ಧರ್ಮ ಸಂರಕ್ಷ ಣೆಗೆ ಗಮನ ಕೊಡಿ
Team Udayavani, Apr 19, 2021, 5:26 PM IST
ಚಿತ್ರದುರ್ಗ: ಧರ್ಮವನ್ನು ನಾವು ರಕ್ಷಣೆ ಮಾಡಿದರೆ, ಆಪತ್ಕಾಲದಲ್ಲಿ ಅದು ನಮ್ಮ ರಕ್ಷಣೆಗೆ ಬರುತ್ತದೆ. ಎಲ್ಲರೂ ಧರ್ಮವನ್ನು ಅರಿತು ಪಾಲನೆ ಮಾಡಬೇಕು ಎಂದು ವೇಣುಕಲ್ಲುಗುಡ್ಡದ ಹಾಲಪ್ಪಯ್ಯ ಸ್ವಾಮಿ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದ ರಂಗಯ್ಯನಬಾಗಿಲು ಬಳಿ ಇರುವ ಉಜ್ಜಯಿನಿ ಮಠದಲ್ಲಿ ನಡೆದ ಲಿಂಗೈಕ್ಯ ಮರುಳಾರಾಧ್ಯ ಶಿವಾಚಾರ್ಯ ಭಗವತ್ಪಾದರ 26ನೇ ವರ್ಷದ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಜನ ಜಾಗೃತಿ ಕಾರ್ಯಕ್ರಮ ಹಾಗೂ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.
ರಾಜ್ಯದಲ್ಲಿ ಸರ್ಕಾರ ಮಾಡದಂತಹ ಕೆಲಸಗಳನ್ನು ನಾಡಿನ ವಿವಿಧ ಮಠಗಳು ಮಾಡುತ್ತಿವೆ. ವಿದ್ಯೆ, ಅನ್ನದಾನ ಮಾಡುವ ಮೂಲಕ ಸರ್ಕಾರದ ಹೊರೆಯನ್ನು ಕಡಿಮೆ ಮಾಡಿವೆ ಎಂದರು. ಹಿಂದೆ ರಾಜ-ಮಹಾರಾಜರು ಗುರುಗಳ ಆಜ್ಞೆಯನ್ನು ಮೀರುತ್ತಿರಲಿಲ್ಲ. ಗುರುಗಳ ಅನುಮತಿ ಸಿಕ್ಕಿದ ನಂತರವೇ ಕೆಲಸಕ್ಕೆ ಮುಂದಾಗುತ್ತಿದ್ದರು. ಚಿತ್ರದುರ್ಗದ ಮಹಾರಾಜರು ಸಹ ಮುರುಘಾ ಮಠದ ಶ್ರೀಗಳ ಆಣತಿಯಂತೆ ನಡೆಯುವ ಮೂಲಕ ಉತ್ತಮ ಆಡಳಿತ ನೀಡಿದ್ದಾರೆ. ಇಂದಿಗೂ ಗುರುವಿನ ಕಾರುಣ್ಯ ಅತ್ಯಗತ್ಯವಾಗಿದೆ. ಅದಕ್ಕೆ ಈಗಿನ ಸರ್ಕಾರಗಳೂ ಹೊರತಾಗಿಲ್ಲ ಎಂದು ತಿಳಿಸಿದರು.
ಮಾನವನಿಗೆ ಭಗವಂತ ಎಲ್ಲಾ ರೀತಿಯಾದ ಸೌಲಭ್ಯ ನೀಡಿದ್ದಾನೆ. ಗಾಳಿ, ಮಳೆ, ನೀರು, ಬೆಂಕಿಯಂತಹ ವಸ್ತುಗಳನ್ನು ನೀಡಿದ್ದಾನೆ. ಇವುಗಳ ಉಪಯೋಗ ಪಡೆದುಕೊಂಡ ಮಾನವ ದೇವರು ನಮಗೇನು ಕೊಟ್ಟಿದ್ದಾನೆ ಎಂದು ಪ್ರಶ್ನೆ ಮಾಡುವ ಮಟ್ಟಕ್ಕೆ ಬೆಳೆದಿದ್ದಾನೆ ಎಂದು ವಿಷಾದಿಸಿದರು. ಕಾರ್ಯಕ್ರಮದಲ್ಲಿ ಲಕೇಶ್ವರದ ಕರೆವಾಡಿ ಮಠದ ಶ್ರೀ ಮಳೆ ಮಲ್ಲಿಕಾರ್ಜನ ಸ್ವಾಮೀಜಿ, ಮುಸ್ಟೂರಿನ ಓಂಕಾರೇಶ್ವರ ಮಠದ ಶ್ರೀ ರುದ್ರಮುನಿ ಸ್ವಾಮಿಜಿ, ಉಜ್ಜಯನಿ ಮಠದ ನಿಯೋಜತ ಉತ್ತರಾಧಿಕಾರಿಗಳಾದ ಅಭಿಷೇಕ ದೇವರು, ಕಾರ್ಯದರ್ಶಿ ಈಶ್ವರಪ್ರಸಾದ್ ಪಾಲ್ಗೊಂಡಿದ್ದರು.
ಎಂಟು ವಟುಗಳಿಗೆ ಲಿಂಗದೀಕ್ಷೆ ನೀಡಲಾಯಿತು. ಶ್ರೀ ಮಠದಲ್ಲಿನ ಬಿಲ್ವವೃಕ್ಷಕ್ಕೆ ಶಿವದೀಕ್ಷೆ, ಲಿಂಗೈಕ್ಯ ಜಗದ್ಗುರುಗಳ ಕತೃì ಗದ್ದುಗೆಗೆ ಹಾಗೂ ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ಮಹಾ ರುದ್ರಾಭೀಷೇಕ, ಸಹಸ್ರ ಬಿಲ್ವಾರ್ಚನೆ ಮಹಾಮಂಗಳಾರತಿ ನೆರವೇರವೇರಿದವು. ಲೋಕ ಕಲ್ಯಾಣಕ್ಕಾಗಿ ಗಣಹೋಮ, ನವಗ್ರಹ ಹೋಮ, ಧನ್ವಂತರಿ ಹೋಮ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.