ಮಕ್ಕಳಿಗೆ ಬೈಕ್‌ ನೀಡಿದ್ರೆ ಅಪಾಯ

Team Udayavani, Apr 11, 2021, 4:59 PM IST

11-12

ಚಿತ್ರದುರ್ಗ: ಬಹಳಷ್ಟು ಜಿಲ್ಲೆಗಳಲ್ಲಿ ಕೊರೊನಾ ಕಾಡ್ಗಿಚ್ಚಿನಂತೆ ಹಬ್ಬುತ್ತಿದೆ. ನಮ್ಮ ಜಿಲ್ಲೆಯನ್ನು ನಾವು ಕೋವಿಡ್‌ನಿಂದ ರಕ್ಷಿಸಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಗುಂಪು ಸೇರದಂತೆ ಜಾಗ್ರತೆ ವಹಿಸಬೇಕು. 45 ವರ್ಷ ಮೇಲ್ಪಟ್ಟವರು ವ್ಯಾಕ್ಸಿನ್‌ ಪಡೆಯಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ. ರಾಧಿಕಾ ಹೇಳಿದರು.

ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ, ವಿಜ್ಞಾನ ಕೇಂದ್ರ ಮತ್ತು ಸಂತ ಜೋಸೆಫ್‌ ಶಾಲೆ ಸಹಯೋಗದಲ್ಲಿ ಆಯೋಜಿಸಿದ್ದ ಹೆಲ್ಮೆಟ್‌ ಮತ್ತು ಮಾಸ್ಕ್ ಜನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳು 18 ವರ್ಷ ಪೂರ್ತಿಯಾಗುವವರೆಗೆ ಯಾವುದೇ ಮೋಟಾರ್‌ ಸೈಕಲ್‌ ಓಡಿಸಬಾರದು. 18 ತುಂಬಿದ ನಂತರ ಚಾಲನೆಯನ್ನು ಸರಿಯಾಗಿ ಕಲಿತು ಅದಕ್ಕೆ ಪರವಾನಗಿ ಪಡೆದು ವಿಮೆ ಸೇರಿದಂತೆ ಎಲ್ಲಾ ದಾಖಲಾತಿಗಳನ್ನು ಇಟ್ಟುಕೊಂಡು ವಾಹನ ಚಲಾಯಿಸಬೇಕು. ಬೈಕ್‌ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು. ಅಪಘಾತದಲ್ಲಿ ಕೈಕಾಲು ಮುರಿದರೆ ಸರಿಪಡಿಸಬಹುದು. ಆದರೆ ತಲೆಗೆ ಪೆಟ್ಟು ಬಿದ್ದರೆ ಬದುಕುವುದು ಕಷ್ಟ. ಆದ್ದರಿಂದ ಹೆಲ್ಮೆಟ್‌ ಧರಿಸಿ ಸುರಕ್ಷಿತವಾಗಿರಿ ಎಂದರು.

ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾಧ್ಯಕ್ಷ ಡಾ| ಎಚ್‌.ಕೆ.ಎಸ್‌. ಸ್ವಾಮಿ ಮಾತನಾಡಿ, ಹೆಣ್ಣುಮಕ್ಕಳಿಗೆ ಹೆಚ್ಚು ಆತ್ಮ ಬಲವಿರುತ್ತದೆ. ಧೈರ್ಯಶಾಲಿಗಳಾಗಿ, ಸ್ವಂತ ಅನುಭವಗಳನ್ನು ಹೊಂದಿ, ಸಮಾಜದ ಸುಧಾರಣೆಗೆ ಸಹಾಯ ಮಾಡಬೇಕು. ಮಕ್ಕಳಿದ್ದಾಗಲೇ ಸಾಮಾಜಿಕ ಜವಾಬ್ದಾರಿ ಅರಿತುಕೊಳ್ಳಬೇಕು ಎಂದರು.

ದೊಡ್ಡವರು ತಪ್ಪು ಮಾಡಿದಾಗ ಅವರನ್ನು ತಿದ್ದಿ ಸರಿ ದಾರಿಗೆ ಕರೆದುಕೊಂಡು ಹೋಗುವ ಕೆಲಸವನ್ನು ಮಕ್ಕಳು ಮಾಡಬಹುದು. ಪೋಷಕರು ಹೆಲ್ಮೆಟ್‌, ಮಾಸ್ಕ್ ಧರಿಸದೇ ಓಡಾಡುತ್ತಿದ್ದರೆ ಮಕ್ಕಳು ಮನೆಯಲ್ಲೇ ಅವರನ್ನು ತಡೆದು ತಿಳಿಸಬೇಕು. ಇದರಿಂದ ಪೋಷಕರ ಮನಃಪರಿವರ್ತನೆಯಾಗುತ್ತದೆ ಎಂದು ತಿಳಿಸಿದರು.

ಸಂತ ಜೋಸೆಫರ ಶಾಲೆ ಪ್ರಾಚಾರ್ಯರಾದ ರೆಜಿ ಸಿಸ್ಟರ್‌, ಬಾಲಮೇರಿ ಸಿಸ್ಟರ್‌, ಶಿಕ್ಷಕರಾದ ರೂಪ, ವಿಜ್ಞಾನ ಸಮಿತಿ ಉಪಾಧ್ಯಕ್ಷ ಜಯದೇವಮೂರ್ತಿ ಮತ್ತಿತರರು ಇದ್ದರು.

ವಿದ್ಯಾರ್ಥಿನಿಯರಾದ ಎಚ್‌.ಎಸ್‌. ರಚನಾ, ಎಚ್‌.ಎಸ್‌. ಪ್ರೇರಣಾ ಕೋವಿಡ್‌ ಜಾಗೃತಿ ಗೀತೆ ಹಾಡಿದರು. ಬಿ.ಬಿ. ಅವನಿ, ಅಜೀರಾ, ಅನು ಪಿಪಿಇ ಕಿಟ್‌ ಧರಿಸಿ ಕಾರ್ಯಕ್ರಮಕ್ಕೆ ಆಗಮಿಸಿದವರಿಗೆ ಹೂಗುತ್ಛ ನೀಡಿದರು.

ಟಾಪ್ ನ್ಯೂಸ್

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.