ಶಿಸ್ತು-ಸಂಯಮ ಮುಖ್ಯ: ಶಿಮುಶ
ಡಾ.ಶಿಮುಶ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
Team Udayavani, Jan 27, 2021, 3:43 PM IST
ಚಿತ್ರದುರ್ಗ: ಗಣರಾಜ್ಯೋತ್ಸವ ಒಂದು ಸುಸಂದರ್ಭ. ಇಲ್ಲಿ ಶಿಸ್ತು ಸಂಯಮ ಮುಖ್ಯ. ಇದು ಒಂದು ದಿನಕ್ಕೆ ಸೀಮಿತವಾಗಬಾರದು. ಸದಾ
ಮುಂದುವರಿಸಿಕೊಂಡು ಹೋದವರು ರಾಷ್ಟ್ರದ ಸತøಜೆಗಳಾಗುತ್ತಾರೆ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು
ಹೇಳಿದರು.
ಮುರುಘಾ ಮಠದ ಅನುಭವ ಮಂಟಪದ ಮುಂಭಾಗದಲ್ಲಿ ನಡೆದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಮಾನವ ಬದುಕನ್ನು ಆಗಾಗ ನಿರಾಸಕ್ತಿಯು ಸತಾಯಿಸುತ್ತದೆ. ಯಾವ ಲವಲವಿಕೆಯು ಕಂಡು ಬರುವುದಿಲ್ಲ. ಕಾರಣ
ಅದರಿಂದ ಬಿಡಿಸಿಕೊಳ್ಳಬೇಕಾಗುತ್ತದೆ. ಏನನ್ನು ಕಳೆದುಕೊಂಡರೂ ಉತ್ಸಾಹವನ್ನು ಕಳೆದುಕೊಳ್ಳಬಾರದು. ಹಾಗೆಯೇ
ಸಮಾಜದಲ್ಲಿ ನಾವು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಬಸವಣ್ಣ ಮತ್ತು ಇತರ ಶರಣರು ಸಮಾಜದಲ್ಲಿ ಅಸಮಾನತೆ ವಿರುದ್ಧ ಹೋರಾಡಿದರು.
ಅಸ್ಪೃಶ್ಯತೆ ನಿವಾರಿಸಲು ಪ್ರಯತ್ನಿಸಿದರು. ಅವರ ತತ್ವ ಸಿದ್ಧಾಂತಗಳು ನಮಗೆ ಬಹಳ ಮುಖ್ಯ. ನಾವು ಸಮಾಜಕ್ಕೆ ಸದಾ ಸೇವಕರಾಗಿರಬೇಕು.
ಅಧಿಕಾರದ ದರ್ಪ ಇರಬಾರದು. ಸ್ವಾರ್ಥದ ಬದುಕಿಗೆ ಕಡಿವಾಣ ಹಾಕಿ ನಿಸ್ವಾರ್ಥದ ಜತೆ ಸಾಗುತ್ತ ಸಮಾಜದಲ್ಲಿ ಎಲ್ಲರೂ ಸಂತೃಪ್ತ ವ್ಯಕ್ತಿಗಳಾಗಬೇಕು ಎಂದು ತಿಳಿಸಿದರು.
ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ ಹಾಗೂ ಶಾಲಾ ಕಾಲೇಜುಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಎಸ್.ಜೆ.ಎಂ. ವಿದ್ಯಾಪೀಠದ ವಿವಿಧ ಶಾಲಾ, ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸಿ ಸೇವಾನಿವೃತ್ತರಾದವರಿಗೆ, ರ್‍ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ, ಕ್ರೀಡಾ ಸಾಧಕ ಹಾಗೂ ಪಿಎಚ್.ಡಿ. ಪದವೀಧರರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.