ಒಲಿಂಪಿಕ್ ಸಾಧನೆ ನವ ಭಾರತಕ್ಕೆ ಸ್ಫೂರ್ತಿ
Team Udayavani, Aug 16, 2021, 3:21 PM IST
ಚಿತ್ರದುರ್ಗ : ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತ ಒಂದು ಚಿನ್ನ ಸೇರಿ 7 ಪದಕಗಳನ್ನು ಗೆಲ್ಲುವ ಮೂಲಕ ನವ ಭಾರತದ ಕ್ರೀಡಾ ಸ್ಫೂರ್ತಿಗೆ ನಾಂದಿ ಹಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಹೇಳಿದರು. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಭಾನುವಾರ ಜಿಲ್ಲಾಡಳಿತದಿಂದ ಆಯೋಜಿಸಿದ್ದ 75ನೇ ಭಾರತ ಸ್ವಾತಂತ್ರÂ ದಿನಾಚರಣೆ ಅಮೃತ ಮಹೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಭಾರತ ದೇಶ ಎಲ್ಲಾ ರಂಗಗಳಲ್ಲೂ ಪ್ರಗತಿ ಸಾಧಿ ಸುತ್ತಿದೆ. ವ್ಯವಸಾಯ, ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ, ಕ್ರೀಡೆ ಹೀಗೆ ಎಲ್ಲಾ ರಂಗಗಳಲ್ಲಿಯೂ ಭಾರತೀಯರ ಸಿಂಹ ಘರ್ಜನೆ ಇಡೀ ವಿಶ್ವದ ಮೂಲೆ ಮೂಲೆಯಲ್ಲಿ ಕೇಳಿಸುತ್ತಿದೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ, ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ದೇಶದ ಪ್ರಧಾನಮಂತ್ರಿಗಳು ಸಂಕಲ್ಪ ಮಾಡಿದ್ದಾರೆ ಎಂದರು.
ಪ್ರಸ್ತುತ ನಾವು ಅತ್ಯಂತ ಸಂಕಷ್ಟದ ಸಂದರ್ಭದಲ್ಲಿದ್ದೇವೆ. ಒಂದು ಕಡೆ ಕೋವಿಡ್ ಮೂರನೇ ಅಲೆಯ ಸವಾಲು, ಮತ್ತೂಂದು ಕಡೆ ಭೀಕರ ಪ್ರವಾಹದಿಂದ ರಾಜ್ಯದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದಿ ಗ್ಧ ಪರಿಸ್ಥಿತಿಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜನರ ಜತೆಗಿರುತ್ತವೆ ಎಂದು ಭರವಸೆ ನೀಡಿದರು.
ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನಬೂ ಆಗಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ತ್ಯಾಗ, ಬಲಿದಾನ ಸ್ಮರಣೀಯ. ಮಹಾತ್ಮ ಗಾಂಧಿಧೀಜಿ, ಸುಭಾಷ್‌ಚಂದ್ರ ಬೋಸ್, ಭಗತ್ ಸಿಂಗ್, ರಾಜಗುರು, ಸುಖದೇವ್, ಚಂದ್ರಶೇಖರ್ ಆಜಾದ್, ಬಾಲಗಂಗಾಧರ್ ತಿಲಕ್, ಡಾ| ಅಂಬೇಡ್ಕರ್, ಗೋಪಾಲಕೃಷ್ಣ ಗೋಖಲೆ, ಸರ್ದಾರ್ ವಲ್ಲಭಭಾಯಿ ಪಟೇಲ್, ಕಿತ್ತೂರು ರಾಣಿ ಚೆನ್ನಮ್ಮ, ನಿಜಲಿಂಗಪ್ಪ, ಜಗಳೂರು ಇಮಾಮ್ ಸಾಬ್, ಬಳ್ಳಾರಿ ಸಿದ್ದಮ್ಮ, ಭೀಮಪ್ಪ ನಾಯಕ ಹೀಗೆ ಅನೇಕ ಮಹನೀಯರು ಸ್ವಾತಂತ್ರÂಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಸ್ಮರಿಸಿದರು.
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಪ್ರಕ್ರಿಯೆ ಕೊನೆ ಹಂತದಲ್ಲಿದೆ. ಯೋಜನೆಯಿಂದ ಜಿಲ್ಲೆಯ 1.54 ಲಕ್ಷ ಹೆಕ್ಟೇರ್ ಹನಿ ನೀರಾವರಿ ಕ್ಷೇತ್ರಕ್ಕೆ ಅನುಕೂಲವಾಗಲಿದೆ. 204 ಕೆರೆಗಳ ಸಾಮರ್ಥ್ಯದ ಶೇ. 50ರಷ್ಟು ನೀರನ್ನು ತುಂಬಿಸಲು ಯೋಜಿಸಲಾಗಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದರು.
ಜಿಲ್ಲಾ ಖನಿಜ ಪ್ರತಿಷ್ಠಾನದಿಂದ ಕಳೆದ 5 ವರ್ಷಗಳಿಂದ 249.55 ಕೋಟಿ ರೂ. ಸಂಗ್ರಹವಾಗಿದ್ದು, ಇದರಲ್ಲಿ 92.34 ಕೋಟಿ ರೂ.ಗಳನ್ನು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಿನಿಯೋಗಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕಾಗಿ ಮೀಸಲಿಟ್ಟ 36.7 ಕೋಟಿ ರೂ. ಗಳಲ್ಲಿ 29.68 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಬಹು ದಿನಗಳ ಬೇಡಿಕೆಯಾದ ನೀರಾವರಿ, ನೇರ ರೈಲ್ವೆ ಮಾರ್ಗ, ವೈದ್ಯಕೀಯ ಕಾಲೇಜು ನಿರ್ಮಾಣ, ಕೈಗಾರಿಕೆಗಳು ನೆಲೆಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಕಟಿಬದ್ಧವಾಗಿದೆ ಎಂದರು.
ಕೊರೊನಾ ವಾರಿಯರ್ಸ್‌ಗಳಾಗಿ ಸೇವೆ ಸಲ್ಲಿಸಿದ ವಿವಿಧ ಇಲಾಖೆಗಳ ನೌಕರರನ್ನು ಸನ್ಮಾನಿಸಲಾಯಿತು. ಜಿಲ್ಲೆಯಲ್ಲಿ ನಡೆದ ನೈಜ ಘಟನೆಗಳನ್ನು ಆಧರಿಸಿದ ಬಾಲ್ಯವಿವಾಹ ಹಾಗೂ ಬಹಿರ್ದೆಸೆಗೆ ಹೋದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಗೃತಿ ನೃತ್ಯ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ, ನಗರಾಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಟಿ. ಬದರಿನಾಥ್, ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಜಿ. ರಾಧಿಕಾ, ಹೆಚ್ಚುವರಿ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ನಂದಗಾವಿ, ಉಪವಿಭಾಗಾ ಧಿಕಾರಿ ಆರ್. ಚಂದ್ರಯ್ಯ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.