ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ಸಹಾಯವಾಣಿ ಆರಂಭ
Team Udayavani, Jun 11, 2020, 2:56 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಕೋವಿಡ್ -19 ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಉಂಟಾದ ಸಾರಿಗೆ ಸಂಪರ್ಕದ ಸಮಸ್ಯೆಯಿಂದ ಯಾವುದೇ ವಿದ್ಯಾರ್ಥಿ ಪರೀಕ್ಷೆ ಬರೆಯುವುದರಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕಿದೆ. ಹೀಗಾಗಿ ಸಾರಿಗೆ ವ್ಯವಸ್ಥೆ ಅಗತ್ಯವಿರುವ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಖಾಸಗಿ ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳಲ್ಲಿ ಲಭ್ಯವಿರುವ ವಾಹನಗಳನ್ನು ನಿಯೋಜಿಸಲು ಆಯಾ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಕ್ರಮ ವಹಿಸಲಾಗಿದೆ.
ವಿದ್ಯಾರ್ಥಿಗಳಿಗೆ ಸಾರಿಗೆ ಸೌಕರ್ಯದ ಕುರಿತ ಮಾಹಿತಿಯನ್ನು ಆಯಾ ಪ್ರೌಢಶಾಲಾ ಮುಖ್ಯಸ್ಥರ ಮೂಲಕ ತಿಳಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಕುರಿತ ಯಾವುದೇ ಗೊಂದಲಗಳ ಪರಿಹಾರಕ್ಕಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಹಾಯವಾಣಿ ಪ್ರಾರಂಭಿಸಲಾಗಿದ್ದು, ಸಹಾಯವಾಣಿಗೆ ಸರ್ಕಾರಿ ರಜಾ ದಿನ ಹೊರತುಪಡಿಸಿ ಬೆಳಿಗ್ಗೆ 10 ರಿಂದ ಸಂಜೆ 5:30 ರವರೆಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಡಿಡಿಪಿಐ ರವಿಶಂಕರ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಹಾಯವಾಣಿ ಸಂಖ್ಯೆ: ಜಿಲ್ಲಾ ಸಹಾಯವಾಣಿ 08194-222259, ನೋಡಲ್
ಅಧಿಕಾರಿ-9945713933. ಉಳಿದಂತೆ ಆಯಾ ತಾಲೂಕಿನ ಸಹಾಯವಾಣಿ ಸಂಖ್ಯೆ ಹಾಗೂ ನೋಡಲ್ ಅಧಿಕಾರಿ ಸಂಖ್ಯೆ ವಿವರ ಇಂತಿದೆ. ಚಳ್ಳಕೆರೆ 08195-222296, 9886799923. ಚಿತ್ರದುರ್ಗ 08194-222236, 9620064547. ಹಿರಿಯೂರು 08193-263260, 7019451504. ಹೊಸದುರ್ಗ 08199- 230225, 8762747132. ಹೊಳಲ್ಕೆರೆ 08191-275223, 7899460068, 9113671933. ಮೊಳಕಾಲ್ಮೂರು 08198-229242, 9036456532.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.