬಸ್‌ ನಿಲ್ದಾಣದಲ್ಲಿ ಸಾರಿಗೆ ಬಸ್‌ ನಿಲುಗಡೆ ಮಾಡುತ್ತಿದ್ದ ಸ್ಥಳದಲ್ಲಿಯೇ ಖಾಸಗಿ ಬಸ್‌ಗಳು ನಿಲ್ಲುತ್ತಿವೆ. ಮತ್ತೂಂದು ಬದಿಗೆ ಕ್ರೂಸರ್‌ ಹಾಗೂ ಇತರೆ ಪ್ರವಾಸಿ ವಾಹನಗಳು ಸೇವೆಗೆ ಸಜ್ಜಾಗಿದ್ದವು. ಸೀಟುಗಳು ಭರ್ತಿಯಾಗುವ ವರೆಗೆ ಕಾಯುತ್ತಿದ್ದ ಚಾಲಕರು ನಂತರ ಪ್ರಯಾಣ ಬೆಳೆಸುತ್ತಿದ್ದರು. ವರ್ಷದಿಂದ ಸ್ಥಗಿತಗೊಂಡಿದ್ದ ಖಾಸಗಿ ಬಸ್‌ ಸಂಚಾರ: ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದ ಕಾರಣಕ್ಕೆ ಸರ್ಕಾರ ಖಾಸಗಿ ಬಸ್‌ಗಳ ಸೇವೆ ಬಳಸಿಕೊಳ್ಳಲು ಸೂಚನೆ ನೀಡಿದ ಪರಿಣಾಮ ಪ್ರಾದೇಶಿಕ ಸಾರಿಗೆ ಅ ಧಿಕಾರಿಗಳ ಸೂಚನೆ ಮೇರೆಗೆ ಖಾಸಗಿ ಬಸ್‌ ಗಳು ಹೆಚ್ಚಿನ ಪ್ರಮಾಣದಲ್ಲಿ ಬೀದಿಗಿಳಿದಿವೆ.

ತೆರಿಗೆ ಪಾವತಿಸಲು ಸಾಧ್ಯವಾಗದೇ ವರ್ಷದಿಂದ ನಿಲುಗಡೆ ಮಾಡಿದ್ದ ಬಸ್‌ಗಳು ಕೂಡ ಸಂಚಾರ ಆರಂಭಿಸಿದವು. ಹೀಗಾಗಿ ಖಾಸಗಿ ಬಸ್‌ ನಿಲ್ದಾಣದಲ್ಲಿ ಎಂದಿಗಿಂತಲೂ ಹೆಚ್ಚಿನ ಬಸ್‌ಗಳು ಕಾಣುತ್ತಿದ್ದವು. ಮುಷ್ಕರ ಕಾರಣಕ್ಕೆ ಸಾರ್ವಜನಿಕರು ಬಸ್‌ ಸೇವೆ ಪಡೆದಿದ್ದು ಕಡಿಮೆ. ಅನಿವಾರ್ಯ ಕಾರಣಕ್ಕೆ ಕೆಲವರು ಪ್ರಯಾಣ ಮಾಡಿದರು.

ಶಿವಮೊಗ್ಗ, ಬೆಂಗಳೂರಿಗೆ ತೆರಳುವ ಬಸ್‌ಗಳು ಭರ್ತಿಯಾಗುವುದು ಅಪರೂಪವಾಗಿತ್ತು. ದಾವಣಗೆರೆ, ಜಗಳೂರು, ಹಿರಿಯೂರು ಮಾರ್ಗವಾಗಿ ಸಾಗುವ ಬಸ್‌ ಗಳಿಗೆ ಮಾತ್ರ ಹೆಚ್ಚಿನ ಬೇಡಿಕೆ ಇತ್ತು. ಕಾಲೇಜು ವಿದ್ಯಾರ್ಥಿಗಳು ಬಸ್‌ಗಳಿಗೆ ಕಾದು ಕುಳಿತಿದ್ದ ದೃಶ್ಯ ಅಲ್ಲಲ್ಲಿ ಕಂಡುಬಂದಿತು.

ದರ ಹೆಚ್ಚಳದ ಹೊರೆ ಎಂದ ಪ್ರಯಾಣಿಕ: ಸಾರಿಗೆ ನೌಕರರ ಮುಷ್ಕರವನ್ನು ನೆಪ ಮಾಡಿಕೊಂಡ ಕೆಲ ಖಾಸಗಿ ಬಸ್‌ಗಳು ಪ್ರಯಾಣ ದರವನ್ನು ಹೆಚ್ಚಿಸಿವೆ. ಕನಿಷ್ಠ 10 ರೂ.ಗಳಿಂದ 100 ರೂಪಾಯಿವರೆಗೆ ಪ್ರಯಾಣ ದರ ನಿಗ ದಿ ಮಾಡಿಕೊಂಡಿದ್ದಾರೆ ಎಂದು ಕೆಲ ಪ್ರಯಾಣಿಕರು ದೂರಿದರು. ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಮಾರ್ಗ ಮಧ್ಯದ ಚಿತ್ರದುರ್ಗಕ್ಕೂ ಸೇವೆ ನೀಡಿತು. ನಿಗದಿತ 70 ರೂ. ಬದಲಿಗೆ 80 ರೂ. ಪಡೆಯಲಾಗಿದೆ. ಬಸ್‌ ನಿರ್ವಾಹಕರ ಈ ಕ್ರಮವನ್ನು ಕೆಲ ಪ್ರಯಾಣಿಕರು ಪ್ರಶ್ನಿಸಿದರು.

ಸಾರಿಗೆ ಇಲಾಖೆ ಅ ಧಿಕಾರಿಗಳು ಮಧ್ಯಪ್ರವೇಶಿಸಿ ದರ ಹೆಚ್ಚಿಸದಂತೆ ಎಚ್ಚರಿಕೆ ನೀಡಿದ್ದಾರೆ. ಚಿತ್ರದುರ್ಗದಿಂದ ಬೆಂಗಳೂರಿಗೆ ಕನಿಷ್ಠ 247 ರೂ.ದಿಂದ 491 ರೂ.ವರೆಗೆ ಟಿಕೆಟ್‌ ದರವಿದೆ. ಸಾಮಾನ್ಯ ಬಸ್‌ಗಳ ಪ್ರಯಾಣ ದರ ಜನರ ಕೈಗೆಟುಕುವಂತಿದೆ. ಆದರೆ ಖಾಸಗಿ ಬಸ್‌ಗಳು 400 ರೂ. ನಿಗದಿ ಮಾಡಿವೆ. ಈ ಬಗ್ಗೆ ಅನೇಕ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.