ಆರೋಗ್ಯ ಇಲಾಖೆ ಕಾರ್ಯಕ್ಕೆ ಕೈ ಜೋಡಿಸಿ
Team Udayavani, Apr 21, 2021, 5:00 PM IST
ಚಳ್ಳಕೆರೆ: ಕಳೆದ ಕೆಲವು ತಿಂಗಳುಗಳಿಂದ ನಿಯಂತ್ರಣದಲ್ಲಿದ್ದ ಕೊರೊನಾ ವೈರಾಣು ಎರಡನೇ ಹಂತದಲ್ಲಿ ಜನರಿಗೆ ಹೆಚ್ಚು ಭಯವನ್ನುಂಟು ಮಾಡುತ್ತಿದೆ. ಎರಡನೇ ಅಲೆ ಹೆಚ್ಚಿನ ಅಪಾಯ ತಂದೊಡ್ಡುವ ಸಂಭವವಿದ್ದು, ಇದರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕೈಗೊಳ್ಳುವ ಎಲ್ಲಾ ಜಾಗೃತಿ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಶಾಸಕ ಟಿ. ರಘುಮೂರ್ತಿ ಕರೆ ನೀಡಿದರು.
ಇಲ್ಲಿನ ಪ್ರವಾಸಿಮಂದಿರದ ಮುಂಭಾಗದಲ್ಲಿ ರೋಟರಿ ಕ್ಲಬ್, ತಾಲೂಕು ಆಡಳಿತ, ಆರೋಗ್ಯ, ಶಿಕ್ಷಣ ಮತ್ತು ಪೊಲೀಸ್ ಇಲಾಖೆ ಮತ್ತು ನಗರಸಭೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಲಸಿಕಾ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಸ್ತುತ ಸ್ಥಿತಿಯಲ್ಲಿ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಬೇಕಿದೆ. ಕೊರೊನಾ ನಿಯಂತ್ರಣಕ್ಕೆ ಲಸಿಕೆ ಪಡೆಯುವ ಜೊತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸಾಮಾಜಿಕ ಅಂತರ ಕಾಪಾಡುವುದು ಮತ್ತು ಆರೋಗ್ಯ ಜಾಗೃತಿ ಬಗ್ಗೆ ಗಮನ ಹರಿಸುವುದು ಪ್ರಮುಖವಾಗಿದೆ. ಸಾರ್ವಜನಿಕರಲ್ಲಿ ಲಸಿಕೆ ಪಡೆದರೆ ಯಾವುದೇ ಅಪಾಯವಿಲ್ಲ ಎಂಬುದನ್ನು ಮನದಟ್ಟು ಮಾಡಿಕೊಡುವ ನಿಟ್ಟಿನಲ್ಲಿ ಇಂತಹ ಜಾಥಾಗಳು ಅವಶ್ಯಕ ಎಂದರು.
ರೋಟರಿ ಕ್ಲಬ್ ಅಧ್ಯಕ್ಷ ಕೆ. ನಾಗೇಶ್ ಮಾತನಾಡಿ, ರೋಟರಿ ಕ್ಲಬ್ ಕಳೆದ ಹಲವಾರು ದಶಕಗಳಿಂದ ಆರೋಗ್ಯ ಜಾಗƒತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಲಭಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸಾಮಾಜಿಕ ಸೇವಾ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಕೊಳ್ಳುವ ಮೂಲಕ ಎಲ್ಲರಲ್ಲೂ ಆತ್ಮವಿಶ್ವಾಸವನ್ನು ಹುಟ್ಟು ಹಾಕುವ ಕೆಲಸವನ್ನು ರೋಟರಿ ಕ್ಲಬ್ ಮಾಡುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲೂ ಸಹ ಇಂತಹ ಜಾಗೃತಿ ಕಾರ್ಯಕ್ರಮ ನಡೆಸುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮೀ ಕೃಷ್ಣಮೂರ್ತಿ, ಉಪಾಧ್ಯಕ್ಷೆ ಜೈತುಂಬಿ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗೌಡ, ನಗರಸಭೆ ಸದಸ್ಯರಾದ ಸುಮಾ ಭರಮಣ್ಣ, ಕವಿತಾ ಬೋರಣ್ಣ, ರೋಟರಿ ಕ್ಲಬ್ ಹಿರಿಯ ಸದಸ್ಯರಾದ ಡಾ| ಕೆ.ಎಂ. ಜಯಕುಮಾರ್, ಎಸ್. ಜಯಪ್ರಕಾಶ್, ಕಿರಣ್, ಕೆ.ಜೆ. ಮಂಜುನಾಥ, ಕೆ.ಎ. ಮೂರ್ತಪ್ಪ, ಪೌರಾಯುಕ್ತ ಪಾಲಯ್ಯ, ಪೊಲೀಸ್ ಇನ್ಸ್‌ಪೆಕ್ಟರ್ ಜೆ.ಎಸ್.ತಿಪ್ಪೇಸ್ವಾಮಿ, ಬಿಇಒ ಕೆ.ಎಸ್. ಸುರೇಶ್, ಡಾ| ಓಂಕಾರಮೂರ್ತಿ, ಎಸ್.ಬಿ. ತಿಪ್ಪೇಸ್ವಾಮಿ ಮುಂತಾದವರು ಭಾಗವಹಿಸಿದ್ದರು.ಚ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.