ಕಾಯಕ ಮಹತ್ವ ಸಾರಿದ ದಾರ್ಶನಿಕ
Team Udayavani, Apr 18, 2021, 5:27 PM IST
ಚಿತ್ರದುರ್ಗ: ಕಾಯಕದಲ್ಲಿ ದೇವರನ್ನು ಕಂಡು, ಆಧ್ಯಾತ್ಮಿಕ ಚಿಂತನೆ, ಸಾಮಾಜಿಕ ಕಳಕಳಿಯಿಂದ ಉತ್ತಮ ಜೀವನ ನಡೆಸಬಹುದು ಎನ್ನುವುದನ್ನು ಆದ್ಯ ವಚನಕಾರ ದೇವರ ದಾಸಿಮಯ್ಯ ತಮ್ಮ ವಚನಗಳಲ್ಲಿ ತಿಳಿಸಿದ್ದಾರೆ ಎಂದು ಜಿಲ್ಲಾ ಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಿದ್ದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮನುಕುಲದ ಒಳತಿಗಾಗಿ ಸರಳ ಭಾಷೆಯಲ್ಲಿ ಜನರಿಗೆ ಅರ್ಥವಾಗುವಂತೆ ವಚನಗಳನ್ನು ರಚಿಸಿದ್ದಾರೆ. ಕಾಯಕ ನಿಷ್ಠೆ ಉಳ್ಳವರಾಗಿದ್ದ ದೇವರ ದಾಸಿಮಯ್ಯ ಕಾಯಕದಿಂದ ಬದುಕು ಸಾಗಿಸಬೇಕು ಎನ್ನುವುದನ್ನು ತಿಳಿಸಿಕೊಟ್ಟಿದ್ದಾರೆ ಎಂದರು.
2011-12ರಿಂದ ದೇವರ ದಾಸಿಮಯ್ಯ ಅವರ ಜಯಂತಿಯನ್ನು ಆಚರಣೆ ಮಾಡಲಾಗುತ್ತಿದೆ. ಮೊಟ್ಟ ಮೊದಲ ಬಾರಿಗೆ ದೇವರ ದಾಸಿಮಯ್ಯ ಅವರ ಹುಟ್ಟೂರಾದ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮುದನೂರು ಗ್ರಾಮದಲ್ಲಿ ಜಯಂತಿ ಆಚರಿಸಲಾಯಿತು. ದೇವರ ದಾಸಿಮಯ್ಯ ಅವರು ಆದ್ಯ ವಚನಕಾರರಾಗಿದ್ದು, ಬಸವಣ್ಣನವರಿಗಿಂತ ಪೂರ್ವದ ವಚನಕಾರರಾಗಿದ್ದಾರೆ. ರಾಮನಾಥ ಎಂಬ ಅಂಕಿತದಲ್ಲಿ ವಚನಗಳನ್ನು ರಚಿಸಿದ್ದಾರೆ ಎಂದು ತಿಳಿಸಿದರು.
ಅಪರ ಜಿಲ್ಲಾ ಧಿಕಾರಿ ಈ. ಬಾಲಕೃಷ್ಣ ಮಾತನಾಡಿ, ದೇವರ ದಾಸಿಮಯ್ಯ ಅವರು 11ನೇ ಶತಮಾನದ ಮೊಟ್ಟ ಮೊದಲ ವಚನಕಾರರು. ದೇವರ ದಾಸಿಮಯ್ಯ ನೇಕಾರ ವೃತ್ತಿಯ ಜೊತೆಗೆ ಆಧ್ಯಾತ್ಮಿಕ ವಿಚಾರಗಳನ್ನು ತಮ್ಮ ವಚನಗಳ ಮೂಲಕ ತಿಳಿಸಿದ್ದಾರೆ. ಕಾಯಕ ವೃತ್ತಿ ಹಾಗೂ ಕಾಯಕ ಶ್ರೇಷ್ಠತೆಯನ್ನು ತಮ್ಮ ವಚನಗಳ ಮೂಲಕ ಸಾರಿದ್ದಾರೆ. ತಮ್ಮ ಕಾಯಕದಲ್ಲಿಯೇ ಶ್ರದ್ಧೆಯಿಂದ ಕೆಲಸ ಮಾಡಿದರೆ ದೇವರನ್ನು ಕಾಣಬಹುದು. ಕಪಟ ಭಕ್ತಿ ಮತ್ತು ತೋರ್ಪಡಿಕೆ ಭಕ್ತಿ ತೋರದೇ ನಿಷ್ಠೆಯಿಂದ ಕಾಯಕ ಮಾಡಿದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದು ವಚನಗಳಲ್ಲಿ ತಿಳಿಸಿದ್ದಾರೆ ಎಂದರು.
ಜಿಲ್ಲಾ ವಾರ್ತಾಧಿ ಕಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ಧನಂಜಯ ಮಾತನಾಡಿ, ಬಂಡಿಗೆ ಕೀಲು ಎಷ್ಟು ಮುಖ್ಯವೋ ಜೀವನಕ್ಕೂ ವಚನಗಳು ಅಷ್ಟೇ ಮುಖ್ಯವಾಗಿವೆ. ಸಮಾಜಕ್ಕೆ ಆದರ್ಶ, ಸಿದ್ಧಾಂತ, ಅಡಿಪಾಯವನ್ನು ಹಾಕಿಕೊಟ್ಟ ವಚನಕಾರರನ್ನು ಸ್ಮರಿಸುತ್ತಾ ನಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ನೇಕಾರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್, ಕಾರ್ಯದರ್ಶಿ ಎನ್. ಆರ್. ಶಶಿಧರ, ಉಪಾಧ್ಯಕ್ಷರಾದ ನಾರಾಯಣ್ ದೊಡ್ಡಸಿದ್ದವ್ವನಹಳ್ಳಿ, ಎಚ್. ತಿಪ್ಪೇಸ್ವಾಮಿ, ಶಕಾಂಬರಿ ಮಹಿಳಾ ಸಂಘದ ಪದಾ ಧಿಕಾರಿಗಳಾದ ಎಚ್. ಮಮತಾ, ಟಿ. ಶಿವರುದ್ರಮ್ಮ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.